ಮೈಸೂರು ದಸರಾ ಮಹೋತ್ಸವ ಉದ್ಘಾಟಕರನ್ನು ಬದಲಿಸುವಂತೆ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ
ಮೈಸೂರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಹಿಂದೂ ಜಾಗರಣ ವೇದಿಕೆಯ ಸದಸ್ಯರೊಬ್ಬರು ವಿಗ್ರಹಾರಾಧನೆ, ಕನ್ನಡ ತಾಯಿಯನ್ನು ದ್ವೇಷಿಸುವ ಮತ್ತು ಮತಾಂಧರಿಂದ ದಸರಾ ಉದ್ಘಾಟನೆ ಮಾಡಿಸುವುದು ಬೇಡವೆಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿಕೊಳ್ಳುತ್ತೇವೆ, ಅಷ್ಟಕ್ಕೂ ಅವರು ತಮ್ಮ ನಿಲುವಿಗೆ ಬದ್ಧರಾಗಿದ್ದರೆ ದೇಶದಾದ್ಯಂತ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಬೆಂಗಳೂರು, ಆಗಸ್ಟ್ 29: ಮೈಸೂರು ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್ (Banu Mushtaq) ಆವರಿಂದ ಮಾಡಿಸಬಾರದು ಎಂಬ ಒತ್ತಡ ಸರಕಾರದ ಮೇಲೆ ದಿನೇದಿನೆ ಹೆಚ್ಚುತ್ತಿದೆ. ಹಿಂದೂ ಜಾಗರಣ ವೇದಿಕೆಯ ಮೈಸೂರು ಘಟಕವು ಇಂದು ಜಿಲ್ಲಾಧಿಕಾರಿಗಳಿಗೆ ಪತ್ರವೊಂದನ್ನು ನೀಡಿ ದಸರಾ ಉದ್ಘಾಟನೆಯನ್ನು ಬೇರೆಯವರಿಂದ ಮಾಡಿಸುವಂತೆ ಸರ್ಕಾರವನ್ನು ಆಗ್ರಹಿಸಿತು. ಆದರೆ ಸರ್ಕಾರ ತನ್ನ ನಿಲುವಿನ ಬಗ್ಗೆ ಅಚಲವಾಗಿದೆ. ವಿವಾದ ಶುರುವಾದಾಗಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಹೇಳಿಕೆಯನ್ನೂ ನೀಡಲ್ಲ. ಆದರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸುತ್ತಿದ್ದಾರೆ. ಅವರು ಚಾಮುಂಡಿ ಬೆಟ್ಟ ಕೇವಲ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ನೀಡಿದ ಹೇಳಿಕೆ ಭಾರೀ ವಿವಾದಕ್ಕೀಡಾಗಿದೆ.
ಇದನ್ನೂ ಓದಿ: ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಅಂತ ಕುಮಾರಸ್ವಾಮಿಯನ್ನು ಕೇಳಬೇಕಿತ್ತೇ? ಚಲುವರಾಯಸ್ವಾಮಿ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

