ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು 7 IAS, 7 IPS​ ಅಧಿಕಾರಿಗಳ ನೇಮಕ

ಬೆಂಗಳೂರು: BBMP ಆಯುಕ್ತರು ಅಥವಾ ಸಂಬಂಧಿಸಿದ ಅಧಿಕಾರಿಗಳು ಸೂಚಿಸಿದ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಶೇಕಡಾ 50ರಷ್ಟು ಬೆಡ್​ ನೀಡಬೇಕು. ಜೊತೆಗೆ ಖಾಸಗಿ ಆಸ್ಪತ್ರೆಗಳು NDMA​ ಆ್ಯಕ್ಟ್​ನಡಿ ಕೊವಿಡ್​ ಸೋಂಕಿತರನ್ನು ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು ಎಂಬ ಆದೇಶವನ್ನು ಸರ್ಕಾರ ಹೊರಡಿಸಿದೆ. ಇದಲ್ಲದೆ,ಕೆಲವು ಖಾಸಗಿ ಆಸ್ಪತ್ರೆಗಳು ಶೇಕಡಾ 50ರಷ್ಟು ಬೆಡ್​ ನೀಡಲು ನಿರಾಕರಿಸಿದ ಮಾಹಿತಿ ಬಂದ ಕಾರಣ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು 7 IAS ಹಾಗೂ 7 IPS​ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ […]

ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು 7 IAS, 7 IPS​ ಅಧಿಕಾರಿಗಳ ನೇಮಕ
ಸಾಧು ಶ್ರೀನಾಥ್​

Updated on: Jul 19, 2020 | 7:46 PM

ಬೆಂಗಳೂರು: BBMP ಆಯುಕ್ತರು ಅಥವಾ ಸಂಬಂಧಿಸಿದ ಅಧಿಕಾರಿಗಳು ಸೂಚಿಸಿದ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಶೇಕಡಾ 50ರಷ್ಟು ಬೆಡ್​ ನೀಡಬೇಕು. ಜೊತೆಗೆ ಖಾಸಗಿ ಆಸ್ಪತ್ರೆಗಳು NDMA​ ಆ್ಯಕ್ಟ್​ನಡಿ ಕೊವಿಡ್​ ಸೋಂಕಿತರನ್ನು ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು ಎಂಬ ಆದೇಶವನ್ನು ಸರ್ಕಾರ ಹೊರಡಿಸಿದೆ.

ಇದಲ್ಲದೆ,ಕೆಲವು ಖಾಸಗಿ ಆಸ್ಪತ್ರೆಗಳು ಶೇಕಡಾ 50ರಷ್ಟು ಬೆಡ್​ ನೀಡಲು ನಿರಾಕರಿಸಿದ ಮಾಹಿತಿ ಬಂದ ಕಾರಣ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು 7 IAS ಹಾಗೂ 7 IPS​ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಚಿಕಿತ್ಸೆ ನಿರಾಕರಿಸದಂತೆ ಸರ್ಕಾರ ಖಡಕ್ ಸೂಚನೆ ನೀಡಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us