ಬೆಂಗಳೂರು: ನೇಮಕಾತಿ ಆದೇಶ(Recruitment order) ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು(Teachers) ಬೆಂಗಳೂರಿನ(Bengaluru) ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ರಾಜ್ಯದ ಮೂಲೆ ಮಲೆಗಳಿಂದ ಆಗಮಿಸಿರುವ ಶಿಕ್ಷಕರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನೇಮಕವಾದ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ. 2022ರ ಮೇ ತಿಂಗಳಿನಲ್ಲಿ ನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆಯನ್ನು ಸುಮಾರು 70 ಸಾವಿರ ಅಭ್ಯರ್ಥಿಗಳು ಬರೆದಿದ್ದರು. ಅದರಲ್ಲಿ 13352 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ ಕೆಲವು ಅಭ್ಯರ್ಥಿಗಳು ನೇಮಕದ ವಿಷಯದ ಆಧಾರದಲ್ಲಿ ಕೋರ್ಟ್ ಮೊರೆ ಹೋಗಿದ್ದರ ಪರಿಣಾಮ ಉಳಿದವರ ನೇಮಕಾತಿ ವಿಳಂಬವಾಗುತ್ತಿದೆ. ಯಾವುದೇ ಕಾನೂನು ತೊಡಕು ಇಲ್ಲದಿದ್ದರೂ ನೇಮಕಗೊಂಡಿರುವ 13 ಸಾವಿರ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿದ್ದು ಈ ಕೂಡಲೇ ನೇಮಕದ ಪ್ರಕ್ರಿಯೆ ವುರುಕುಗೊಳಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟಿದ್ದಾರೆ.
ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮುಖ್ಯ ಆಯ್ಕೆಪಟ್ಟಿ ಪ್ರಕಟ
ನೇಮಕಾತಿ ವಿಳಂಬದಿಂದ ಹಲವಾರು ಸಮಸ್ಯೆ ಎದುರಿಸಬೇಕಾಗಿದೆ. ಬಹುಪಾಲು ಅಭ್ಯರ್ಥಿಗಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನೇಮಕಾತಿ ಪಟ್ಟಿಯಲ್ಲಿ ನಮ್ಮ ಹೆರಿಸುವುದರಿಂದ ಖಾಸಗಿ ಸಂಸ್ಥೆಗಳು ಕೆಲಸದಿಂದ ಕೈಬಿಡುತ್ತಿದ್ದು ಅಂತ್ರರಾಗುವ ಸ್ಥಿತಿ ಇದೆ ಎಂದು ಪ್ರತಿಭಟನಾನಿರತ ಶಿಕ್ಷಕರು ನೋವು ತೋಡಿಕೊಂಡರು.
ದಾಖಲಾತಿಗಳ ಪರಿಶೀಲನೆ ಕಾರಣಕ್ಕೆ ಮೂಲ ದಾಖಲಾತಿಗಳನ್ನು ಇಲಾಖೆಗೆ ಕೊಟ್ಟಿರುವುದರಿಂದ ಬೇರೆ ಕಡೆ ಉದ್ಯೋಗ ಹುಡುಕಲು ಸಾಧ್ಯವಾಗುತ್ತಿಲ್ಲ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹತ್ತಿರದಲ್ಲಿದ್ದು ನೀತಿ ಸಂಹಿತೆ ಜಾರಿಯಾಗುವ ಆತಂಕವೂ ನಮ್ಮನ್ನು ಕಾಡುತ್ತಿದೆ ಎಂದರು.
ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದವರಿಗೂ ಜಾತಿ ಮತ್ತು ಆದಾಯ ಸಿಂಧುತ್ವ ಕೇಳುತ್ತಿರುವುದು ಯಾವ ನ್ಯಾಯ? ವಿಳಂಬವಾಗಿ ನೇಮಕಾತಿ ಆದೇಶ ನೀಡಿದರೆ ನಮ್ಮ ಮಕ್ಕಳ ಶಿಕ್ಷಣಕ್ಕೂ ಸಮನಸ್ಯೆಯಾಗುತ್ತಿದ್ದು ಈ ಕೂಡಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಪರಿಹಾರ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ವಿಧಾನಸಭೆ ಚುನಾವಣಾ ಫಲಿತಾಂಶದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ವಿಧಾನಸಭೆ ಕಲಾಪ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಲು ಶಿಕ್ಷಕರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ಕುಳಿತಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ