ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೊಳಗಿದ ಪಾಕ್​ ಪರ ಘೋಷಣೆ

ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ 9, ಬಿಜೆಪಿ 17 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿ ಗೆದ್ದು ಬೀಗಿವೆ. ಅದರಲ್ಲೂ ಮುಖ್ಯವಾಗಿ ಸತೀಶ್ ಜಾರಕಿಹೊಳಿ ಅವರು ತಮ್ಮ ಪುತ್ರಿ ಪ್ರಿಯಾಂಕಳನ್ನು ಚಿಕ್ಕೋಡಿಯಲ್ಲಿ ಗೆಲ್ಲಿಸಿಕೊಂಡಿದ್ದಾರೆ. ಈ ಗೆದ್ದ ಖುಷಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದು,, ಈ ವೇಳೆ ಪಾಕ್​ ಪರ ಘೋಷಣೆ ಮೊಳಗಿರುವುದು ಕೇಳಿಬಂದಿದೆ.

ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಮೊಳಗಿದ ಪಾಕ್​ ಪರ ಘೋಷಣೆ
Edited By:

Updated on: Jun 04, 2024 | 5:49 PM

ಬೆಳಗಾವಿ, (ಜೂನ್ 04): ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನ ಪ್ರಿಯಾಂಕ ಜಾರಕಿಹೊಳಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ಅಣ್ಣಸಾಹೇಬ್ ಜೊಲ್ಲೆ ವಿರುದ್ಧ ಪುತ್ರಿಯನ್ನು ಗೆಲ್ಲಿಸುವಲ್ಲಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿಯನ್ನು ಗೆಲ್ಲಿಸಿಕೊಂಡಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಈ ಸಂಭ್ರಮಾಚರಣೆಯಲ್ಲಿ ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿದ್ದಾನೆ. ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರವಲಯದಲ್ಲಿ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ ಜಮೀರ್ ನಾಯಿಕವಾಡಿ ಎನ್ನುವಾತ ಪಾಕಿಸ್ತಾನ್‌ಕ್ಕೆ, ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್‌ ಎಂದು ಕೂಗಿದ್ದಾನೆ.

ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್‌ ಎಂದು ಘೋಷಣೆ ಕೂಗಿ ಚಿಕ್ಕೋಡಿಯಿಂದ ಬೆಳಗಾವಿಗೆ ಬಂದಿದ್ದಾನೆ. ಕೂಡಲೇ ಅಲರ್ಟ್​ ಆದ ಚಿಕ್ಕೋಡಿ ಪೊಲೀಸರು, ಬೆಳಗಾವಿ ಬಸ್ ನಿಲ್ದಾಣದಲ್ಲಿ ಜಮೀರ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ರಾಜ್ಯಸಭಾ ಚುನಾವಣೆಯಫಲಿತಾಂಶ ಹೊರಬಿದ್ದಾಗ ವಿಧಾನಸೌಧದಲ್ಲೇ ಕಾಂಗ್ರೆಸ್‌ ನೂತನ ಸದಸ್ಯ ನಾಸಿರ್ ಹುಸೇನ್ (Nasir Hussain) ಬೆಂಬಲಿಗರು ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಕ್​ ಪರ ಘೋಷಣೆ ಮೊಳಗಿದೆ.

ಇದನ್ನು ಓದಿ: Karnataka Lok Sabha Election Results 2024: ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮೋಡಿಗೆ ಅಸಲಿ ಕಾರಣಗಳೇನು?

ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ಗೆ ಗೆಲವು

ಇನ್ನೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಣ್ಣಸಾಬ್ ಜೊಲ್ಲೆ ವಿರುದ್ಧ 96,253 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ ಜೋಲ್ಲೆ 5,83,926 ಮತ ಪಡೆದು, 96,253 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಬಿಜೆಪಿಯ ಭದ್ರಕೋಟೆಯನ್ನು ಕಾಂಗ್ರೆಸ್ ವಶಪಡಿಸಿಕೊಂಡಿದೆ. ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂತಸ ಮನೆ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಹೋಳಿಗೆ ಗುಲಾಬಿ ಬಣ್ಣ ಹಂಚಿ ಸಂಭ್ರಮಾಚರಣೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:17 pm, Tue, 4 June 24

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us