ಖಾಸಗಿ ಬಸ್​ ಸಂಚಾರ ಇರುತ್ತೆ: ಖಾಸಗಿ ಬಸ್ ಮಾಲೀಕರ ಫೆಡರೇಷನ್ ಸ್ಪಷ್ಟನೆ

ಫ್ರೀಡಂಪಾರ್ಕ್​ನಲ್ಲಿ ಖಾಸಗಿ ಬಸ್​ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಖಾಸಗಿ ಬಸ್​ ಓಡಾಟ ಬಂದ್​ ಮಾಡುತ್ತೇವೆ ಎಂದು ಹೇಳಿದ್ದರು. ಇದು ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಮೂಡಿಸಿತ್ತು

ಖಾಸಗಿ ಬಸ್​ ಸಂಚಾರ ಇರುತ್ತೆ: ಖಾಸಗಿ ಬಸ್ ಮಾಲೀಕರ ಫೆಡರೇಷನ್ ಸ್ಪಷ್ಟನೆ
ಸಾಂದರ್ಭಿಕ ಚಿ್ತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 13, 2020 | 10:37 PM

ಬೆಂಗಳೂರು: ಖಾಸಗಿ ಬಸ್​ ಮಾಲೀಕರ ಸಂಘವು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿತ್ತು. ಅಲ್ಲದೆ ಸೋಮವಾರ (ಡಿ.14) ಖಾಸಗಿ ಬಸ್​ಗಳ ಸಂಚಾರವೂ ರಾಜ್ಯದಲ್ಲಿ ಸ್ತಬ್ಧವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಸ್ ಮಾಲೀಕರ ಫೆಡರೇಷನ್ ಅಧ್ಯಕ್ಷ ರಾಜಶೇಖರ್ ನಾಳೆ ಖಾಸಗಿ ಬಸ್​ಗಳು ರಸ್ತೆಗೆ ಇಳಿಯಲಿವೆ ಎಂದಿದ್ದಾರೆ.

ಫ್ರೀಡಂಪಾರ್ಕ್​ನಲ್ಲಿ ಖಾಸಗಿ ಬಸ್​ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಮಾತನಾಡಿ, ಖಾಸಗಿ ಬಸ್​ ಓಡಾಟ ಬಂದ್​ ಮಾಡುತ್ತೇವೆ ಎಂದು ಹೇಳಿದ್ದರು. ಇದು ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಮೂಡಿಸಿತ್ತು. ಈಗ ಈ ಬಗ್ಗೆ ಸ್ಪಷ್ಟನೆ ಸಿಕ್ಕಿರೋದು ಸಾರ್ವಜನಿಕರಿಗೆ ನಿಟ್ಟುಸಿರು ಬಿಡುವಂತಾಗಿದೆ. ನಾಳೆ ನಾವು ಖಾಸಗಿ ಬಸ್‌ಗಳನ್ನು ರಸ್ತೆಗಿಳಿಸುತ್ತೇವೆ. ಪ್ರಯಾಣಿಕರು ಆತಂಕಪಡುವ ಅಗತ್ಯವಿಲ್ಲ, ಎಂದಿದ್ದಾರೆ.

ಉಲ್ಟಾ ಹೊಡೆದಿದ್ದ ಚಂದ್ರು ವಿಕಾಸಸೌಧದಲ್ಲಿ ಇಂದು KSRTC ಸಂಘದ ರಾಜ್ಯಾಧ್ಯಕ್ಷ ಚಂದ್ರು ಅವರೊಂದಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೇರಿ ಅನೇಕರು ಸಂಧಾನ ಮಾತುಕತೆ ನಡೆಸಿದ್ದರು. ಮಾತುಕತೆ ಮುಗಿಸಿ ಹೊರ ಬಂದ ನಂತರ ಮಾತನಾಡಿದ್ದ ಚಂದ್ರು, ಸಂಧಾನ ಯಶಸ್ವಿ ಆಗಿದೆ ಎಂದು ಹೇಳಿದ್ದರು. ಆದರೆ, ಫ್ರೀಡಂ ಪಾರ್ಕ್​ ಬಂದ ನಂತರದಲ್ಲಿ ಚಂದ್ರು ಉಲ್ಟಾ ಹೊಡೆದಿದ್ದರು. ಸರ್ಕಾರದ ಜತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಬೇಕಿದೆ. ಈಗಿನ ಮಾತುಕತೆ ವಿಫಲವಾಗಿದೆ. ಹೀಗಾಗಿ, ಯಾರೂ ಬಸ್​ ತೆಗೆಯಬಾರದು ಎಂದು ಕೋರಿದ್ದರು.

ಬಸ್ ಚಾಲನೆಗೆ ಮುಂದಾಗಲಿರುವ ನೌಕರರಿಗೆ ಭದ್ರತೆ ಸಾರಿಗೆ ಮುಷ್ಕರದ ನಡುವೆಯೇ ಸರ್ಕಾರ ಸಿಬ್ಬಂದಿಗೆ ಆಫರ್​ ಒಂದನ್ನು ನೀಡಿದೆ. ನಾಳೆ ಬಸ್​ ಸಂಚಾರ ಮಾಡಲು ಮುಂದಾಗುವ ನೌಕರರಿಗೆ ಭದ್ರತೆ ಒದಗಿಸುತ್ತೇವೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಮುಷ್ಕರದ ನಡುವೆಯೂ ಓಡಾಡಿದ್ದ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಹೀಗಾಗಿ, ಅನೇಕ ಚಾಲಕರು ಬಸ್​ ಚಾಲನೆ ಮಾಡೋಕೆ ಹಿಂಜರಿದಿದ್ದರು. ಅಂಥವರಿಗೆ ಈ ಆಫರ್​ ನೀಡಲಾಗಿದೆ.

ಮುಷ್ಕರ ಕೈಬಿಡಿ: ಸಾರಿಗೆ ನಿಗಮ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಕರೆ

Published On - 10:36 pm, Sun, 13 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ