AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪ್ರೀತಿಯ ಸ್ವಯಂಸೇವಕರೇ: RSS ವಿಜಯದಶಮಿ ಪಥಸಂಚಲನದ ಬಗ್ಗೆ ಖರ್ಗೆ ಖಡಕ್ ಸೂಚನೆ

ವಿಜಯದಶಮಿ ಹಿನ್ನಲೆಯಲ್ಲಿ ಪ್ರತಿ ವರ್ಷ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ದೇಶಾದ್ಯಂತ ಪಥ ಸಂಚಲನ ನಡೆಯುತ್ತೆ. ಅದರಂತೆ ಈ ವರ್ಷವೂ ಸಹ ನಾಳೆ (ಅಕ್ಟೋಬರ್ 21) ಕರ್ನಾಟಕದೆಲ್ಲೆಡೆ ಆರ್​​ಎಸ್​​​ಎಸ್ ಪಥಸಂಚಲನಗಳು ನಡೆಯಲಿದ್ದು, ಇದಕ್ಕೂ ಮುನ್ನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್​​ಎಸ್​​ಎಸ್​ ಸ್ವಯಂ ಸೇವಕರಿಗೊಂದು ಮಹತ್ವದ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ನನ್ನ ಪ್ರೀತಿಯ ಸ್ವಯಂಸೇವಕರೇ: RSS ವಿಜಯದಶಮಿ ಪಥಸಂಚಲನದ ಬಗ್ಗೆ ಖರ್ಗೆ ಖಡಕ್ ಸೂಚನೆ
Priyank Kharge
ರಮೇಶ್ ಬಿ. ಜವಳಗೇರಾ
|

Updated on:Oct 20, 2026 | 6:40 PM

Share

ಬೆಂಗಳೂರು, (ಅಕ್ಟೊಬರ್ 20): ವಿಜಯ ದಶಮಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​​ಎಸ್​​ಎಸ್) ನಡೆಸುವ ಪಥಸಂಚಲನಕ್ಕೆ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಅನುಮತಿ ಪಡೆಯಿರಿ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ. ನಾಳೆ  (ಅಕ್ಟೋಬರ್ 21) ವಿಜಯದಶಮಿಯಂದು ಬೆಂಗಳೂರಿನಲ್ಲಿ ಪಥಸಂಚಲನಕ್ಕೆ ಆರ್‌ಎಸ್‌ಎಸ್‌ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮಾಹಿತಿ ನೀಡಿರುವ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್‌ ಖರ್ಗೆ, ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ವಿವರಗಳನ್ನು ಒದಗಿಸಿ ಮತ್ತು ಔಪಚಾರಿಕ ಅನುಮತಿಗಾಗಿ ಕಾಯಿರಿ ಎಂದು ಹೇಳಿದ್ದಾರೆ.

ಆಗಾಗ ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸುವ ಪ್ರಿಯಾಂಕ್ ಖರ್ಗೆ , ಡಿಕೆ ಶಿವಕುಮಾರ್ ಸಂಪುಟದಲ್ಲಿ ಗೃಹ ಸಚಿವರಾಗುತ್ತಿದ್ದಂತೆಯೇ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿದ್ದರು. ಇದೀಗ ವಿಜಯದಶಮಿಯಂದು ಪಠಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳುವ ಹೊತ್ತಲ್ಲೇ ಆರ್​​ಎಸ್​ಎಸ್​ ಸ್ವಯಂ ಸೇವಕರಿಗೆ ಅನುಮತಿ ಪಡೆಯುವ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಮೂಲಕ ಮತ್ತೆ ಪ್ರಿಯಾಂಕ್ ಖರ್ಗೆ ವರ್ಸಸ್​ ಮುನ್ನೆಲೆಗೆ ಬಂದಂತಾಗಿದೆ.

ಇದನ್ನೂ ನೋಡಿ: RSSಗೇ ಹೆದರಲಿಲ್ಲ, ನಿಮಗೆ ಹೆದರ್ತೀನಾ?: ಹೆಚ್​​.ಡಿ. ಕುಮಾರಸ್ವಾಮಿಗೆ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ತಿರುಗೇಟು

ಪ್ರಿಯಾಂಕ್ ಖರ್ಗೆ ಪೋಸ್ಟ್​​​ನಲ್ಲಿದೆ?

ನನ್ನ ಆತ್ಮೀಯ RSS ಸ್ವಯಂಸೇವಕರೇ, ದಸರಾ ಹಬ್ಬದ ಸಂಭ್ರಮ ಜೋರಾಗಿ ನಡೆಯುತ್ತಿದೆ ಎಂದು ಭಾವಿಸುತ್ತೇನೆ.ನಿಮ್ಮ ಉತ್ಸಾಹಕ್ಕೆ ತಣ್ಣೀರು ಎರಚುವ ಉದ್ದೇಶವಿಲ್ಲ, ಆದರೆ ಒಂದು ಸಣ್ಣ ಜ್ಞಾಪನೆ, ಕೇವಲ “ಮಾಹಿತಿ ನೀಡುವುದು” ಅಥವಾ ಗೃಹ ಇಲಾಖೆಗೆ “ಸಹಕರಿಸಿ” ಅಥವಾ “ಅಗತ್ಯ ವ್ಯವಸ್ಥೆ ಮಾಡಿ” ಎಂದು ಹೇಳುವುದು ಅನುಮತಿ ಪಡೆದಂತೆ ಆಗುವುದಿಲ್ಲ. ದಯವಿಟ್ಟು ಎಲ್ಲಾ ಸಂಘಟನೆಗಳಿಗೆ ಅನ್ವಯಿಸುವ ನಿಗದಿತ ಕಾರ್ಯವಿಧಾನದ ಪ್ರಕಾರ ನಿಮ್ಮ ಅರ್ಜಿಯನ್ನು ಸಲ್ಲಿಸಿ ಮತ್ತು ಸಕ್ಷಮ ಪ್ರಾಧಿಕಾರಗಳಿಂದ ಔಪಚಾರಿಕ ಅನುಮೋದನೆಗಾಗಿ ಕಾಯಿರಿ.

ನಿಮ್ಮದೇ ಆದ ಅಖಿಲ ಭಾರತೀಯ ಪ್ರತಿನಿಧಿ ಸಭಾ ವಾರ್ಷಿಕ ವರದಿ 2025-26 ರಲ್ಲಿ ಆರ್‌ಎಸ್‌ಎಸ್‌ ಕರ್ನಾಟಕದಾದ್ಯಂತ 2,21,963 ಸಮವಸ್ತ್ರಧಾರಿ ಕಾರ್ಯಕರ್ತರನ್ನು ಒಳಗೊಂಡ 562 ಪಥಸಂಚಲನಗಳನ್ನು ನಡೆಸಿದೆ ಎಂದು ಹೇಳಿದೆ ಎಂದು ನೀವು ಓದಿದ್ದೀರಿ ಎಂದು ನನಗೆ ಖಾತರಿಯಿದೆ.ಈಗ ಲಕ್ಷಾಂತರ ಮಂದಿ ಒಂದೇ ದಿನ ಒಂದೇ ಸಮಯದಲ್ಲಿ ಕರ್ನಾಟಕದ ಬೀದಿಗಳಲ್ಲಿ ಮೆರವಣಿಗೆ ನಡೆಸಲು ಉದ್ದೇಶಿಸಿದಾಗ, ಪೊಲೀಸ್ ಇಲಾಖೆಯು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಸಿಬ್ಬಂದಿ ನಿಯೋಜನೆ, ಸಾರಿಗೆ, ಆಹಾರ, ಸಂಚಾರ ನಿರ್ವಹಣೆ, ಭದ್ರತಾ ವ್ಯವಸ್ಥೆಗಳು ಮತ್ತು ಇತರ ಲಾಜಿಸ್ಟಿಕ್ಸ್. ಇವೆಲ್ಲಕ್ಕೂ ಯೋಜನೆ, ಜನಬಲ ಮತ್ತು ಸಾರ್ವಜನಿಕ ಸಂಪನ್ಮೂಲಗಳು ಬೇಕಾಗುತ್ತವೆ. ಆದ್ದರಿಂದ, ದಯವಿಟ್ಟು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ವಿವರಗಳನ್ನು ಒದಗಿಸಿ ಮತ್ತು ಔಪಚಾರಿಕ ಅನುಮತಿಗಾಗಿ ಕಾಯಬೇಕೆಂದು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Tue, 20 October 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ