ಉಡುಪಿ: ಒಂದು ವರ್ಷದಿಂದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ವಿದ್ಯಾರ್ಥಿಗಳ ಆರೋಪ

ಉಡುಪಿ ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣ ಮೊದಲ ಬಾರಿ ನಡೆದಿರುವುದಲ್ಲ. ಒಂದು ವರ್ಷದಿಂದ ಈ ಕೃತ್ಯ ಎಸಗುತ್ತಿದ್ದ ಬಗ್ಗೆ ವಿದ್ಯಾರ್ಥಿಗಳು ಹೇಳಿದ್ದು, ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ.

ಉಡುಪಿ: ಒಂದು ವರ್ಷದಿಂದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ವಿದ್ಯಾರ್ಥಿಗಳ ಆರೋಪ
ಉಡುಪಿ ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಆಗ್ರಹಿಸಿದ ವಿದ್ಯಾರ್ಥಿಗಳ ಪ್ರತಿಭಟನೆ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on:Jul 27, 2023 | 4:24 PM

ಉಡುಪಿ, ಜುಲೈ 27: ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ (Netra Jyothi College) ಮೊಬೈಲ್ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣ ಸಂಬಂಧ ಟಿವಿ9 ಜೊತೆ ವಿದ್ಯಾರ್ಥಿಗಳು ಸ್ಫೋಟಕ ಮಾಹಿತಿ ನೀಡಿದ್ದು, ಒಂದು ವರ್ಷದಿಂದ ಇಂತಹ ಕೃತ್ಯ ಎಸಗುತ್ತಿದ್ದರೂ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿದ್ದಾರೆ.

ಒಂದು ವರ್ಷದಿಂದ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಡುತ್ತಿದ್ದರು. ಮೊಬೈಲ್ ಚಿತ್ರೀಕರಣ ಆದ ಬಳಿಕ ಆ ಮೊಬೈಲ್ ಅನ್ನು ಮಧ್ಯಾಹ್ನದ ಸಮಯದಲ್ಲಿ ಕಾರಿನಲ್ಲಿ ಮತ್ತು ಬೈಕಿನಲ್ಲಿ ಬರುತ್ತಿದ್ದ ಯುವಕರಿಗೆ ನೀಡುತ್ತಿದ್ದರು. ಈ ಬಗ್ಗೆ ದೂರು ನೀಡಿದ್ದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರು ಯುವಕರೊಂದಿಗೆ ಮೊಬೈಲ್ ಬದಲಾವಣೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದರೂ ವಿಡಿಯೋ ಮಾಡಿದ ವಿದ್ಯಾರ್ಥಿನಿಯರ ಮೇಲೆ ಯಾವುದೇ ಕ್ರಮವನ್ನು ಆಡಳಿತ ಮಂಡಳಿ ಮತ್ತು ಶಿಕ್ಷಕ ವರ್ಗ ಕೈಗೊಂಡಿಲ್ಲ. ಜುಲೈ 18 ರಂದು ನಡೆದ ಘಟನೆಯನ್ನು ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿನಿಯರ ಮೇಲೆ ಕ್ರಮ ಕೈಗೊಂಡಿದ್ದಾರೆ. ಪ್ರತಿಭಟಿಸದಿದ್ದರೆ ನಮ್ಮ ವಿಡಿಯೋ ಕೂಡ ಆರು ತಿಂಗಳ ಬಳಿಕ ವೈರಲ್ ಆಗುತ್ತಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಡುಪಿಯ ಖಾಸಗಿ ಕಾಲೇಜಿನ ಟಾಯ್ಲೆಟ್‌ನಲ್ಲಿ ವಿಡಿಯೋ ಪ್ರಕರಣ: ಚುರುಕುಗೊಂಡ ತನಿಖೆ

ವಿಡಿಯೋ ಚಿತ್ರೀಕರಣ ಮಾಡಿ ತಮ್ಮದೇ ಸಮುದಾಯದ ಯುವಕರಿಗೆ ನೀಡುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್​ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫ್ರೀಡಂ ಪಾರ್ಕ್​ನಲ್ಲೂ ಪ್ರತಿಭಟನೆ ನಡೆದಿದೆ.

ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಅಂತಾ ಗೃಹಸಚಿವರು ಹೇಳಿಕೆ ನೀಡಿದ್ದರು. ಇದಕ್ಕೆ ಭಾರೀ ಟೀಕೆ ಕೂಡ ವ್ಯಕ್ತವಾಗಿತ್ತು. ನಂತರ ಸ್ಪಷ್ಟನೆ ನೀಡಿದ ಗೃಹಸಚಿವರು, ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತೆ, ಅದು ಅಲ್ಲಿಗೆ ಮುಗಿಯುತ್ತೆ ಎಂದು ಹೇಳಿದ್ದಾಗಿ ತಿಳಿಸಿದರು. ಇದೇ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಗೃಹಸಚಿವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಎಬಿವಿಪಿ ನಾಯಕಿ ಐಶ್ವರ್ಯ, ಈ ವಿದ್ಯಾರ್ಥಿಗಳ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ವಿವರವಾದ ತನಿಖೆಯಾಗಬೇಕು ಎಂದು ಆಗ್ರಹಿಸಿದರು. “ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲು ಇಷ್ಟು ಸಮಯ ತೆಗೆದುಕೊಂಡಿರುವುದರ ಬಗ್ಗೆಯೂ ಅನುಮಾನವಿದೆ. ತನಿಖಾಧಿಕಾರಿಗಳನ್ನು ಬದಲಾಯಿಸಬೇಕು ಮತ್ತು ಘಟನೆಯ ತನಿಖೆಗೆ ಹೊಸ ತಂಡವನ್ನು ರಚಿಸಬೇಕು. ಇದು ಬೇರೆ ಕಾಲೇಜುಗಳಲ್ಲೂ ನಡೆದಿರಬಹುದು. ಸಂತ್ರಸ್ತರಿಗೆ ಸಹಾಯ ಮಾಡಲು ಶಿಕ್ಷಣ ಇಲಾಖೆ ಸಹಾಯವಾಣಿ ತೆರೆಯಬೇಕು” ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Thu, 27 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್