ಶಿಕ್ಷಣ ಸಚಿವರ ವಿರುದ್ಧ ಅಸಮಧಾನ ಹೊರಹಾಕಿದ ಖಾಸಗಿ ಶಾಲೆಗಳ ಒಕ್ಕೂಟ; ಇಂದು ಸಭೆಗೆ ನಿರ್ಧಾರ

ಪೋಷಕರಿಗೆ ಫೀಸ್ ಕೇಳಿದ್ರೆ ಸಚಿವರೂ ದೂರು ನೀಡಿ ಅನ್ನೊದು ಎಷ್ಟರ ಮಟ್ಟಿಗೆ ಸರಿ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕದ ಬಗ್ಗೆ ನಿಗದಿಯಾಗಿಲ್ಲ. ಈಗ ಪೆಟ್ರೋಲ್, ಡೀಸೆಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ಯಾವುದೇ ಶಿಕ್ಷಣ ಸಂಸ್ಥೆ ಶುಲ್ಕವನ್ನು ಏರಿಕೆ ಮಾಡಿಲ್ಲ. ನಾವು ಕಳೆದ ವರ್ಷದ ಬಾಕಿ ಶುಲ್ಕ ಪಾವತಿಗೆ ಆಗ್ರಹಿಸುತ್ತಿದ್ದೇವೆ.

ಶಿಕ್ಷಣ ಸಚಿವರ ವಿರುದ್ಧ ಅಸಮಧಾನ ಹೊರಹಾಕಿದ ಖಾಸಗಿ ಶಾಲೆಗಳ ಒಕ್ಕೂಟ; ಇಂದು ಸಭೆಗೆ ನಿರ್ಧಾರ
ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us
TV9 Web
| Updated By: sandhya thejappa

Updated on:Jun 13, 2021 | 1:08 PM

ಬೆಂಗಳೂರು: ಶಿಕ್ಷಣ ಸಚಿವರು ದ್ವಂದ್ವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಖಾಸಗಿ ಶಾಲೆಗಳ ಒಕ್ಕೂಟ ಅಸಮಧಾನ ವ್ಯಕ್ತಪಡಿಸಿದೆ. ಶಿಕ್ಷಣ ಸಚಿವರು ಫೀಸ್ ವಿಚಾರದಲ್ಲಿ ದ್ವಂದ್ವ ನೀತಿಯ ಹೇಳಿಕೆ ನೀಡುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಿದ್ದೇವೆ. ಪೋಷಕರು ಕಳೆದ ಮೂರು ವರ್ಷದಿಂದ ಫೀಸ್ ಸರಿಯಾಗಿ ಕಟುತ್ತಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಯಾವುದೇ ಆದೇಶ ಹೊರಡಿಸಿಲ್ಲ. ಫೀಸ್ ಹೆಚ್ಚುವರಿ ವಸೂಲಿ ಮಾಡುವ ಸಂಸ್ಥೆಗಳ ವಿರುದ್ಧ ಕ್ರಮವಹಿಸಲಿ ಎಂದು ಖಾಸಗಿ ಶಾಲೆಗಳ ಒಕ್ಕೂಟ ಒತ್ತಾಯಿಸಿದೆ.

ಪೋಷಕರಿಗೆ ಫೀಸ್ ಕೇಳಿದ್ರೆ ಸಚಿವರೂ ದೂರು ನೀಡಿ ಅನ್ನೊದು ಎಷ್ಟರ ಮಟ್ಟಿಗೆ ಸರಿ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕದ ಬಗ್ಗೆ ನಿಗದಿಯಾಗಿಲ್ಲ. ಈಗ ಪೆಟ್ರೋಲ್, ಡೀಸೆಲ್ ಸೇರಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ಯಾವುದೇ ಶಿಕ್ಷಣ ಸಂಸ್ಥೆ ಶುಲ್ಕವನ್ನು ಏರಿಕೆ ಮಾಡಿಲ್ಲ. ನಾವು ಕಳೆದ ವರ್ಷದ ಬಾಕಿ ಶುಲ್ಕ ಪಾವತಿಗೆ ಆಗ್ರಹಿಸುತ್ತಿದ್ದೇವೆ. ಈ ವರ್ಷದ ಕನಿಷ್ಠ ಶುಲ್ಕ ಕಟ್ಟಿ ದಾಖಲಾಗಲು ಹೇಳುತ್ತಿದ್ದೇವೆ. ಈಗ ಸಚಿವರು ನೀವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎನ್ನುತ್ತಿದ್ದಾರೆ. ಸಚಿವರು ಇಂಥಹ ಗೊಂದಲದ ಹೇಳಿಕೆ ನೀಡುವುದು ಬಿಡಬೇಕು. ಫೀಸ್ ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರೆ.

ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಇಂದು (ಜೂನ್ 13) ಮಧ್ಯಾಹ್ನ ಖಾಸಗಿ ಶಾಲಾ ಒಕ್ಕೂಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಖಾಸಗಿ ಶಾಲಾ ಒಕ್ಕೂಟ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ನಿರ್ಧರಿಸಿದ್ದು, ಸಭೆಯಲ್ಲಿ ಒಕ್ಕೂಟದ ಸರ್ವ ಸದಸ್ಯರು ಭಾಗಿಯಾಗಲಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ರುಪ್ಸಾ ಕರ್ನಾಟಕ ಆಕ್ರೋಶ ಕಾರ್ಪೊರೇಟ್ ಶಾಲೆಗಳು ಪೂರ್ತಿ ಶುಲ್ಕ ಕಟ್ಟಿಸಿಕೊಂಡಿವೆ. ಒಂದು ವರ್ಷದ ಪೂರ್ತಿ ಶುಲ್ಕವನ್ನ ಕಟ್ಟಿಸಿಕೊಂಡಿದ್ದಾರೆ. ಇಂತಹ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳದ್ದಕ್ಕೆ ರುಪ್ಸಾ ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ. ಕೆಲವೇ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವುದು ಸರಿಯಲ್ಲ. ಕಳೆದ‌ ವರ್ಷದ ಶುಲ್ಕ ನೀತಿಯನ್ನು ರುಪ್ಸಾ ಸ್ವಾಗತಿಸಿದೆ ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದರು.

ಇದನ್ನೂ ಓದಿ

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ

ಫೀಸ್ ವಸೂಲಿಗಾಗಿ ಅಡ್ಡದಾರಿ ಹಿಡಿದ ಖಾಸಗಿ ಶಿಕ್ಷಣ ಸಂಸ್ಥೆಗಳು

(Private schools union expresses displeasure over education minister)

Published On - 10:56 am, Sun, 13 June 21

ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ