Kannada News Karnataka ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು
ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು
ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯಾಬ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ […]
Follow us on
ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ.
ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯಾಬ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ ಆಗಿದೆ.