Draupadi Murmu: ಎಚ್ಡಿ ದೇವೇಗೌಡರನ್ನು ಭೇಟಿ ಮಾಡಿದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನು ಭೇಟಿಯಾದರು.
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನು ಭೇಟಿಯಾದರು.
ದ್ರೌಪದಿ ಮುರ್ಮು ಅವರು ಎಚ್ಡಿ ದೇವೇಗೌಡ, ಎಚ್ಡಿ ಕುಮಾರಸ್ವಾಮಿ, ಎಚ್ಡಿ ರೇವಣ್ಣ ಅವರ ಬಳಿ ಬೆಂಬಲ ಕೋರಿದ್ದಾರೆ. ಪದ್ಮನಾಭ ನಗರದ ನಿವಾಸದಲ್ಲಿ ಭೇಟಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಸಿಎಂ ಬೊಮ್ಮಾಯಿ, ಸಿಟಿ ರವಿ, ಪ್ರಹ್ಲಾದ ಜೋಷಿ ಹಾಜರಿದ್ದರು. ರಾಷ್ಟ್ರಪತಿ ಚುನಾವಣೆ ಇದೇ 18ರಂದು ನಡೆಯಲಿದ್ದು, ಇಲ್ಲಿನ ಶಾಸಕರ ಬೆಂಬಲವನ್ನು ಕೋರಲು ಆಗಮಿಸಿದ್ದಾರೆ.
ಮುರ್ಮು ಅವರು ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು. 2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು.
ಶಿಕ್ಷಣದ ಪೂರೈಸಿದ ಬಳಿಕ ಒಡಿಶಾ ಸರ್ಕಾರದ ನೀರಾವರಿ ಇಲಾಖೆಯಲ್ಲಿ ಕೆಲಸ, ಬಳಿಕ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಈ ನಡುವೆ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯಾಗಿದ್ದರು.
Published On - 7:54 pm, Sun, 10 July 22