ಹತ್ತನೇ ತರಗತಿ ಪರೀಕ್ಷೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ; ಆಗಲೇ ಪಿಯು ಫೀಸ್ ಕಟ್ಟಿಸಿಕೊಳ್ಳುತ್ತಿವೆ ಕೆಲ ಖಾಸಗಿ ಕಾಲೇಜುಗಳು

ಕೊರೊನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್​ಡೌನ್ ಕಾರಣದಿಂದ ಹಲವು ಕುಟುಂಬಗಳು ಶಾಲಾ ಶುಲ್ಕ ಪಾವತಿಸಲು ಕಷ್ಟಪಡುತ್ತಿದ್ದಾರೆ. ಉದ್ಯೋಗ ನಷ್ಟ ಹಾಗೂ ಕಡಿಮೆ ಸಂಬಳದ ಕಾರಣದಿಂದಲೂ ಹಲವರು ಸಂಕಷ್ಟಕ್ಕೆ ಈಡಾಗಿದ್ದಾರೆ.

ಹತ್ತನೇ ತರಗತಿ ಪರೀಕ್ಷೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ; ಆಗಲೇ ಪಿಯು ಫೀಸ್ ಕಟ್ಟಿಸಿಕೊಳ್ಳುತ್ತಿವೆ ಕೆಲ ಖಾಸಗಿ ಕಾಲೇಜುಗಳು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 21, 2021 | 10:13 AM

ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆಗೂ ಮುನ್ನವೇ ಪಿಯುಸಿಗೆ ಪ್ರವೇಶಾತಿ ನೀಡುತ್ತಿರುವ ಬಗ್ಗೆ ಪೋಷಕರಿಂದ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಪದವಿ ಪೂರ್ವ ಕಾಲೇಜಿಗೆ ದಾಖಲಾತಿ ಆರಂಭಿಸಲಾಗಿದೆ. ಲಾಕ್‌ಡೌನ್ ಹಿನ್ನೆಲೆ ಆನ್‌ಲೈನ್ ಮೂಲಕವೇ ಪ್ರವೇಶಾತಿ ಮಾಡಲಾಗುತ್ತಿದೆ. ಪರೀಕ್ಷೆಗೂ ಮುನ್ನವೇ ದಾಖಲಾತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿದೆ.

ಕೆಲ ಪಾಲಕರು ಮಕ್ಕಳ ಭವಿಷ್ಯ ನೆನದು ಅರ್ಧ ಶುಲ್ಕ ಪಾವತಿಸಿ ಸೀಟ್ ಬ್ಲಾಕ್ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಲಾಕ್​ಡೌನ್​ನಿಂದ ಕಾಲೇಜುಗಳು ಬಂದ್ ಆಗಿವೆ. ಹೀಗಾಗಿ ಕೆಲ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ಪ್ರವೇಶ ಪರೀಕ್ಷೆ ನಡೆಸುತ್ತಿವೆ.

ಇನ್ನೂ ಸಿಬಿಎಸ್​ಇ ಅಥವಾ ರಾಜ್ಯ ಸರ್ಕಾರದಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ನಿಗಧಿಯಾಗಿಲ್ಲ. 2021-22 ನೇ ಸಾಲಿನ ಪಿಯು ಪ್ರವೇಶ ಪ್ರಕ್ರಿಯೆ ಮಾರ್ಗಸೂಚಿ ಹೊರಡಿಸಿಲ್ಲ. ಆಗಲೇ ಕೆಲ ಖಾಸಗಿ ಕಾಲೇಜುಗಳು ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಇಂಥ ಕಾಲೇಜುಗಳ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.

2021-22ನೇ ಶೈಕ್ಷಣಿಕ ವರ್ಷದಲ್ಲಿ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಪೂರ್ಣ ಪ್ರಮಾಣದ ಶುಲ್ಕ ತುಂಬುವಂತೆ ಒತ್ತಡ ಹೇರುತ್ತಿವೆ ಎಂಬ ವರದಿ ಬೆನ್ನಲ್ಲೇ ಮತ್ತೊಂದು ರೀತಿಯ ವಿಚಾರ ಕೂಡ ಬಹಿರಂಗವಾಗಿದೆ. ಕೆಲವು ಶಾಲಾ-ಕಾಲೇಜುಗಳು ವಾರ್ಷಿಕ ಶುಲ್ಕದಲ್ಲಿ ಡಿಸ್ಕೌಂಟ್ ನೀಡಿ ಫೀಸ್ ತುಂಬಿಸಿಕೊಳ್ಳುತ್ತಿವೆ. ಸುಮಾರು ಶೇ. 10ರಿಂದ ಶೇ. 30 ರಷ್ಟು ಶಾಲಾ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತಿದೆ. ಕಳೆದ ಬಾರಿಯ ಟ್ಯೂಷನ್ ಫೀಸ್​ನ ಆಧಾರದ ಮೇಲೆ ಈ ಬಾರಿ ಡಿಸ್ಕೌಂಟ್ ನೀಡುತ್ತಿದ್ದಾರೆ.

ಕರ್ನಾಟಕ ಪ್ರಾಥಮಿಕ ಹಾಗೂ ಸೆಕೆಂಡರಿ ಶಾಲೆ ಒಕ್ಕೂಟದ ಸಹ ಕಾರ್ಯದರ್ಶಿ ಡಿ.ಡಿ. ಶಶಿಕುಮಾರ್, ಶೇ. 10ರಿಂದ ಶೇ. 20ರಷ್ಟು ರಿಯಾಯಿತಿ ನೀಡುವಂತೆ ನಾವು ಸೂಚಿಸುತ್ತೇವೆ ಎಂದು ತಿಳಿಸಿದ್ದಾರೆ. ನಮ್ಮೆಲ್ಲಾ ಸದಸ್ಯ ಶಾಲೆಗಳಿಗೆ ಈ ಬಗ್ಗೆ ಸೋಮವಾರ ಸಲಹೆ ನೀಡುತ್ತೇವೆ. ಮಾನವೀಯ ನೆಲೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್​ಡೌನ್ ಕಾರಣದಿಂದ ಹಲವು ಕುಟುಂಬಗಳು ಶಾಲಾ ಶುಲ್ಕ ಪಾವತಿಸಲು ಕಷ್ಟಪಡುತ್ತಿದ್ದಾರೆ. ಉದ್ಯೋಗ ನಷ್ಟ ಹಾಗೂ ಕಡಿಮೆ ಸಂಬಳದ ಕಾರಣದಿಂದಲೂ ಹಲವರು ಸಂಕಷ್ಟಕ್ಕೆ ಈಡಾಗಿದ್ದಾರೆ.

ಕಳೆದ ಬಾರಿ ಶಾಲಾ ಶುಲ್ಕ ಕಟ್ಟಿದ್ದವರು ಪರಿಸ್ಥಿತಿಯನ್ನು ಗಮನಿಸಿದ್ದರು. ಅಂಥವರು ಈ ಬಾರಿ ಶುಲ್ಕ ಕಟ್ಟುವ ಬಗ್ಗೆ ಯೋಚಿಸುವಂಗತಾಗಿತ್ತು. ಹಾಗಾಗಿ, ಶಾಲಾ ಕಾಲೇಜುಗಳು ಶುಲ್ಕ ಕಡಿತಗೊಳಿಸಿವೆ. ಹಾಗೆಂದು ಈ ವಿಭಾಗಕ್ಕೆ ಎಲ್ಲಾ ಶಾಲಾ ಕಾಲೇಜುಗಳನ್ನು ಪರಿಗಣಿಸುವಂತಿಲ್ಲ. ಬಹುತೇಕ ಶಾಲೆಗಳು ಶುಲ್ಕದಲ್ಲಿ ಏರಿಕೆಯನ್ನೇ ಮಾಡಿವೆ. ಮೂಲಗಳ ಮಾಹಿತಿ ಪ್ರಕಾರ ಕೆಲ ಶಾಲೆಗಳು ಶೇ. 6 ಹಾಗೂ ಶೇ. 8ರಷ್ಟು ವಾರ್ಷಿಕ ಶುಲ್ಕದಲ್ಲಿ ಏರಿಕೆ ಮಾಡಿವೆ.

ಇದನ್ನೂ ಓದಿ: CBSE 12th Board Exams 2021: ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ರದ್ದಿಲ್ಲ; ಜೂನ್ 1ರಂದು ಅಂತಿಮ ತೀರ್ಮಾನ ಪ್ರಕಟಗೊಳ್ಳುವ ಸಂಭವ

Karnataka PUC Exam 2021: ದ್ವಿತೀಯ ಪಿಯು ಪರೀಕ್ಷೆ ಅನಿವಾರ್ಯ,ಕೊವಿಡ್ ನಂತರ ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ಸಿದ್ಧವಿದೆ: ಸಚಿವ ಸುರೇಶ್ ಕುಮಾರ್

Published On - 5:08 pm, Mon, 24 May 21

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್