ಪಾಕ್ ಪರ ಘೋಷಣೆ: ನಾಸೀರ್ ಹುಸೇನ್ಗೆ ಪ್ರಮಾಣ ವಚನ ಬೋಧನೆ ಮಾಡದಂತೆ ಉಪ ರಾಷ್ಟ್ರಪತಿಗೆ ಪತ್ರ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಪ್ರಕರಣ ವಿಚಾರವಾಗಿ ತನಿಖೆ ಪೂರ್ಣಗೊಳ್ಳುವವರೆಗೂ ನಾಸೀರ್ ಹುಸೇನ್ ಅವರಿಗೆ ಯಾವುದೇ ಕಾರಣಕ್ಕೂ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿ ಅವರಿಗೆ ಮನವಿ ಮಾಡಿದ್ದಾರೆ. ಪಾಕಿಸ್ತಾನ್ ಪರ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲೂ ಸಹ ದೃಢಪಟ್ಟಿದೆ.
ಬೆಂಗಳೂರು, ಮಾರ್ಚ್ 6: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ನಾಸೀರ್ ಹುಸೇನ್ (Syed Naseer Hussain) ಅವರು ಆಯ್ಕೆಯಾಗಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ. ಇದು ಎಫ್ಎಸ್ಎಲ್ ವರದಿಯಲ್ಲೂ ಸಹ ದೃಢಪಟ್ಟಿದ್ದು, ಈ ಸಂಬಂಧ ಪೊಲೀಸರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಪೂರ್ಣಗೊಳ್ಳುವವರೆಗೂ ನಾಸೀರ್ ಹುಸೇನ್ ಅವರಿಗೆ ಯಾವುದೇ ಕಾರಣಕ್ಕೂ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿ ಅವರಿಗೆ ಮನವಿ ಮಾಡಿದ್ದಾರೆ.
ಡಾ ಸಯ್ಯದ್ ನಾಸೀರ್ ಹುಸ್ಸೇನ್ ಪ್ರಮಾಣ ವಚನ ಸ್ವೀಕರಿಸಬಾರದು: ಬಿವೈ ವಿಜಯೇಂದ್ರ
ಇತ್ತೀಚೆಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಕಿಸ್ತಾನದ ಪರ ವಿಧಾನಸೌಧದಲ್ಲಿ ಘೋಷಣೆ ಕೂಗಿದ ಪ್ರಕರಣ ಪೂರ್ಣಗೊಳ್ಳದ ಹೊರತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಡಾ ಸಯ್ಯದ್ ನಾಸೀರ್ ಹುಸ್ಸೇನ್ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಹೇಳಿದ್ದರು.
ಇದನ್ನೂ ಓದಿ: ತನಿಖೆ ಪೂರ್ಣಗೊಳ್ಳದ ಹೊರತು ನಾಸೀರ್ ಹುಸ್ಸೇನ್ ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಬಾರದು: ಬಿವೈ ವಿಜಯೇಂದ್ರ
ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರದ ಸಮಗ್ರತೆ ಬಗ್ಗೆ ನಿಜವಾದ ಕಾಳಜಿಯಿದ್ದರೆ, ಹುಸ್ಸೇನ್ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಬೇಕು ಎಂದು ವಿಜಯೇಂದ್ರ ಕಿಡಿಕಾರಿದ್ದರು.
ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಓರ್ವ ಪೊಲೀಸ್ ವಶಕ್ಕೆ, ಇನ್ನಿಬ್ಬರಿಗೆ ನ್ಯಾಯಾಂಗ ಬಂಧನ
FSL ವರದಿ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ಆರೋಪಿತರು ಒಂದಲ್ಲ, ಬದಲಾಗಿ ಎರಡು ಬಾರಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಅನ್ನೋದು ಖಚಿತವಾಗಿದೆ. ಇತ್ತ ನಾಶಿಪುಡಿಯನ್ನ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ, ಅತ್ತ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಗ್ರಾಮ ಪಂಚಾಯಿತಿ ದೊಡ್ಡ ಪ್ರತಿಭಟನೆ ನಡೀತು. ನಾಶಿಪುಡಿಗೆ ಸೇರಿದ ಕೋಲ್ಡ್ ಸ್ಟೋರೇಜ್‌ಗೆ ರೈತರು ಮುತ್ತಿಗೆ ಯತ್ನಿಸಿದ್ರು. ಕೂಡಲೇ ನಾಶಿಪುಡಿಯನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದ್ದರು.
ಪ್ರಕರಣದಲ್ಲಿ ಬಿಜೆಪಿ ಪಡೆ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಅದರಲ್ಲೂ ಒಂದು ಹೆಜ್ಜೆ ಮುಂದೇ ಹೋಗಿರುವ ಕೆಎಸ್ ಈಶ್ವರಪ್ಪ, ನಾಲಿಗೆ ಹರಿಬಿಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:01 pm, Wed, 6 March 24