Bangalore: ರಾಷ್ಟ್ರಪತಿ ಆಗಮನ ಹಿನ್ನೆಲೆ ರಸ್ತೆ ಸಂಚಾರ ನಿಯಮಗಳಲ್ಲಿ ಬದಲಾವಣೆ; ಇಂದು ಸಂಜೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

Bangalore Traffic Rules: ನಗರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಸಂಚಾರ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಲಾಗಿದೆ.

Bangalore: ರಾಷ್ಟ್ರಪತಿ ಆಗಮನ ಹಿನ್ನೆಲೆ ರಸ್ತೆ ಸಂಚಾರ ನಿಯಮಗಳಲ್ಲಿ ಬದಲಾವಣೆ; ಇಂದು ಸಂಜೆಯಿಂದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ಬೆಂಗಳೂರಿಗೆ ರಾಷ್ಟ್ರಪತಿ ಆಗಮನ ಹಿನ್ನೆಲೆ ರಸ್ತೆ ಸಂಚಾರ ನಿಯಮಗಳಲ್ಲಿ ಬದಲಾವಣೆ
Follow us
TV9 Web
| Updated By: Rakesh Nayak Manchi

Updated on:Sep 26, 2022 | 10:32 AM

ಬೆಂಗಳೂರು: ನಗರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಆಗಮಿಸುತ್ತಿರುವ ಹಿನ್ನೆಲೆ ಸಂಚಾರ ನಿಯಮ (Traffic Rules)ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಲಾಗಿದೆ. ಈ ಬಗ್ಗೆ ಸಾರ್ವಜನಿಕರು ಗಮನಹರಿಸಿ ವಾಹನದಲ್ಲಿ ಸಂಚರಿಸಬೇಕಾಗಿದೆ. ಸುಗಮ ಸಂಚಾರ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಬ್ಬನ್ ಪಾರ್ಕ್ ಮತ್ತು ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕೆಲವೊಂದು ಏಕಮುಖ ರಸ್ತೆ (One Way Road)ಗಳನ್ನು ತಾತ್ಕಾಲಿಕವಾಗಿ ದ್ವಿಮುಖ ರಸ್ತೆ (Two Way Road)ಗಳನ್ನಾಗಿ ಮಾರ್ಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ನಿಯಮಗಳು ಸೆ.25ರಿಂದ ಸೆ.27ರವರೆಗೆ ಜಾರಿಯಲ್ಲಿರಲಿದೆ.

ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಭವನ ರಸ್ತೆಯನ್ನು ರಾಜಭವನ ಮುಖ್ಯದ್ವಾರದಿಂದ ಪೊಲೀಸ್ ತಿಮ್ಮಯ್ಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಲಾಗಿದೆ. ವಿಧಾನಸೌಧದ ನಿರ್ಗಮನ ದ್ವಾರ (ಗೇಟ್ ನಂ.4)ದಲ್ಲಿ ಪ್ರವೇಶ ನಿಷೇಧವಿದ್ದು, ಸೆ.27ರ ವರೆಗೆ ರಾಷ್ಟ್ರಪತಿಯವರು ಸಂಚರಿಸುವ ಸಮಯದಲ್ಲಿ ಮುಕ್ತ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ.

ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಿಚ್ಮಂಡ್ ರಸ್ತೆಯಲ್ಲಿ ರಿಚ್ಮಂಡ್ ವೃತ್ತದಿಂದ ಬಾಲ್ಡ್​ವಿನ್ ಬಾಲಕಿಯರ ಶಾಲೆಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಲಾಗಿದೆ. ರಾಷ್ಟ್ರಪತಿಯವರು ಸಂಚರಿಸುವ ಸಮಯದಲ್ಲಿ ಮಾತ್ರ ಅನುವು ಮಾಡಿಕೊಡಲಾಗಿದೆ.

ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ

  1. ಸೆ.26ರ ಸಂಜೆ 5.30ರಿಂದ 6 ಗಂಟೆಯವರೆಗೆ ಹಳೇ ವಿಮಾನ ನಿಲ್ದಾಣ ರಸ್ತೆ- ಎಂ.ಜಿ.ರೂಡ್- ಡಿಕನ್ಸನ್ ರಸ್ತೆ- ಕೆ.ಆರ್.ರಸ್ತೆ – ಕಬ್ಬನ್ ರಸ್ತೆ ಮತ್ತು ರಾಜಭವನ ರಸ್ತೆ
  2. ಸೆ.27ರಂದು ಬೆಳಗ್ಗೆ 9.30ರಿಂದ 11.30ರ ವರೆಗೆ ರಾಜಭವನ ರಸ್ತೆ- ಇನ್​ಫೆಂಟ್ರಿ ರಸ್ತೆ- ಕೆ.ಆರ್.ರಸ್ತೆ – ಕಬ್ಬನ್ ರಸ್ತೆ- ಡಿಕನ್ಸನ್ ರಸ್ತೆ – ಎಂ.ಜಿ.ರೋಡ್ – ಹಳೇ ವಿಮಾನ ನಿಲ್ದಾಣ ರಸ್ತೆ ಮತ್ತು ಸುರಂಜನ್​ದಾಸ್ ರಸ್ತೆ
  3. ಸೆ.28ರಂದು ಬೆಳಗ್ಗೆ 9.00 ಗಂಟೆಯಿಂದ 9.30ರ ವರೆಗೆ ರಾಜಭವನ ರಸ್ತೆ- ಇನ್​ಫೆಂಟ್ರಿ ರಸ್ತೆ- ಕೆ.ಆರ್.ರಸ್ತೆ – ಕಬ್ಬನ್ ರಸ್ತೆ – ಡಿಕನ್ಸನ್ ರಸ್ತೆ- ಎಂ.ಜಿ.ರಸ್ತೆ ಮತ್ತು ಹಳೇ ವಿಮಾನ ನಿಲ್ದಾಣ ರಸ್ತೆ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:32 am, Mon, 26 September 22

ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ