AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ರಾಜ್ಯಗಳಿಗೆ ಹೊಸ ರಾಜ್ಯಪಾಲರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ

ಕರ್ನಾಟಕ ಸೇರಿ ವಿವಿಧ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ, ಉತ್ತರಾಖಂಡ,ಸಿಕ್ಕಿಂ,ಕೇರಳ, ಒಡಿಶಾ ಹಾಗೂ ತಮಿಳುನಾಡಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರ ಅಂತ್ಯವಾಗಿದ್ದು, ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನ ನೇಮಕ ಮಾಡಲಾಗಿದೆ.

6 ರಾಜ್ಯಗಳಿಗೆ ಹೊಸ ರಾಜ್ಯಪಾಲರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ
Sudha Yadav
ಹರೀಶ್ ಜಿ.ಆರ್​.
| Edited By: |

Updated on:Oct 12, 2026 | 10:42 PM

Share

ಬೆಂಗಳೂರು, (ಅಕ್ಟೋಬರ್ 12): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 12) ಪ್ರಮುಖ ರಾಜ್ಯಪಾಲರ ಹುದ್ದೆಗಳ ಮರುಹಂಚಿಕೆಯ ಭಾಗವಾಗಿ 6 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಪ್ರಸ್ತುತ ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದ್ದು, ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಇನ್ನು  ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ಮಾಜಿ ಸಂಸದೆ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಸುಧಾ ಯಾದವ್ ಅವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರು ಎನಿಸಿಕೊಂಡಿದ್ದಾರೆ. ಈ ಹಿಂದೆ 1999ರಿಂದ 2002ರವರೆಗೆ ವಿ.ಎಸ್ ರಮಾದೇವಿ ಅವರು ಕರ್ನಾಟಕದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು.

ಒಟ್ಟು 6 ರಾಜ್ಯಗಳಿಗೆ ರಾಜ್ಯಪಾಲರ ನೇಮಕ

ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೂ ಕೇರಳದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಇನ್ನು ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹಾಗೇ ಡಾ. ಧಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಹಾಗೂ ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಕರ್ನಾಟಕ ರಾಜ್ಯಪಾಲೆ ಸುಧಾ ಯಾದವ್ ಯಾರು? ಎಲ್ಲಿಯವರು?

ಥಾವರ್ ಚೆಂದ್ ಗೆಹ್ಲೋಟ್ ಅವರು 2021ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಬಂದಿದ್ದರು. ಇದೀಗ ಬರೋಬ್ಬರಿ 5 ವರ್ಷಗಳ ಬಳಿಕ ಕರ್ನಾಟಕ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದ್ದು, ಈ ಬಾರಿ ಕರ್ನಾಟಕಕ್ಕೆ ಮಹಿಳಾ ರಾಜ್ಯಪಾಲರನ್ನು ನೇಮಿಸಲಾಗಿದೆ. ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದ ಸುಧಾ ಯಾದವ್, ಐಐಟಿ ರೂರ್ಕಿಯಲ್ಲಿ ಎಂಎಸ್ಸಿ ಪದವಿ ಮುಗಿಸಿದ್ದು, ಕೆಮಿಸ್ಟ್ರಿಯಲ್ಲಿ ಪಿಹೆಚ್​ಡಿ ಪಡೆದುಕೊಂಡಿದ್ದಾರೆ. ಕಾರ್ಗಿಲ್​ ಯುದ್ಧದ ಹುತಾತ್ಮ ಡೆಪ್ಯುಟಿ ಕಮಾಂಡೆಂಟ್ ಸುಖಬೀರ್ ಸಿಂಗ್ ಪತ್ನಿ ಈ ಸುಧಾ ಯಾದವ್.

ಜಯಚಾಮರಾಜ ಒಡೆಯರ್ ಮೊದಲ ರಾಜ್ಯಪಾಲರು

ಕರ್ನಾಟಕ ತನ್ನ ಇತಿಹಾಸದಲ್ಲಿ ಇದುವರೆಗೂ 19 ರಾಜ್ಯಪಾಲರನ್ನು ಕಂಡಿದೆ. ಅವರಲ್ಲಿ ಮೈಸೂರು ಸಾಮ್ರಾಜ್ಯದ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್ ಮೊದಲಿಗರು. ರಾಜ್ಯಗಳ ಪುನರ್ ವಿಂಗಡಣೆಯಾಗಿ ಮೈಸೂರು ರಾಜ್ಯ ಸ್ಥಾಪನೆಯಾದಾಗ 1956ರ ನವೆಂಬರ್ 1ರಂದು ಮೊದಲ ರಾಜ್ಯಪಾಲರಾದವರು ಜಯಚಾಮರಾಜ ಒಡೆಯರ್. ಅವರು 1963ರ ಮೇ 4ರವರೆಗೂ, ಅಂದರೆ 6 ವರ್ಷ 184 ದಿನಗಳ ಕಾಲ ರಾಜ್ಯಪಾಲರಾಗಿದ್ದರು. ಇವರು ಕರ್ನಾಟಕ ರಾಜ್ಯಪಾಲರಾಗಿದ್ದ ಏಕೈಕ ಕನ್ನಡಿಗರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Mon, 12 October 26

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು