ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

| Updated By: ರಮೇಶ್ ಬಿ. ಜವಳಗೇರಾ

Updated on: Feb 29, 2024 | 10:11 PM

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಆರೋಪದ ಜ್ವಾಲೆ ಇಂದೂ ಧಗಧಗಿಸಿತು. ನಿನ್ನೆ ಜಿಲ್ಲೆಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಬಿಜೆಪಿ ನಾಯಕರು ಇಂದೂ ಸಮರ ಮುಂದುವರಿಸಿದ್ದಾರೆ. ಇನ್ನು ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
Follow us on

ಬೆಂಗಳೂರು, (ಫೆಬ್ರವರಿ 29): ಕಾಂಗ್ರೆಸ್​​ನ (Congress) ಪಾಕ್​​​​ ಪ್ರೇಮ ತಿಳಿಯಲು ಸ್ಕ್ಯಾನ್ ಮಾಡಿ ಎಂದು ಸ್ಕ್ಯಾನರ್ ಪ್ರತಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ರಾಜ್ಯಪಾಲರ (governor) ಅನುಪಸ್ಥಿತಿಯಲ್ಲಿ ದೂರು ಕೊಟ್ಟಿದ್ದರು. ಈಗ ರಾತ್ರಿ ಮತ್ತೆ ಬಿಜೆಪಿ ನಿಯೋಗವು ಖುದ್ದು ರಾಜ್ಯಪಾಲರನ್ನು ಭೇಟಿ ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ಮನವಿ ಮಾಡಿದೆ. ರಾಜ್ಯಪಾಲರಿಗೆ ದೂರು ಬಳಿಕ ವಿರೋಧ ಪಕ್ಷದ ನಾಯಕ ಆರ್​.ಅಶೋಕ್, ವಿಜಯೇಂದ್ರ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ (R Ashok) ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ (Karnataka Government) ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಮುಸ್ಲಿಂ ಮೂಲಭೂತವಾದಿಗಳು ಗಲಾಟೆ ಮಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ಬಂಧಿಸಿ ಎಂದು ಆಗ್ರಹಿಸಿದರೆ ಸರ್ಕಾರ ಅವರನ್ನು ಬಿಟ್ಟುಬಿಡಿ ಎಂದು ಪೊಲೀಸರಿಗೆ ಸೂಚಿಸಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಪಾಕ್ ಪರ ಘೋಷಣೆ ಆರೋಪ: ತನಿಖೆ ಚುರುಕುಗೊಳಿಸಿದ ಪೊಲೀಸರು, ನಾಸೀರ್ ಹುಸೇನ್ ಬೆಂಬಲಿಗ ಶಫಿ ನಾಶಿಪುಡಿ ಧ್ವನಿ ಪರೀಕ್ಷೆ

ಎಫ್ಎಸ್ಎಲ್ ವರದಿ ಪರಿಶೀಲನೆ ಎಂದು ಹೇಳಿ ಯಾವುದೋ ವಾಹಿನಿಯ ವೀಡಿಯೋ ಪಡೆದು ಪರೀಕ್ಷೆ ನಡೆಸಿ ಸುಳ್ಳು ವರದಿ ರೂಪಿಸಲಾಗುತ್ತಿದೆ. ಇದನ್ನು ಮುಚ್ಚಿ ಹಾಕಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರದಿಯನ್ನು ತಿರುಚುವುದು ಖಂಡಿತ. ರಾಜ್ಯ ಕಾಂಗ್ರೆಸ್​ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯದ ಜನರು ಇದನ್ನು ಮನಗಾಣಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆಯಲ್ಲಿ ಹಿಂದೂ ವಿರೋಧಿ ವಿಷ ಹಾಗೂ ಪ್ರಧಾನಿ ಮೋದಿ ವಿರುದ್ಧ ದ್ವೇಷ ತುಂಬಿದೆ. ಮೋದಿ ಎಂದರೆ ಕಾಂಗ್ರೆಸ್ ನಾಯಕರು ಭಯ ಪಡುತ್ತಾರೆ ಎಂದು ಹೇಳಿದರು. ಬಿ.ಕೆ.ಹರಿಪ್ರಸಾದ್ ಅವರು ಪಾಕಿಸ್ತಾನಿಗಳು ಸಹೋದರರು ಎನ್ನುತ್ತಾರೆ. ಕಾಂಗ್ರೆಸ್ ನಾಯಕರ ಮನಸ್ಸಿನ ಪೂರ್ತಿ ಪಾಕಿಸ್ತಾನ ತುಂಬಿಕೊಂಡಿದೆ. ಇದೇ ರೀತಿ ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನ ಬ್ರದರ್ಸ್ ಎಂದಿದ್ದರು ಎಂದು ನೆನಪಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ