AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Railway Station: ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲಿಗಳಿಂದ ಮಾಡಿದ ಆಕೃತಿಗೆ ಪ್ರಧಾನಿ ಮೆಚ್ಚುಗೆ

ಬೆಂಗಳೂರಿನ ನೈಋತ್ಯ ರೈಲ್ವೆಯು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತು ವಿಶಿಷ್ಟ ಜಾಗೃತಿ ಅಭಿಯಾನವನ್ನು ನಡೆಸಿತು. ಇದು ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಶ್ಲಾಘನೆಯನ್ನೂ ಪಡೆದಿದೆ.

Bangalore Railway Station: ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲಿಗಳಿಂದ ಮಾಡಿದ ಆಕೃತಿಗೆ ಪ್ರಧಾನಿ ಮೆಚ್ಚುಗೆ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 04, 2022 | 1:10 PM

Share

ಭಾರತದ ಎಲ್ಲಾ ಮೆಟ್ರೋಪಾಲಿಟನ್ ನಗರಗಳಲ್ಲಿ, ವಿಶೇಷವಾಗಿ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಒಂದು ದೊಡ್ಡ ಸವಾಲಾಗಿದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರಿನ ನೈಋತ್ಯ ರೈಲ್ವೆಯು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಕುರಿತು ವಿಶಿಷ್ಟ ಜಾಗೃತಿ ಅಭಿಯಾನವನ್ನು ನಡೆಸಿತು. ಇದು ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಶ್ಲಾಘನೆಯನ್ನೂ ಪಡೆದಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್‌) ರೈಲು ನಿಲ್ದಾಣದ ಸಿಬ್ಬಂದಿ ಸೋಮವಾರ ರೈಲು ನಿಲ್ದಾಣದ ಸುತ್ತಮುತ್ತ ಬಿದ್ದಿದ್ದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಂಗ್ರಹಿಸಿ ಪ್ಲಾಸ್ಟಿಕ್‌ ತ್ಯಾಜ್ಯದಿಂದ ಮೂರ್ತಿ ತಯಾರಿಸಿದರು. ಶಿಲ್ಪದ ಮೇಲಿರುವ ಫಲಕದಲ್ಲಿ, ಈ ಶಿಲ್ಪವನ್ನು ಕಳೆದ 12 ಗಂಟೆಗಳಲ್ಲಿ ಸಂಗ್ರಹಿಸಲಾದ ಸಾವಿರಾರು ಪ್ಲಾಸ್ಟಿಕ್ ನೀರಿನ ಬಾಟಲಿಗಳಿಂದ ಮಾಡಲಾಗಿದೆ. ಈ ಎಲ್ಲಾ ಪ್ಲಾಸ್ಟಿಕ್ ಬಾಟಲಿಗಳನ್ನು ರೈಲ್ವೆ ನಿಲ್ದಾಣದಲ್ಲಿ ಮತ್ತು ಸುತ್ತಮುತ್ತ ಎಸೆದಿದ್ದರು.

ಜನನಿಬಿಡ ಪ್ರದೇಶವಾಗಿರುವ ರೈಲು ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪ್ಲಾಸ್ಟಿಕ್ ಬಾಟಲಿಗಳಿಂದ ನಿರ್ಮಿಸಲಾಗಿರುವ ರಾಕ್ಷಸ ಆಕಾರದ ಶಿಲ್ಪ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ನೈಋತ್ಯ ರೈಲ್ವೆಯ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದು, ಪ್ಲಾಸ್ಟಿಕ್ ತ್ಯಾಜ್ಯದ ಸರಿಯಾದ ವಿಲೇವಾರಿ ಕುರಿತು ಜಾಗೃತಿ ಮೂಡಿಸಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಮತ್ತು ಪೆಟ್ ಬಾಟಲ್‌ಗಳಿಂದ ಬೊಂಬೆ ಆಕಾರವನ್ನು ಮಾಡಿದೆ. ಹಬ್ಬ ಆರಂಭವಾಗಿದ್ದು, ಜನರ ಓಡಾಟವು ಹೆಚ್ಚಾಗಿದ್ದು, ಕೆಎಸ್‌ಆರ್‌ ರೈಲು ನಿಲ್ದಾಣದ ಸಿಬ್ಬಂದಿಗೆ ರೈಲ್ವೆ ನಿಲ್ದಾಣದ ಸುತ್ತಮುತ್ತ ಪ್ಲಾಸ್ಟಿಕ್‌ ಬಾಟಲಿಗಳು ಪತ್ತೆಯಾಗಿವೆ.

ಇದನ್ನು ಓದಿ: ನಿನ್ನೆ ರಾತ್ರಿ ಜಮ್ಮುವಿನ ಡಿಜಿಪಿ ಹೇಮಂತ್ ಲೋಹಿಯಾ ಬರ್ಬರ ಹತ್ಯೆ; ಕೊನೆಗೂ ಸಿಕ್ಕಿಬಿದ್ದ ಹಂತಕ

ಪ್ರಧಾನಿ ಮೋದಿ ಕೂಡ ರೈಲ್ವೆ ಅಧಿಕಾರಿಗಳ ಪ್ರಯತ್ನದಿಂದ ಪ್ರಭಾವಿತರಾಗಿದ್ದಾರೆ ಮತ್ತು ಇದು ಶ್ಲಾಘನೀಯ ವಿಚಾರ ಎಂದು ಅವರು ತಮ್ಮ ಟ್ವೀಟ್​ನಲ್ಲಿ ಬರೆದಿದ್ದಾರೆ, ಇಂತಹ ಪ್ರಯತ್ನಗಳು ನವೀನ ಮತ್ತು ಶ್ಲಾಘನೀಯ ಮಾತ್ರವಲ್ಲ, ಆದರೆ ಮುಖ್ಯವಾಗಿ ನಮ್ಮ ಸುತ್ತಮುತ್ತಲಿನ ಮತ್ತು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ನಮ್ಮ ಮೂಲಭೂತ ನಾಗರಿಕ ಕರ್ತವ್ಯವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.

Published On - 1:10 pm, Tue, 4 October 22