371(ಜೆ) ಅಡಿ ಖಾಲಿ ಹುದ್ದೆಗಳ ಮುಂಬಡ್ತಿ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಸೂಚನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ 371 (ಜೆ) ಅಡಿ 46 ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸದೆ ಬಾಕಿ ಇರುವ ಒಟ್ಟು 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇಕಡ 8ರಷ್ಟು ಮೀಸಲಾತಿಯಂತೆ ಮುಂಬಡ್ತಿ ನೀಡಬೇಕಾದ 8,278 ಹುದ್ದೆಗಳನ್ನು ಬಡ್ತಿ ಮೂಲಕ ತುಂಬಿಸಲು ತಕ್ಷಣ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸೂಚಿಸಲಾಗಿದೆ. 

371(ಜೆ) ಅಡಿ ಖಾಲಿ ಹುದ್ದೆಗಳ ಮುಂಬಡ್ತಿ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಸೂಚನೆ
ಪ್ರಿಯಾಂಕ್ ಖರ್ಗೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jan 04, 2024 | 8:58 PM

ಬೆಂಗಳೂರು, ಜನವರಿ 04: 371(ಜೆ) ಅಡಿ ಖಾಲಿ ಹುದ್ದೆಗಳ ಮುಂಬಡ್ತಿ ಪ್ರಕ್ರಿಯೆ ಆರಂಭಿಸಲು ಸಚಿವ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕ (Kalyana-Karnataka) ಭಾಗದಲ್ಲಿ 371 (ಜೆ) ಅಡಿ 46 ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸದೆ ಬಾಕಿ ಇರುವ ಒಟ್ಟು 14,771 ಹುದ್ದೆಗಳ ನೇಮಕಾತಿ ಹಾಗೂ ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಹುದ್ದೆಗಳಲ್ಲಿ ಶೇಕಡ 8ರಷ್ಟು ಮೀಸಲಾತಿಯಂತೆ ಮುಂಬಡ್ತಿ ನೀಡಬೇಕಾದ 8,278 ಹುದ್ದೆಗಳನ್ನು ಬಡ್ತಿ ಮೂಲಕ ತುಂಬಿಸಲು ತಕ್ಷಣ ಪ್ರಕ್ರಿಯೆ ಆರಂಭಿಸಲು ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಸೂಚಿಸಲಾಗಿದೆ.

371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲಾಗಿದೆ.

ಇನ್ನೂ ಓದಿ: ಶ್ರೀಕಾಂತ್ ಪೂಜಾರಿ ಬಂಧನ ಕೇಸ್​​: ಆರ್​ ಅಶೋಕ್‌ ಸೇರಿ ಬಿಜೆಪಿಯ 43 ಮುಖಂಡರ ವಿರುದ್ಧ ದೂರು

ಸಹಕಾರ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಇ-ಆಡಳಿತ ಮುಂತಾದ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರಾಗಿದ್ದು, ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಇಂದಿನ ಸಭೆಯಲ್ಲಿ ಸೂಚಿಸಲಾಗಿದೆ.

ಸಭೆಯಲ್ಲಿ ತೆಗೆದುಕೊಂಡ ಇತರೇ ಪ್ರಮುಖ ತೀರ್ಮಾನಗಳು

  • ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ 371ಜೆ ಪ್ರಕಾರ ರಾಜ್ಯ ವೃಂದದಲ್ಲಿ ಶೇಕಡ 8ರಷ್ಟು ಹುದ್ದೆಗಳನ್ನು ನೀಡುವ ಬಗ್ಗೆ ಜೇಷ್ಠತಾ ಪಟ್ಟಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಪಟ್ಟಿ ಪ್ರಕಟಿಸಿ ಜೇಷ್ಠತಾ ಪಟ್ಟಿಯಲ್ಲಿ ಅಧಿಕಾರಿ, ನೌಕರರ ಹೆಸರಿನ ಮುಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎಂದು ನಮೂದಿಸುವ ಮಾದರಿಯಲ್ಲಿಯೇ 371ಜೆ ಎಸ್ಸಿ, 371ಜೆ ಎಸ್ಟಿ, 371ಜೆ ಸಾಮಾನ್ಯ, 371ಜೆ ಮಹಿಳೆ ಎಂದು ನಮೂದಿಸಲು ಸೂಕ್ತ ಆದೇಶ ಹೊರಡಿಸಲು ಸೂಚನೆ.
  • ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಕರ ಖಾಲಿ ಹುದ್ದೆಗಳು, ಭರ್ತಿ ಮಾಡಬೇಕಾದ ಹುದ್ದೆಗಳ ಬಗ್ಗೆ ನಿಖರ ಮಾಹಿತಿ ಇಲ್ಲದಿರುವುದರಿಂದ ಕ್ರೂಢೀಕೃತ ಮಾಹಿತಿ ಸಲ್ಲಿಸಲು ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಪರಿಶೀಲಿಸಲು ಪ್ರತ್ಯೇಕ ಸಭೆ ಕರೆಯಲು ಸಭೆಯಲ್ಲಿ ನಿರ್ಣಯಿಸಲಾಗಿದೆ.
  • ಬಳ್ಳಾರಿ ಜಿಲ್ಲೆಯನ್ನು ವಿಜಯನಗರ ಜಿಲ್ಲೆ ಎಂದು ಬದಲಿಸಿ ಆದೇಶ ಹೊರಡಿಸಲು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗೆ ಸೂಚಿಸಿದೆ.
  • ವಿಧಾನ ಸಭೆ, ವಿಧಾನ ಪರಿಷತ್ತಿನ ಸಚಿವಾಲಯಗಳಲ್ಲಿ 371ಜೆ ಮೀಸಲಾತಿ ಅಳವಡಿಸಿರುವ ಬಗ್ಗೆ ಪೂರ್ಣ ವಿವರ ಪಡೆಯಲು ನಿರ್ಣಯಿಸಲಾಗಿದೆ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಡುಗೆಯವರಿಗೆ ಮುಂಬಡ್ತಿ ನೀಡುವಾಗ ಶೇಕಡ 8ರಷ್ಟು ಮೀಸಲಾತಿ ಕಡ್ಡಾಯವಾಗಿ ಪಾಲಿಸಲು ಸೂಚಿನೆ.
  • ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನಿ. ಇಲ್ಲಿ 371ಜೆ ನಿಯಮಗಳಂತೆ ಸ್ಥಳೀಯ ವೃಂದದ ಅಧಿಕಾರಿ ಮತ್ತು ನೌಕರರಿಗೆ ಮುಂಬಡ್ತಿ ಮತ್ತು ಸೇವಾ ಜೇಷ್ಠತೆ ಪರಿಗಣಿಸಲು ಬಗ್ಗೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:55 pm, Thu, 4 January 24