ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?
ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದಾಗ ಈಶ್ವರಪ್ಪ ಅಕ್ರಮಗಳಿಕೆ ಆರೋಪ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು.ಈ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಆದೇಶ ರದ್ದು ಮಾಡಿತ್ತು.
ಬೆಂಗಳೂರು: ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಗೋಚರವಾಗಿದೆ.
ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದಾಗ ಈಶ್ವರಪ್ಪ ಅಕ್ರಮ ಗಳಿಕೆ ಆರೋಪ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಖಾಸಗಿ ದೂರು ದಾಖಲಾಗಿತ್ತು.ಈ ದೂರನ್ನು ಶಿವಮೊಗ್ಗ ಲೋಕಾಯುಕ್ತ ಕೋರ್ಟ್ ಆದೇಶ ರದ್ದು ಮಾಡಿತ್ತು. ಈಗ ಖಾಸಗಿ ದೂರು ಮರುಸ್ಥಾಪನೆಗೆ ಹೈಕೋರ್ಟ್ ಆದೇಶ ನೀಡಿದೆ.
2016ರಲ್ಲಿ ವಕೀಲ ಬಿ.ವಿನೋದ್ ಶಿವಮೊಗ್ಗ ಲೋಕಾಯುಕ್ತ ಕೋರ್ಟ್ಗೆ ಖಾಸಗಿ ದೂರು ದಾಖಲು ಮಾಡಿದ್ದರು. ಈಶ್ವರಪ್ಪ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಿಸಿದ್ದರು. ಲೋಕಾಯುಕ್ತ ಕೋರ್ಟ್ ಖಾಸಗಿ ದೂರನ್ನು ವಜಾಗೊಳಿಸಿತ್ತು. ವಜಾ ಆದೇಶ ಪ್ರಶ್ನಿಸಿ ಬಿ.ವಿನೋದ್ ಅರ್ಜಿ ಹೈಕೋರ್ಟ್ಗೆ ಮನವಿ ಮಾಡಿದ್ದರು. ಈಗ ಹೈಕೋರ್ಟ್ ಈ ಪ್ರಕರಣದಲ್ಲಿ ಮಹತ್ವದ ಆದೇಶ ಹೊರಡಿಸಿದ್ದು,ದೂರ ಮರುಪರಿಗಣಿಸಲು ಶಿವಮೊಗ್ಗ ಕೋರ್ಟ್ಗೆ ಸೂಚನೆ ನೀಡಿದೆ.
ಹೈಕೋರ್ಟ್ ಆದೇಶದಂತೆ ಲೋಕಾಯುಕ್ತ ಕೋರ್ಟ್ ಈ ಅರ್ಜಿಯನ್ನು ಸ್ವೀಕರಿಸಬೇಕಾಗುತ್ತದೆ. ಅಲ್ಲದೆ, ಈ ಬಗ್ಗೆ ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡ ನಡೆಸಲಿದೆ.
‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ
Published On - 9:06 pm, Sat, 19 December 20