ಪಾಕ್​ ಪರ ಘೋಷಣೆ ಆರೋಪ: ಡಿಜಿ&ಐಜಿಪಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ, FSL ವರದಿ ಬಿಡುಗಡೆಗೆ ಮನವಿ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಪ್ರಕರಣ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕದನವನ್ನೇ ಸೃಷ್ಟಿಸಿದೆ. ಖಾಸಗಿ ಎಫ್​ಎಸ್​ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಸಾಬೀತಾಗಿದೆ ಅಂತಾ ಬಿಜೆಪಿ ಕಿಡಿಕಾರಿದ್ದು, ಇತ್ತ, FSL ವರದಿ ಬಂದಿಲ್ಲ. ಬಂದ್ರೆ ಮುಚ್ಚಿಡೋ ಪ್ರಶ್ನೆಯೇ ಇಲ್ಲ ಅಂತಾ ಕಾಂಗ್ರೆಸ್​ ನಾಯಕರು ತಿರುಗೇಟು ನೀಡಿದ್ದಾರೆ. ಇದೆಲ್ಲದರ ಮಧ್ಯೆ ಇಂದು ಬಿಜೆಪಿ ಶಾಸಕರ ನಿಯೋಗದಿಂದ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದೆ.

ಪಾಕ್​ ಪರ ಘೋಷಣೆ ಆರೋಪ: ಡಿಜಿ&ಐಜಿಪಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ, FSL ವರದಿ ಬಿಡುಗಡೆಗೆ ಮನವಿ
ಬಿಜೆಪಿ ಶಾಸಕರ ನಿಯೋಗ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 04, 2024 | 5:08 PM

ಬೆಂಗಳೂರು, ಮಾರ್ಚ್​ 4: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಆರೋಪದ ಎಫ್​​ಎಸ್​ಎಲ್​​(FSL) ವರದಿ ಬಂದಿಲ್ಲ ಎಂದು ಕಾಂಗ್ರೆಸ್​​ ನಾಯಕರು ಹೇಳುತ್ತಿದ್ದಾರೆ. ಆದರೆ ವರದಿ ಬಹಿರಂಗಪಡಿಸಬೇಕು. ವಿಳಂಬವೇಕೆ ಎಂದು ಬಿಜೆಪಿ ಪ್ರಶ್ನಿಸಿದೆ. ಈ ವಿಚಾರವಾಗಿ ಬಿಜೆಪಿ ಶಾಸಕರ ನಿಯೋಗದಿಂದ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಲಾಗಿದೆ. ಮೊದಲು FSL ಕಚೇರಿಗೆ ತೆರಳಲು ನಿರ್ಧರಿಸಿದ್ದ ಬಿಜೆಪಿ ನಿಯೋಗ ನಂತರ ಡಿಜಿ&ಐಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದೆ. ಬಿಜೆಪಿ ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಸಿ.ಕೆ.ರಾಮಮೂರ್ತಿ, ಧೀರಜ್ ಮುನಿರಾಜುರಿಂದ ಬೆಂಗಳೂರಿನ ನೃಪತುಂಗರಸ್ತೆಯಲ್ಲಿರುವ ಡಿಜಿ&ಐಜಿಪಿ ಕಚೇರಿ ಭೇಟಿ ನೀಡಿ ಶೀಘ್ರದಲ್ಲೇ FSL ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಎಫ್ಎಸ್ಎಲ್ ವರದಿ ಬಂದರೂ ಸರ್ಕಾರ ಮುಚ್ಚಿಡಲು ಪ್ರಯತ್ನ ನಡೆದಿದೆ ಎಂದ ನಂದೀಶ್ ರೆಡ್ಡಿ

ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಪ್ರತಿಕ್ರಿಯಿಸಿದ್ದು, 8 ದಿನ ಕಳೆದರೂ ಸರ್ಕಾರ ಎಫ್ಎಸ್ಎಲ್ ವರದಿ ಬಹಿರಂಗಪಡಿಸಿಲ್ಲ. ಎಫ್ಎಸ್ಎಲ್ ವರದಿ ಬಂದರೂ ಸರ್ಕಾರ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಹೀಗಾಗಿ ಬಿಜೆಪಿ ನಿಯೋಗದಿಂದ ಡಿಜಿ&ಐಜಿಪಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ

ಇದು ದೇಶದ ಭದ್ರತೆ, ವಿಧಾನಸೌಧದ ಭದ್ರತೆ ವಿಚಾರವಾಗಿದೆ. ಮನಸಾಕ್ಷಿ ಇರುವ ಸರ್ಕಾರವಾಗಿದ್ದರೆ 24 ಗಂಟೆಯಲ್ಲಿ ಕ್ರಮ ಆಗಿರುತ್ತಿತ್ತು. 2-3 ದಿನದಲ್ಲಿ ವರದಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟವಾಗಿದೆ. ಯಾವುದು ನಿಜ ಎಂದು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದಿದ್ದಾರೆ.

ಖಾಸಗಿ ಎಫ್‌ಎಸ್‌ಎಲ್ ವರದಿ ಬಿಡುಗಡೆ

ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಸಂಭ್ರಮದ ವೇಳೆ ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ಆರೋಪ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ನಿನ್ನೆವರೆಗೂ ಎಫ್​ಎಸ್ಎಲ್​ ವರದಿ ಬಂದಿಲ್ಲ, ಬಂದಿದೆ ಅನ್ನೋ ವಿಚಾರವಾಗಿ ನಡೀತಿದ್ದ ಮಾತಿನ ಕದನಕ್ಕೆ ಇವತ್ತು ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಎಫ್​ಎಸ್​ಎಲ್​ ವರದಿ ಬಿಡುಗಡೆಗೆ ಆಗ್ರಹಿಸಿದ್ದ ಬಿಜೆಪಿ, ಖಾಸಗಿ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ದೇಶದ್ರೋಹ ಕ್ಯಾನ್ಸರ್ ಇದ್ದ ಹಾಗೆ, ಆಪರೇಷನ್ ಮಾಡದಿದ್ದರೆ ದೇಶದ ತುಂಬ ಹರಡುತ್ತದೆ: ಪ್ರಮೋದ್ ಮುತಾಲಿಕ್

ಖಾಸಗಿ ಸಂಸ್ಥೆಯ ಎಫ್​​ಎಸ್​​ಎಲ್ ತಜ್ಞ ಫಣೀಂದ್ರ ತಯಾರಿಸಿರುವ ವರದಿಯನ್ನು ರಾಜ್ಯ ಬಿಜೆಪಿ ಘಟಕ ಟ್ವಿಟರ್​ನಲ್ಲಿ ಹಂಚಿಕೊಂಡಿದೆ. Clue4 Evidence Forensic Investigation pvt. Ltd ಖಾಸಗಿ ಸಂಸ್ಥೆಯಲ್ಲಿ ಈ ವರದಿ ತಯಾರಿಸಲಾಗಿದೆ. ಖಾಸಗಿ ಎಫ್​ಎಸ್​ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ