ಬೆಂಗಳೂರು: ನಗರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಆಗಮಿಸುತ್ತಿರುವ ಹಿನ್ನೆಲೆ ಸಂಚಾರ ನಿಯಮ (Traffic Rules)ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು, ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಲಾಗಿದೆ. ಈ ಬಗ್ಗೆ ಸಾರ್ವಜನಿಕರು ಗಮನಹರಿಸಿ ವಾಹನದಲ್ಲಿ ಸಂಚರಿಸಬೇಕಾಗಿದೆ. ಸುಗಮ ಸಂಚಾರ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಬ್ಬನ್ ಪಾರ್ಕ್ ಮತ್ತು ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕೆಲವೊಂದು ಏಕಮುಖ ರಸ್ತೆ (One Way Road)ಗಳನ್ನು ತಾತ್ಕಾಲಿಕವಾಗಿ ದ್ವಿಮುಖ ರಸ್ತೆ (Two Way Road)ಗಳನ್ನಾಗಿ ಮಾರ್ಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ನಿಯಮಗಳು ಸೆ.25ರಿಂದ ಸೆ.27ರವರೆಗೆ ಜಾರಿಯಲ್ಲಿರಲಿದೆ.
ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಭವನ ರಸ್ತೆಯನ್ನು ರಾಜಭವನ ಮುಖ್ಯದ್ವಾರದಿಂದ ಪೊಲೀಸ್ ತಿಮ್ಮಯ್ಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಲಾಗಿದೆ. ವಿಧಾನಸೌಧದ ನಿರ್ಗಮನ ದ್ವಾರ (ಗೇಟ್ ನಂ.4)ದಲ್ಲಿ ಪ್ರವೇಶ ನಿಷೇಧವಿದ್ದು, ಸೆ.27ರ ವರೆಗೆ ರಾಷ್ಟ್ರಪತಿಯವರು ಸಂಚರಿಸುವ ಸಮಯದಲ್ಲಿ ಮುಕ್ತ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ.
ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಿಚ್ಮಂಡ್ ರಸ್ತೆಯಲ್ಲಿ ರಿಚ್ಮಂಡ್ ವೃತ್ತದಿಂದ ಬಾಲ್ಡ್ವಿನ್ ಬಾಲಕಿಯರ ಶಾಲೆಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಲಾಗಿದೆ. ರಾಷ್ಟ್ರಪತಿಯವರು ಸಂಚರಿಸುವ ಸಮಯದಲ್ಲಿ ಮಾತ್ರ ಅನುವು ಮಾಡಿಕೊಡಲಾಗಿದೆ.
ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:32 am, Mon, 26 September 22