ಪ್ರೇಮಕುಮಾರಿ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಬಿಜೆಪಿ ನಾಯಕ ರಾಮದಾಸ್​ಗೆ ಹಿನ್ನಡೆ

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರೇಮಕುಮಾರಿ ಹಾಗೂ ರಾಮದಾಸ್​ ಪ್ರಕರಣ ಮತ್ತೆ ಸುದ್ದಿಯಾಗಿದೆ. ಪ್ರೇಮಕುಮಾರಿ ಪ್ರಕರಣದಲ್ಲಿ ಸುಪ್ರೀಕೋರ್ಟ್​ ಮೊರೆ ಹೋಗಿದ್ದ ಮಾಜಿ ಸಚಿವ ಎಸ್​.ಎ. ರಾಮದಾಸ್​ಗೆ ಹಿನ್ನಡೆಯಾಗಿದೆ. ಇದರಿಂದ ರಾಮದಾಸ್​ಗೆ ನಿರಾಸೆಯಯಾಗಿದೆ.

ಪ್ರೇಮಕುಮಾರಿ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಬಿಜೆಪಿ ನಾಯಕ ರಾಮದಾಸ್​ಗೆ ಹಿನ್ನಡೆ
Updated By: ರಮೇಶ್ ಬಿ. ಜವಳಗೇರಾ

Updated on: Sep 07, 2023 | 8:55 AM

ಮೈಸೂರು, ಸೆಪ್ಟೆಂಬರ್ 07): ಪ್ರೇಮಕುಮಾರಿ ಪ್ರಕರಣದಲ್ಲಿ ಮಾಜಿ ಸಚಿವ ಎಸ್‌.ಎ. ರಾಮದಾಸ್​ಗೆ(SA Ramdas) ಸುಪ್ರೀಂಕೋರ್ಟ್ ನಲ್ಲಿ(supreme court) ಹಿನ್ನಡೆಯಾಗಿದೆ. ವಂಚನೆ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್​​ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ. ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

ಮಾಜಿ ಸಚಿವ ರಾಮದಾಸ್ ನನ್ನನ್ನು ಮದುವೆಯಾಗುವ ನಾಟಕವಾಡಿ ದೈಹಿಕವಾಗಿ ಬಳಸಿಕೊಂಡು ಬಳಿಕ ಮೋಸ ಮಾಡಿದ್ದಾರೆ. ಮದುವೆ ಬಗ್ಗೆ ಪ್ರಸ್ತಾಪಿಸಿದಾಗ ಕೊಲೆ ಬೆದರಿಯೊಡಿದ್ದರು ಎಂದು ಪ್ರೇಮಕುಮಾರಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರಿನಲ್ಲಿ ವಂಚನೆ, ಬೆದರಿಕೆ, ಕೊಲೆ ಯತ್ನ ಸೇರಿ ಹಲವು ಆರೋಪ ಮಾಡಿದ್ದರು.

ಇದಕ್ಕೆ ಪ್ರತಿಯಾಗಿ ರಾಮದಾಸ್ ಕೂಡ ಪ್ರೇಮಕುಮಾರಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದು, ತಮ್ಮನ್ನು ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು ಎಂದು ಆರೋಪಿದ್ದರು.