AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಚುನಾವಣೆ: ಇಂದು ರಾಜ್ಯಕ್ಕೆ ಬರಲಿವೆ ಮತದಾನದ ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಮತದಾನದ ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್​​ಗಳನ್ನು ಇಂದು (ಜುಲೈ 12) ನವದೆಹಲಿಯ ಭಾರತ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ಆಯಾ ರಾಜ್ಯಗಳಿಗೆ ರವಾನಿಸಲಾಗಿದೆ.

ರಾಷ್ಟ್ರಪತಿ ಚುನಾವಣೆ: ಇಂದು ರಾಜ್ಯಕ್ಕೆ ಬರಲಿವೆ ಮತದಾನದ ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್
ಮತದಾನದ ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ರಾಜ್ಯಕ್ಕೆ ರವಾನೆ
TV9 Web
| Edited By: ವಿವೇಕ ಬಿರಾದಾರ|

Updated on:Jul 12, 2022 | 10:33 PM

Share

ಬೆಂಗಳೂರು: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ (Presidential election)  ಹಿನ್ನೆಲೆಯಲ್ಲಿ ಮತದಾನದ (Voting) ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್​​ಗಳನ್ನು (Ballot box) ಇಂದು (ಜುಲೈ 12) ನವದೆಹಲಿಯ (Delhi) ಭಾರತ ಚುನಾವಣಾ ಆಯೋಗದ (Election commission of India) ಕೇಂದ್ರ ಕಚೇರಿಯಿಂದ ಆಯಾ ರಾಜ್ಯಗಳಿಗೆ ರವಾನಿಸಲಾಗಿದೆ. ನಮ್ಮ ರಾಜ್ಯದ ಬ್ಯಾಲೆಟ್ ಜರ್ನಿಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ವಹಿಸಿಕೊಂಡಿದ್ದಾರೆ. ಇಂದು ಸಂಜೆ ನವದೆಹಲಿಯಿಂದ ನಿರ್ಗಮಿಸಿ ರಾತ್ರಿ 8:15 ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ.

ಈ ವಿಶೇಷ ಬ್ಯಾಲೆಟ್ ಜರ್ನಿಯ ಮುಖಾಂತರ ರಾಜ್ಯಕ್ಕೆ ಆಗಮಿಸುವ ಮತದಾನದ ಸಾಮಾಗ್ರಿಗಳನ್ನು ವಿಧಾನಸೌಧದಲ್ಲಿ ಇದಕ್ಕಾಗಿ ಮೀಸಲಿಟ್ಟಿರುವ ಕೊಠಡಿ ಸಂಖ್ಯೆ 108 ರಲ್ಲಿ (Strong Room) ಶೇಖರಿಸಿಡಲಾಗುವುದು.

ಇಂದು ರಾತ್ರಿ 9 ಗಂಟೆಗೆ ವಿಧಾನಸೌಧ ತಲುಪಲಿರುವ ಈ ವಿಶೇಷ ಬ್ಯಾಲೆಟ್ ಜರ್ನಿಯನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಸಹಾಯಕ ಚುನಾವಣಾಧಿಕಾರಿ ಶ್ರೀಮತಿ ವಿಶಾಲಾಕ್ಷಿ ಅವರು ಸ್ವಾಗತಿಸಲಿದ್ದಾರೆ..

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿತ್ತು. ಜುಲೈ 18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿ ನೇತೃತ್ವದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ  ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು  ಅವರ ಹೆಸರನ್ನು ಘೋಷಿಸಲಾಗಿದೆ. ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರ ಹೆಸರನ್ನು ಘೋಷಿಸಲಾಗಿದೆ.

ಕಾಂಗ್ರೆಸ್​ ಪಕ್ಷದ ಎಲ್ಲಾ ಶಾಸಕರಿಗೆ ವಿಪ್ ಜಾರಿ

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ತನ್ನ ಪಕ್ಷದ ಶಾಸಕರು ರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಪರ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಿದೆ.

Published On - 2:58 pm, Tue, 12 July 22

Follow Us
TV9 Web
TV9 Web

TV9 Kannada

Read More
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ