School Fees: 2021-22ನೇ ಸಾಲಿನ ಬೋಧನಾ ಶುಲ್ಕ ಹೆಚ್ಚಳ ಇಲ್ಲ; ಸಭೆಯಲ್ಲಿ ಹಲವು ನಿರ್ಧಾರ

2021-22 ನೇ ಸಾಲಿನ ಶುಲ್ಕದ ವಿಚಾರವಾಗಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ರುಪ್ಸಾ ಒಕ್ಕೂಟ ಒಪ್ಪಿಗೆಯಿದೆ. ಶುಲ್ಕದ ವಿಚಾರವಾಗಿ ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡರು ಅದರ ಪರವಾಗಿ ನಿಲ್ಲುತ್ತೇವೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಾವು ಸಹಕರಿಸಬೇಕಿದೆ ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ.

School Fees: 2021-22ನೇ ಸಾಲಿನ ಬೋಧನಾ ಶುಲ್ಕ ಹೆಚ್ಚಳ ಇಲ್ಲ; ಸಭೆಯಲ್ಲಿ ಹಲವು ನಿರ್ಧಾರ
ಸಾಂದರ್ಭಿಕ ಚಿತ್ರ
Follow us
| Updated By: sandhya thejappa

Updated on:Jun 14, 2021 | 11:24 AM

ಬೆಂಗಳೂರು: 2021-22ನೇ ಸಾಲಿನಲ್ಲಿ ಖಾಸಗಿ ಶಾಲೆಗಳ ಫೀಸ್ ವಿಚಾರಕ್ಕೆ ಸಂಬಂಧಿಸಿ ರುಪ್ಸಾದಿಂದ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಈ ವರ್ಷದ ಶುಲ್ಕ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 2021-22ನೇ ಸಾಲಿನ ಬೋಧನಾ ಶುಲ್ಕ ಹೆಚ್ಚಳ ಮಾಡಲ್ಲ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯಲ್ಲಿ ರುಪ್ಸಾ ಒಕ್ಕೂಟ ತೆಗೆದುಕೊಂಡ ನಿರ್ಣಯಗಳು 1. 2021-22 ನೇ ಸಾಲಿನ ಬೋಧನಾ ಶುಲ್ಕ ಹೆಚ್ಚಳ ಇಲ್ಲ. 2. 2021-22 ನೇ ಶೈಕ್ಷಣಿಕ ವೇಳಾಪಟ್ಟಿ ನಿರ್ದೇಶನದಂತೆ ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸಬೇಕು. 3. ಕಂತುಗಳಲ್ಲಿ ಶುಲ್ಕ ಕಟ್ಟಲು ಪೋಷಕರಿಗೆ ಅವಕಾಶ. 4. ಪೋಷಕರಿಗೆ ಶುಲ್ಕದ ವಿಚಾರವಾಗಿ ಟಾರ್ಚರ್ ಕೊಡುತ್ತಿರುವ ಶಾಲೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ. 5. ಕಳೆದ ವರ್ಷ ಶೇ.30 ರಷ್ಟು ಶುಲ್ಕ ಕಡಿತಕ್ಕೆ ರುಪ್ಸಾ ಒಕ್ಕೂಟ ಒಪ್ಪಿಗೆ ಸೂಚಿಸಿತ್ತು. ಕಳೆದ ವರ್ಷದ ಶುಲ್ಕ ಪೋಷಕರು ಪಾವತಿ ಮಾಡಿಲ್ಲ. ಕಳೆದ ವರ್ಷ ಬಾಕಿ ಶುಲ್ಕ ಪಾವತಿ ಮಾಡಲು ಸರ್ಕಾರ ನಿರ್ದೇಶನ ನೀಡಬೇಕು.

2021-22 ನೇ ಸಾಲಿನ ಶುಲ್ಕದ ವಿಚಾರವಾಗಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ರುಪ್ಸಾ ಒಕ್ಕೂಟ ಒಪ್ಪಿಗೆಯಿದೆ. ಶುಲ್ಕದ ವಿಚಾರವಾಗಿ ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡರು ಅದರ ಪರವಾಗಿ ನಿಲ್ಲುತ್ತೇವೆ. ಕೊರೊನಾ ಸಂಕಷ್ಟ ಕಾಲದಲ್ಲಿ ನಾವು ಸಹಕರಿಸಬೇಕಿದೆ ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

ಶಿಕ್ಷಣ ಸಚಿವರ ವಿರುದ್ಧ ಅಸಮಧಾನ ಹೊರಹಾಕಿದ ಖಾಸಗಿ ಶಾಲೆಗಳ ಒಕ್ಕೂಟ; ಇಂದು ಸಭೆಗೆ ನಿರ್ಧಾರ

School Fees: ಪೋಷಕರಿಂದ ಫೀಸ್ ವಸೂಲಿ ಮಾಡುವಲ್ಲಿ ಖಾಸಗಿ ಶಾಲೆಗಳ ಜತೆ ಖಾಸಗಿ ಫೈನಾನ್ಸ್​ಗಳು ಶಾಮೀಲು: ಸಚಿವ ಸುರೇಶ್ ಕುಮಾರ್

(private school fees would not be increased It was decided at the RUPSA meeting)

Published On - 11:24 am, Mon, 14 June 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು