ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ (HD Devegowda) ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ (PM Naredra Modi) ಅವರು ಶುಭಕೋರಿದ್ದಾರೆ. ಟ್ವೀಟ್ ಮೂಲಕ ಶುಭಕೋರಿದ ಪ್ರಧಾನಿ ಮೋದಿ ದೇವರು ನಿಮಗೆ ದೀರ್ಘಾಯುಷ್ಯ ನೀಡಲೆಂದು ಪ್ರಾರ್ಥಿಸುವೆ ಎಂದು ಶುಭಾಯಶಯ ತಿಳಿಸಿದ್ದಾರೆ.
Birthday greetings to our former PM and respected statesman Shri @H_D_Devegowda Ji. May Almighty bless him with a long and healthy life.
ಇದನ್ನೂ ಓದಿ
Karnataka Rain: ರಾಜ್ಯದ ವಿವಿಧೆಡೆ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ, ಹಾಸನದಲ್ಲಿ ಶಾಲೆಗಳಿಗೆ ರಜೆ
‘ಸಾರಾ ವಜ್ರ’ ಟ್ರೇಲರ್ ನೋಡಿ ಬೆಂಬಲ ನೀಡಿದ ಶಿವಣ್ಣ; ಮುಖ್ಯ ಪಾತ್ರ ಮಾಡಿದ ಖುಷಿಯಲ್ಲಿ ಅನು ಪ್ರಭಾಕರ್
Ramya Divya Spandana: ಚೇತನಾ ರಾಜ್ ನಿಧನದ ಬಗ್ಗೆ ರಮ್ಯಾ ಪ್ರತಿಕ್ರಿಯೆ; ಚಿತ್ರರಂಗದ ಕಹಿ ಸತ್ಯದ ಕುರಿತು ಮೌನ ಮುರಿದ ನಟಿ
ಕಣ್ಣು ಆಪರೇಷನ್ ಮಾಡಿಸುವ ನೆಪದಲ್ಲಿ ಬಂದು ದರೋಡೆ! ತುಮಕೂರು ವೃದ್ಧ ದಂಪತಿಗೆ ವಂಚಿಸಿ ಆಭರಣ ದೋಚಿ ಪರಾರಿ
ಹೆಚ್.ಡಿ. ದೇವೇಗೌಡರ ಹುಟ್ಟಿದ ಹಬ್ಬಕ್ಕೆ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಇಂದು ಬೆಳಗ್ಗೆ ದೇವೇಗೌಡರ ನಿವಾಸಕ್ಕೆ ಆಗಮಿಸಿ ಶುಭಕೋರಿ ಆಶೀರ್ವದಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತಾ, ನಮ್ಮ ನಾಡಿಗೆ ಅವರ ಮಾರ್ಗದರ್ಶನ ಇನ್ನಷ್ಟು ದೀರ್ಘಕಾಲ ದೊರಕಲಿ ಎಂದು ಆಶಿಸುತ್ತೇನೆ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.
ಹಿರಿಯ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ ಎಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತಾ, ನಮ್ಮ ನಾಡಿಗೆ ಅವರ ಮಾರ್ಗದರ್ಶನ ಇನ್ನಷ್ಟು ದೀರ್ಘಕಾಲ ದೊರಕಲಿ ಎಂದು ಆಶಿಸುತ್ತೇನೆ. @H_D_Devegowdapic.twitter.com/ZMOEfZ5Sgv
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಭಾರತದ ಮಾಜಿ ಪ್ರಧಾನಮಂತ್ರಿಗಳು, ಮಣ್ಣಿನಮಗ, ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು ಹಾಗೂ ನನ್ನ ಗೌರವಪೂರ್ವಕ ಪ್ರಣಾಮಗಳು ಎಂದು ಶುಭಾಶಯ ತಿಳಿಸಿದ್ದಾರೆ. ಹಾಗೇ ಅಲ್ಪಕಾಲವಷ್ಟೇ ಅಧಿಕಾರದಲ್ಲಿದ್ದರೂ ಕರ್ನಾಟಕ ಮತ್ತು ಭಾರತಕ್ಕೆ ಆವಿಸ್ಮರಣೀಯ ಕೊಡುಗೆ ನೀಡಿದವರು ಇವರು. ಕಾಯಾ ವಾಚಾ, ಮನಸಾ ಜನರ ಉದ್ಧಾರಕ್ಕಾಗಿ ಶ್ರಮಿಸಿದ ಅವರು ಭಾರತದ ರಾಜಕೀಯ ಕರ್ಮಯೋಗಿ. ತೊಂಬತ್ತರ ಹರೆಯದಲ್ಲೂ ಜನರಪರ ಹೋರಾಟ ನಡೆಸುತ್ತಿರುವ ಧಣಿವರಿಯದ ಕಾಯಕಯೋಗಿಯಾಗಿದ್ದಾರೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಕರ್ನಾಟಕದ ಗೃಹ ಮಂತ್ರಿ ಆರಗ ಜ್ಞಾನೇಂದ್ರ, ಸಚಿವ ಮುರುಗೇಶ್ ನಿರಾಣಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಕೂಡ ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಸದಾ ನನ್ನ ಕೈಹಿಡಿದು ಮುನ್ನಡೆಸಿದ ಅವರು ನನ್ನ ಪಾಲಿಗೆ ತಂದೆಯಷ್ಟೇ ಅಲ್ಲ; ಗುರು, ದೈವ, ಶಕ್ತಿಯೂ ಹೌದು. ನನಗಷ್ಟೇ ಅಲ್ಲ, ಈ ನಾಡಿಗೆ, ದೇಶಕ್ಕೆ ಇನ್ನಷ್ಟು ದೀರ್ಘಕಾಲ ಅವರ ಸೇವೆ-ಮಾರ್ಗದರ್ಶನ ಅಗತ್ಯವಿದೆ. ಆ ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ.