AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಖಾಸಗಿ ಎಫ್​ಎಸ್​ಎಲ್​ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಜಿ ಪರಮೇಶ್ವರ್​​

​ವಿಧಾನಸೌಧದ ಒಳಗೆ ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ ​ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಬಿಜೆಪಿ ವರದಿ ಬಹಿರಂಗಪಡಿಸಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿ ಇದು ಖಾಸಗಿ ಸಂಸ್ಥೆ ವರದಿಯಾಗಿದ್ದು, ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಖಾಸಗಿ ಎಫ್​ಎಸ್​ಎಲ್​ ವರದಿ ಗಣನೆಗೆ ತೆಗೆದುಕೊಳ್ಳಲ್ಲ : ಜಿ ಪರಮೇಶ್ವರ್​​
ಗೃಹ ಸಚಿವ ಪರಮೇಶ್ವರ್​​
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Mar 04, 2024 | 11:19 AM

ಬೆಂಗಳೂರು, ಮಾರ್ಚ್​​ 04: ಖಾಸಗಿ ಸಂಸ್ಥೆಯವರು ನೀಡಿರುವ ಎಫ್​ಎಸ್​ಎಲ್ (FSL)​​ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ (G Parmeshwar)​​ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಎಫ್​ಎಸ್​ಎಲ್​, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ (Pro Pakistan Slogan) ಕೂಗಿರುವುದು ಧೃಡವಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇನ್ನು ಎಫ್​ಎಸ್​ಎಲ್​ ವರದಿ ಘಟನೆ ನಡೆದ ಮರುದಿನವೆ ಬಂದಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಜಿ. ಪರಮೇಶ್ವರ್​, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಗೊತ್ತಿಲ್ಲ. ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ. ಖಾಸಗಿಯವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್​​ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇನೆ ಎಂದರು.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್​ ವಿಚಾರವಾಗಿ ಮಾತನಾಡಿದ ಅವರು, ಸಭೆ ಮಾಡಿ ಈಗಾಗಲೇ ಎಲ್ಲವನ್ನೂ ಹೇಳಿದ್ದೇನೆ. ಕೆಲ ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್​ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್​ಎಸ್​​ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ, ವ್ಯಕ್ತಿ ಇದ್ದಾರಾ, ಸಂಘಟನೆ ಇದೆಯಾ.? ಎಲ್ಲವನ್ನೂ ಪರಿಶೀಲನೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ

ಜಾತಿಗಣತಿ ವರದಿ ವಿಚಾರವಾಗಿ ಮಾತನಾಡಿದ ಅವರು. ಮುಖ್ಯಮಂತ್ರಿಗಳೇ ಹೇಳಿದ್ದಾರೆ, ಸಂಪುಟ ಸಭೆಯಲ್ಲಿಟ್ಟು ನಿರ್ಧಾರ ಮಾಡಲಾಗುತ್ತದೆ. ವಿರೋಧ ಮಾಡುವುದು, ಪರವಾಗಿ ಮಾತಾಡುವುದುಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದಿದ್ದೇ. ವರದಿ ತರಿಸಿಕೊಂಡ‌ಮೇಲೆ ಲಾಜಿಕ್ ಎಂಡ ಆಗಬೇಕು. ಇಲ್ಲ ರಿಜೆಕ್ಟ್ ಮಾಡಬೇಕು. ಸಿಎಂ ಕ್ಯಾಬಿನೆಟ್ ನಿರ್ಧಾರಕ್ಕೆ ನಾವು ಬದ್ದ ಎಂದರು.

ಬಾಂಬ್​ ಬ್ಲಾಸ್ಟ್​​ ತನಿಖೆಯಲ್ಲಿ ಡಿಸಿಪಿಗಳು ಜವಾಬ್ದಾರಿಯನ್ನು ನಿರ್ವಾಹಿಸಬೇಕು. ದಿಟ್ಟತನ ಪ್ರದರ್ಶನ ಮಾಡಿ ಫೀಲ್ಡ್‌ನಲ್ಲಿ ಕಾರ್ಯನಿರ್ವಾಹಿಸಬೇಕು. ಸಾರ್ವಜನಿಕರ ವಿಶ್ವಾಸವನ್ನ ಡಿಸಿಪಿಗಳು ಗಳಿಸಬೇಕು. ಅಗತ್ಯವಾದ ಸ್ಥಳಗಳಲ್ಲಿ ಒಂದು ತಿಂಗಳೊಳಗೆ ಸಿಸಿಟಿವಿ ಅಳವಡಿಕೆ ಮಾಡಿ. ತಕ್ಷಣವೇ ಅದರ ವ್ಯತ್ಯಾಸವನ್ನು ಕಾಣಬೇಕು ಎಂದು ಜಿ ಪರಮೇಶ್ವರ್​ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ