ಬೆಳಗಾವಿ ಸರ್ಕಾರಿ ಆಸ್ಪತ್ರೆಯಲ್ಲಿಯೇ ಕುಳಿತು ಮಹಿಳಾ ಸಿಬ್ಬಂದಿ ಭರ್ಜರಿ ಎಣ್ಣೆ ಪಾರ್ಟಿ! ಫೋಟೋಸ್ ಫುಲ್ ವೈರಲ್..
ಬೆಳಗಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿ ಆಸ್ಪತ್ರೆಯಲ್ಲಿಯೇ ಕುಳಿತು ಮದ್ಯಪಾನ ಸೇವಿಸುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿ: ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿ ಧೂಮಪಾನ ಮತ್ತು ಮದ್ಯಪಾನ ಮಾಡಿರುವುದು ತಿಳಿದು ಬಂದಿದೆ. ಆಸ್ಪತ್ರೆಯಲ್ಲಿಯೇ ಕುಳಿತು ಮದ್ಯ ಸೇವಿಸುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡಿ ಗ್ರೂಪ್ ಸಿಬ್ಬಂದಿ ಸಾರಿಕಾ ಮತ್ತು ಗುತ್ತಿಗೆ ಆಧಾರದ ಸ್ಟಾಫ್ ನರ್ಸ್ ಶೈಲಾ ಇಬ್ಬರು ಸೇರಿ ಆರೋಗ್ಯ ಕೇಂದ್ರದಲ್ಲೇ ಕುಳಿತು ಎಣ್ಣೆ ಪಾರ್ಟಿ ಮಾಡಿದ್ದಾರೆ. ಆಸ್ಪತ್ರೆಯಲ್ಲೇ ಸಿಗರೇಟ್ ಸೇದಿ, ಮದ್ಯ ಸೇವಿಸುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತದೆ. ಮದ್ಯದ ನಶೆಯಲ್ಲಿಯೇ ಸ್ಟಾಫ್ ನರ್ಸ್ ಚಿಕಿತ್ಸೆ ನೀಡುತ್ತಾರೆ ಎಂದು ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿಯೇ ಕುಳಿತು ಧೂಮಪಾನ, ಮದ್ಯಪಾನ ಮಾಡಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬಾಗಲೂರು: ಮದ್ಯ ಸೇವಿಸಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಪತಿಯನ್ನೇ ಬಿಟ್ಟು ಹೋದ ಪತ್ನಿ
ಮದ್ಯಪಾನ ರಂಪಾಟದ ಜೊತೆಗೆ DySP ಲಕ್ಷ್ಮೀ ವಿರುದ್ಧ ಇತ್ತು ಮತ್ತೊಂದು ಗಂಭೀರ ಆರೋಪ!
Published On - 11:21 am, Fri, 19 March 21