AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಸಂಕಷ್ಟ: ಕಾಂತರಾಜ್, ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ

ಕಾಂತರಾಜ್ ವರದಿ ಸ್ವೀಕಾರಕ್ಕೆ ಸಿದ್ಧತೆ ನಡೆಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೇಲೆ ನ್ಯಾ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ ಹೇರಲಾಗುತ್ತಿದೆ. ನ್ಯಾ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ದಲಿತ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾಂತರಾಜ್ ವರದಿ, ನ್ಯಾ. ಸದಾಶಿವ ವರದಿ ಅನುಷ್ಠಾನಕ್ಕೆ ಒತ್ತಾಯಿಸಲಾಗಿದೆ.

ಸರ್ಕಾರಕ್ಕೆ ಸಂಕಷ್ಟ: ಕಾಂತರಾಜ್, ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ
ಸಿದ್ದರಾಮಯ್ಯImage Credit source: PTI
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi|

Updated on: Nov 06, 2023 | 4:02 PM

Share

ಬೆಂಗಳೂರು, ನ.6: ಕಾಂತರಾಜ್ ವರದಿ (Kantharaj Report) ಸ್ವೀಕಾರಕ್ಕೆ ಸಿದ್ಧತೆ ನಡೆಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೇಲೆ ನ್ಯಾ. ಸದಾಶಿವ ಆಯೋಗ (Justice Sadashiva Commission) ವರದಿ ಅನುಷ್ಠಾನಕ್ಕೆ ಒತ್ತಡ ಹೇರಲಾಗುತ್ತಿದೆ. ನ್ಯಾ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ದಲಿತ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾಂತರಾಜ್ ವರದಿ, ನ್ಯಾ. ಸದಾಶಿವ ವರದಿ ಅನುಷ್ಠಾನಕ್ಕೆ ಒತ್ತಾಯಿಸಲಾಗಿದೆ.

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಗರದ ಸ್ಕೌಟ್ ಆ್ಯಂಡ್ ಗೈಡ್ಸ್​ನ ಕೊಂಡಜ್ಜಿ ಬಸವಪ್ಪ ಸಭಾಂಗಣದಲ್ಲಿ ಆಹಾರ ಸಚಿವ ಕೆ.ಎಚ್. ಸಚಿವ ಮುನಿಯಪ್ಪ ಸಮ್ಮುಖದಲ್ಲಿ ಮಾದಿಗ ಸಮುದಾಯದ ಮುಖಂಡರ ಸಭೆ ನಡೆಯಿತು.

ಇದನ್ನೂ ಓದಿ: ಕಾಂತರಾಜ್ ವರದಿಯೇ ನನ್ನ ಕೈಸೇರಿಲ್ಲ, ಆಗಲೇ ವಿರೋಧ ಅಂದ್ರೆ ಹೇಗೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಸಭೆಯಲ್ಲಿ ಕಾಂತರಾಜ್ ವರದಿ, ನ್ಯಾ ಸದಾಶಿವ ವರದಿ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು. ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವೇಳೆ ಸಮುದಾಯ ಪರಿಗಣಿಸುವಂತೆ ಆಗ್ರಹಿಸಲಾಯಿತು. ಸಭೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ, ಶಾಸಕ ಬಸವಂತಪ್ಪ, ಮಾಜಿ ಸಚಿವ ಎಚ್ ಆಂಜನೇಯ, ಎಂಎಲ್​ಸಿ ಡಿ ತಿಮ್ಮಯ್ಯ ಭಾಗಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ