ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

ಮೈಸೂರು ಅರಮನೆಯಲ್ಲಿ ಇಂದು ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಯಿತು.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ
ಅಮ್ಮನ ತೋಳಲ್ಲಿ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್
Follow us
ಆಯೇಷಾ ಬಾನು
|

Updated on:Jan 03, 2021 | 1:35 PM

ಮೈಸೂರು: ಇಂದು ಅರಮನೆಯಲ್ಲಿ ವಿಶೇಷ ಸಂಭ್ರಮ, ಸಡಗರ ಮನೆ ಮಾಡಿತ್ತು. ಯಾಕಂದ್ರೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಯ ಏಕೈಕ ಕುಲ ಪುತ್ರ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್​ ಹುಟ್ಟುಹಬ್ಬವನ್ನು ಇಂದು ಆಚರಿಸಲಾಗಿದೆ.

ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗಿದ್ದು, ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಆಧ್ಯವೀರರಿಗೆ ಸಮಸ್ತ ಸನ್ಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಗನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಹಾಗೂ ಅಮ್ಮನ ತೋಳಲ್ಲಿ ಆಧ್ಯವೀರ್ ನಲಿದಾಡಿದ ಫೋಟೋಗಳನ್ನು ಫೋಸ್ಟ್ ಮಾಡಿದ್ದಾರೆ.

ಡಿಸೆಂಬರ್ 6ಕ್ಕೆ ಮೈಸೂರಿನ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರಿಗೆ 3 ವರ್ಷ ತುಂಬುತ್ತೆ. ಆದರೆ ಅರಮನೆಯ ವಿಶಿಷ್ಟ ಪದ್ದತಿಯಂತೆ ಅಂದೇ ಹುಟ್ಟುಹಬ್ಬವನ್ನು ಆಚರಿಸುವ ರೂಢಿ ಇಲ್ಲ. ಬದಲಿಗೆ ಹುಟ್ಟುಹಬ್ಬವನ್ನು ಹೆಚ್ಚಿಸಿ ಆಚರಿಸಲಾಗುತ್ತೆ. ಈ ರೀತಿ ಮಾಡುವುದರಿಂದ ಯುವರಾಜನ ಆಯುಷ್ಯ ವೃದ್ಧಿಯಾಗುತ್ತೆ ಎಂಬ ನಂಬಿಕೆ ಇದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ರೂಢಿ.

Published On - 1:33 pm, Sun, 3 January 21

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ