AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ, ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ; ಸಂಸದೆ ಸುಮಲತಾ

ದೆಹಲಿಯಲ್ಲಿ ಇರುವಾಗ ಮಂಡ್ಯದಲ್ಲಿ ಇರಲ್ಲ ಎಂದು ಟ್ರೋಲ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ನನ್ನ ಟ್ರೋಲ್ ಮಾಡಿದ್ರೆ ಜನ ನಂಬಲ್ಲ. ಜನರಿಗೂ ಗೊತ್ತಿದೆ. ಸಂಸತ್ ನಡೆಯುವುದರಿಂದ ನಾನು ಅಲ್ಲಿ ಇರುತ್ತೀನಿ.

ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ, ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ; ಸಂಸದೆ ಸುಮಲತಾ
ಸುಮಲತಾ ಅಂಬರೀಷ್​ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on:Jul 11, 2021 | 12:28 PM

Share

ಬೆಂಗಳೂರು: ಅಂಬರೀಶ್ ಅಭಿಮಾನಿಗಳು ನೊಂದುಕೊಳ್ಳುವುದು ಸಹಜ ಎಂದು ರಾಜಭವನದಲ್ಲಿ ಹೇಳಿಕೆ ನೀಡಿದ ಮಂಡ್ಯ ಸಂಸದೆ ಸುಮಲತಾ, ನಾವು ಅಡ್ಡದಾರಿಯಲ್ಲಿ ಹೋಗುವುದು ಬೇಡ. ನಮ್ಮ ನೋವನ್ನು ಶಾಂತಿಯುತವಾಗಿ ಹೇಳೋಣ. ನಾನು ಅವರ ವಿರುದ್ಧ ಹೋರಾಟ ಮಾಡಿಲ್ಲ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಅಷ್ಟೆ. ನಾನು ಯಾರನ್ನೂ ಟಾರ್ಗೆಟ್ ಮಾಡಿ ಪಾಲಿಟಿಕ್ಸ್ ಮಾಡಿಲ್ಲ. ಈಗಾಗಲೇ 2 ಬಾರಿ ಗಣಿಗಾರಿಕೆ ವಿಚಾರ ಪ್ರಸ್ತಾಪಿಸಿದ್ದೇನೆ. ಇನ್ನುಮುಂದೆ ಮತ್ತಷ್ಟು ಹೆಚ್ಚಾಗಿ ವಿಚಾರ ಪ್ರಸ್ತಾಪಿಸುತ್ತೇನೆಂದು ಹೇಳಿದರು.

ಮೂರ್ನಾಲ್ಕು ದಿನಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಭೇಟಿಗೆ ಅವಕಾಶ ನೀಡಲಿದ್ದಾರೆ. ದಾಖಲೆ ಕೊಡಬೇಕಾಗಿರುವುದು ನಾನಲ್ಲ, ಅಧಿಕಾರಿಗಳು. ಕಠಿಣ ಕ್ರಮಕೈಗೊಳ್ಳಲು ನಾನು ಮನವಿ ಮಾಡುತ್ತೇನೆ ಅಷ್ಟೆ ಎಂದು ಮಾತನಾಡಿದ ಸಂಸದೆ, ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ ಎಂಬುದು ಗೊತ್ತಿದೆ. ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಇರುವಾಗ ಮಂಡ್ಯದಲ್ಲಿ ಇರಲ್ಲ ಎಂದು ಟ್ರೋಲ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ನನ್ನ ಟ್ರೋಲ್ ಮಾಡಿದ್ರೆ ಜನ ನಂಬಲ್ಲ. ಜನರಿಗೂ ಗೊತ್ತಿದೆ. ಸಂಸತ್ ನಡೆಯುವುದರಿಂದ ನಾನು ಅಲ್ಲಿ ಇರುತ್ತೀನಿ. ಜನರಿಗೂ ಇದು ಗೊತ್ತಾಗುತ್ತೆ ಅಂತಾ ಹೇಳಿದರು. ಕುಮಾರಸ್ವಾಮಿ ಕದನ ವಿರಾಮ ಬಗ್ಗೆ ನನ್ನ ಗಮನ ಇಲ್ಲ. ನನ್ನ ಗಮನ ಅಕ್ರಮ ಗಣಿಗಾರಿಕೆ ನಿಲ್ಲಿಸುವುದು. ನಾನು ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನಾನು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.

ನಡೆಯುತ್ತಿರುವ ವಿಚಾರದ ಬಗ್ಗೆ ಬೆಳಗ್ಗೆ ಟ್ವೀಟ್ ಮಾಡಿದ್ದೇನೆ. ಈಗ ನಡೆಯುತ್ತಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಸಾರ್ವಜನಿಕ ವಲಯದಲ್ಲಿ ಇದ್ದಾಗ ಯಾವ ರೀತಿ ಇರಬೇಕು ಅನ್ನೋದನ್ನ ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ಮಾರ್ಗದರ್ಶನದಲ್ಲಿ ನಾವು ಹೋಗಬೇಕು. 3 ವಾರಗಳ ಹಿಂದೆ ಕೆಆರ್​ಎಸ್​ ಡ್ಯಾಮ್ ಉಳಿಸಬೇಕು. ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ಹೇಳಿದ್ದೇನೆ. ಇದರ ಬಗ್ಗೆ ನಿರಂತರವಾಗಿ ನಮ್ಮ ಹೋರಾಟ ಇರುತ್ತದೆ. ಯಾರು ಪ್ರತಿಭಟನೆಯನ್ನು ಮುಂದುವರಿಸಬಾರದು ಎಂದು ಅಂಬರೀಶ್ ಅಭಿಮಾನಿಗಳಲ್ಲಿ ಸುಮಲತಾ ಮನವಿ ಮಾಡಿದರು.

ಇದನ್ನೂ ಓದಿ

ಸುಮಲತಾ, ಕುಮಾರಸ್ವಾಮಿ ವಾಕ್ ಸಮರ; ಅಂಬಿ ಅಭಿಮಾನಿಗಳಿಂದ ಪ್ರತಿಭಟನೆ

ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ: ಮಂಡ್ಯ ಸಂಸದೆ ಸುಮಲತಾ ಟ್ವೀಟ್

Preventing illegal mining is difficult but we will continue our fight said Sumalatha Ambareesh

Published On - 12:14 pm, Sun, 11 July 21

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ