ಬೆಂಗಳೂರು: ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ಹಿಂದೂಪರ ಹೋರಾಟಗಾರನಿಂದ ದೂರು ದಾಖಲು

ರಾಜ್ಯ ಸಭೆ ಚುನಾವಣೆ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಬೆನ್ನಲ್ಲೇ ಈಗ ನಡು ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ ಆರೋಪ ಕೇಳಿ ಬಂದಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ ಅತೀಕ್ ಮಸೀದಿ ಬಳಿ ರಸ್ತೆಯಲ್ಲೇ ನಮಾಜ್ ಮಾಡಿರುವ ಫೋಟೋ ಪತ್ತೆಯಾಗಿದೆ. ಘಟನೆ ಸಂಬಂಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ ದೂರು ಸಲ್ಲಿಸಿದ್ದು ಸಿದ್ದಾಪುರ ಸ್ಟೇಷನ್ ಪೋಲಿಸರು ಎನ್ಸಿಆರ್ ದಾಖಲಿಸಿದ್ದಾರೆ.

ಬೆಂಗಳೂರು: ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು; ಹಿಂದೂಪರ ಹೋರಾಟಗಾರನಿಂದ ದೂರು ದಾಖಲು
ನಡು ರಸ್ತೆಯಲ್ಲಿ ನಮಾಜ್ ಮಾಡಿದ ಮುಸ್ಲಿಮರು
Follow us
Kiran Surya
| Updated By: ಆಯೇಷಾ ಬಾನು

Updated on:Feb 29, 2024 | 8:49 AM

ಬೆಂಗಳೂರು, ಫೆ.29: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್​ನಲ್ಲಿರುವ (Siddapura Ward) ಅತೀಕ್ ಮಸೀದಿ ಬಳಿ ಮುಸ್ಲಿಮರು (Muslims) ನಡು ರಸ್ತೆಯಲ್ಲಿ ನಮಾಜ್ (Namaz) ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅನುಮತಿ ಪಡೆಯದೆ ರಸ್ತೆಯಲ್ಲಿ ನಮಾಜ್ ಮಾಡಲಾಗಿದೆ ಎಂದು ಆರೋಪಿಸಿ ಮಸ್ಜಿದ್ ಮುಖ್ಯಸ್ಥರ ವಿರುದ್ಧ ಹಿಂದೂಪರ ಹೋರಾಟಗಾರ ತೇಜಸ್ ಗೌಡ (Tejas Gowda) ಎಂಬುವವರು ದೂರು ದಾಖಲಿಸಿದ್ದಾರೆ. ಸದ್ಯ ಮುಸ್ಲಿಮರು ರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ಫೆಬ್ರವರಿ 25ರ ಭಾನುವಾರದಂದು ಅತೀಕ್ ಮಸೀದಿ ಬಳಿ ಮುಸ್ಲಿಮರು ರಸ್ತೆಯಲ್ಲೇ ಕೂತು ಪ್ರಾರ್ಥನೆ ಸಲ್ಲಿಸಿದ್ದಾರೆ. ಘಟನೆ ಸಂಬಂಧ ಸಿದ್ದಾಪುರ ಸ್ಟೇಷನ್ ಪೋಲಿಸರು ಎನ್ಸಿಆರ್ ದಾಖಲಿಸಿದ್ದಾರೆ. ಸೋಮೇಶ್ವರ ನಗರ ಮುಖ್ಯರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಗಳಾದ ನಿಮ್ಹಾನ್ಸ್, ಕಿದ್ವಾಯಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಆಸ್ಪತ್ರೆಗಳಿವೆ. ಈ ರಸ್ತೆಯಲ್ಲಿ ಆಂಬ್ಯುಲೆನ್ಸ್ ಸಂಚರಿಸುತ್ತವೆ. ರಸ್ತೆಯಲ್ಲಿ ನಮಾಜ್ ಮಾಡಿದರಿಂದ ಸಾರ್ವಜನಿಕರಿಗೆ ತೊಂದರೆ ಆಗಿತ್ತು. ಸಂಚಾರ ದಟ್ಟಣೆ ಉಂಟಾಗಿತ್ತು.

ಅನ್ಯ ಕೋಮಿನ ಭಾವನೆಗಳನ್ನು ಪ್ರಚೋದಿಸುವಂತೆ ಧಕ್ಕೆಯುಂಟಾಗುವಂತೆ ವರ್ತಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ಪ್ರಾರ್ಥನೆ ಮಾಡಿರುವುದು ಕಾನೂನು ಬಾಹಿರವಾಗಿರುತ್ತದೆ. ಆದ್ದರಿಂದ ಅತೀಕ್ ಮಸೀದಿ ಮುಖ್ಯಸ್ಥರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಿ. ಈ ರೀತಿ ಮತ್ತೆ ಮರುಕಳಿಸದಂತೆ ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಅವರಿಗೆ ತಿಳಿಸಿ ಕೊಡುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಹಿಂದೂಪರ ಹೋರಾಟಗಾರ ತೇಜಸ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮಸೀದಿಯಲ್ಲಿ ಮಹಿಳೆ ನಮಾಜ್ ಮಾಡಿದ್ದ ಆರೋಪ: ಇಡೀ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ

Published On - 8:02 am, Thu, 29 February 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM