ಬೆಳಗಾವಿಯಲ್ಲಿ ಆಸ್ತಿ ವಿವಾದ: ಅಳಿಯನ ಮೇಲೆಯೇ ಮಾವನಿಂದ ಫೈರಿಂಗ್

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಳಿಯನ ಮೇಲೆ ಮಾವನಿಂದ ಫೈರಿಂಗ್ ಮಾಡಿರುವಂತಹ ಘಟನೆ ನಡೆದಿದೆ. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ದಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಲಾಗಿದೆ. ಸದ್ಯ ಮಾವನನ್ನು ಬಂಧಿಸಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಬೆಳಗಾವಿಯಲ್ಲಿ ಆಸ್ತಿ ವಿವಾದ: ಅಳಿಯನ ಮೇಲೆಯೇ ಮಾವನಿಂದ ಫೈರಿಂಗ್
ಮಾವ ಧನಪಾಲ್ ಆಸಂಗಿ, ಅಳಿಯ ಶಾಂತಿನಾಥ
Edited By:

Updated on: Mar 18, 2024 | 5:19 PM

ಬೆಳಗಾವಿ, ಮಾರ್ಚ್​​ 18: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಳಿಯನ ಮೇಲೆ ಮಾವನಿಂದ ಫೈರಿಂಗ್ (firing) ಮಾಡಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ಕೃತ್ಯ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ ಆಲಗೂರು (32) ಮೇಲೆ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ದಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ ಧನಪಾಲ್. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊಟ್ಟೆ ಭಾಗಕ್ಕೆ ಗುಂಡು ತಾಗಿದ್ದು, ಶಾಂತಿನಾಥ್ ಸ್ಥಿತಿ ಗಂಭೀರವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯ ಹಿನ್ನೆಲೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ಸವಾರ ಸಾವು

ಹಾಸನ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ: 10 ಕೋಟಿ ರೂ ವಜ್ರವನ್ನು 3 ಕೋಟಿಗೆ ಕೊಡುವುದಾಗಿ ಹೇಳಿ ವಂಚನೆ: ನಾಲ್ವರ ಬಂಧನ

ಗೋಣಿಬೀಡು ಗ್ರಾಮದ ಶರತ್ (26) ಮೃತ ಯುವಕ. ಟಿಪ್ಪರ್ ಲಾರಿ ಚಾಲಕನ ಅಜಗಾರೂಕತೆಯಿಂದ‌ ಅಪಘಾತ ನಡೆದಿದೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆ್ಯಪ್ ಆಧಾರಿತ ಬೈಕ್ ಚಾಲಕರನ್ನ ತಡೆದು ಕಿರುಕುಳ ಆರೋಪ

ಬೆಂಗಳೂರು: ಆ್ಯಪ್ ಆಧಾರಿತ ಬೈಕ್ ಚಾಲಕರನ್ನ ತಡೆದು ಕಿರುಕುಳ ಆರೋಪ ಕೇಳಿಬಂದಿದ್ದು, ಆ್ಯಪ್​​ ಆಧಾರಿತ ಬೈಕ್, ಆಟೋ ಚಾಲಕನ ನಡುವೆ ಗಲಾಟೆ ಉಂಟಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆ್ಯಪ್ ಆಧಾರಿತ ಬೈಕ್ ಚಾಲಕರು, ಆಟೋ ಚಾಲಕನನ್ನ ಪ್ರಶ್ನಿಸುತ್ತಿದ್ದಾಗ ಪ್ಯಾಂಟ್ ಬಿಚ್ಚಿಸಿ ಹೈಡ್ರಾಮಾವೇ ಮಾಡಿದ್ದಾರೆ. ಈ ಸಂಬಂಧ ಬೈಕ್ ಚಾಲಕರು ಪೋಸ್ಟ್ ಮಾಡಿ ದೂರು ನೀಡಿದ್ದಾರೆ.

ಪೆಂಡಾಲ್​ ಹಾಕಿದ್ದ ಹಣ ಕೇಳಿದ್ದಕ್ಕೆ ಕುಟುಂಬಸ್ಥರ ಮೇಲೆ ಹಲ್ಲೆ

ಕೋಲಾರ: ಪೆಂಡಾಲ್​ ಹಾಕಿದ್ದ ಹಣವನ್ನು ಕೇಳಿದ್ದಕ್ಕೆ ಮನೆಯ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ಜಿಲ್ಲೆಯ ಮಾಲೂರು ತಾಲ್ಲೂಕು ದೊಡ್ಡಶಿವಾರ ಗ್ರಾಮದಲ್ಲಿ ನಡೆದಿತ್ತು. ದೊಡ್ಡಶಿವಾರ ಗ್ರಾಮದ ಜಯರಾ ಹಾಗೂ ಅವರ ಪತ್ನಿ ಕೆಂಪಮ್ಮ ಮೇಲೆ ಹಲ್ಲೆ ಮಾಡಿದ್ದರು. ಗ್ರಾಮದ ಆಂಜಿ, ವೆಂಕಟಪ್ಪ, ಅನಿಲ್​, ಪ್ರತಾಪ್ ಸೇರಿ ಹಲವರಿಂದ ಹಲ್ಲೆ ಮಾಡಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us