Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಸಂವಹನ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿಕೆ ರವಿ ಆಯ್ಕೆ

​ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು ರಾಷ್ಟ್ರೀಯ ಸಂವಹನ ಕಾಂಗ್ರೆಸ್ (National Communication Congress)ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಮಾಧ್ಯಮ ಶಿಕ್ಷಣ ಹಾಗೂ ಭಾರತೀಯ ಮಾಧ್ಯಮ ಉದ್ಯಮದ ನಡುವೆ ಸಂಪರ್ಕ ಸಾಧಿಸುವ ಸೇತುವೆಯಾಗಿ ಎನ್.ಸಿ.ಸಿ. ಕಾರ್ಯನಿರ್ವಹಿಸಲಿದೆ.​

ರಾಷ್ಟ್ರೀಯ ಸಂವಹನ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿಕೆ ರವಿ ಆಯ್ಕೆ
ಪ್ರೊ. ಬಿ.ಕೆ. ರವಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Aug 27, 2023 | 2:31 PM

ಬೆಂಗಳೂರು, (ಆಗಸ್ಟ್ 27):ಕೊಪ್ಪಳ (Koppal) ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿಯವರು(Professor Dr.B.K.Ravi)  ರಾಷ್ಟ್ರೀಯ ಸಂವಹನ ಕಾಂಗ್ರೆಸ್ (National Communication Congress)ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.​ ದೇಶದ ಮಾಧ್ಯಮ ವಿದ್ವಾಂಸರು, ಸಂವಹನ ತಜ್ಞರು, ಮಾಧ್ಯಮ ಶಿಕ್ಷಕರು, ಸಂಶೋಧಕರು ಮತ್ತು ಭಾರತೀಯ ಮಾಧ್ಯಮದ ವೃತ್ತಿಪರರನ್ನು ಒಳಗೊಂಡಿರುವ ರಾಷ್ಟ್ರೀಯ ಸಂವಹನ ಕಾಂಗ್ರೆಸ್, ರಾಷ್ಟ್ರದಾದ್ಯಂತ ಮಾಧ್ಯಮಕ್ಕೆ ಸಂಬಂಧಿಸಿದ ವಿಚಾರ ಸಂಕಿರಣಗಳು, ಸಮ್ಮೇಳನಗಳು, ಪ್ರಕಟಣೆಗಳು, ತರಬೇತಿ ಹಾಗೂ ಸಂಶೋಧನೆಗಳನ್ನು ನಡೆಸಲಿದೆ. ​ಭಾರತೀಯ ಮಾಧ್ಯಮ ಶಿಕ್ಷಣ ಹಾಗೂ ಭಾರತೀಯ ಮಾಧ್ಯಮ ಉದ್ಯಮದ ನಡುವೆ ಸಂಪರ್ಕ ಸಾಧಿಸುವ ಸೇತುವೆಯಾಗಿ ಎನ್.ಸಿ.ಸಿ. ಕಾರ್ಯನಿರ್ವಹಿಸಲಿದೆ.​

ಕೊಲ್ಕತ್ತ, ಶಾಂತಿನಿಕೇತನದ ವಿಶ್ವಭಾರತಿ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸ್ಥಾನ ಹೊಂದಿರುವ ಎನ್.ಸಿ.ಸಿ.ಯ ಅಧ್ಯಕ್ಷರಾಗಿ ವಿಶ್ವಭಾರತಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಬಿಪ್ ಲ್ಯಾಬ್ ಲೋಹಾ ಚೌಧುರಿ; ಉಪಾಧ್ಯಕ್ಷರಾಗಿ ಮಕನ್ ಲಾಲ್ ಚತುರ್ವೇದಿ ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಂವಹನ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಜಿ. ಸುರೇಶ್ ಹಾಗೂ ಮಹಾಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ವರ ಉಕ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ ಚುನಾಯಿತರಾಗಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ