ಕೇಂದ್ರದ ವಿರುದ್ಧ ನಾಳೆ ದೆಹಲಿ ಗಡಿಗಳಲ್ಲಿ ಪ್ರತಿಭಟನೆಗೆ ತೀರ್ಮಾನ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಿಷ್ಟು

ದೆಹಲಿಯ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ ರೈತರು ತೆರಳಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್​ ಪ್ರತಿಕ್ರಿಯಿಸಿದ್ದು, ಕೇಂದ್ರದ ವಿರುದ್ಧ ನಾಳೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆಗೆ ತೀರ್ಮಾನ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಸಚಿವರ ಜೊತೆ ಸಭೆ ನಡೆಯಲಿದೆ. ಸಭೆ ಬಳಿಕ ನಾಳಿನ ಹೋರಾಟದ ರೂಪರೇಷೆ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.

ಕೇಂದ್ರದ ವಿರುದ್ಧ ನಾಳೆ ದೆಹಲಿ ಗಡಿಗಳಲ್ಲಿ ಪ್ರತಿಭಟನೆಗೆ ತೀರ್ಮಾನ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಿಷ್ಟು
ರೈತ ಮುಖಂಡ ಕುರುಬೂರು ಶಾಂತಕುಮಾರ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 12, 2024 | 2:59 PM

ನವದೆಹಲಿ, ಫೆಬ್ರವರಿ 12: ಕೇಂದ್ರದ ವಿರುದ್ಧ ನಾಳೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆಗೆ ತೀರ್ಮಾನ ಮಾಡಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ (kurubur shanthakumar) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಕೇಂದ್ರ ಸಚಿವರ ಜೊತೆ ಸಭೆ ನಡೆಯಲಿದೆ. ಸಭೆ ಬಳಿಕ ನಾಳಿನ ಹೋರಾಟದ ರೂಪರೇಷೆ ಘೋಷಣೆಯಾಗಲಿದೆ. ಭರವಸೆಗಳನ್ನು ನೀಡಿ 1 ವರ್ಷವಾದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ, ಬೆಂಬಲ ಬೆಲೆ ಕಾನೂನು ಹಾಗೂ ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ಮನವಿ ಮಾಡದ್ದೆವು. ಕೇಂದ್ರ ಬಿಜೆಪಿ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ. ನಾಳಿನ ಪ್ರತಿಭಟನೆಗೂ ಮುನ್ನ ದೆಹಲಿಗೆ ಆಗಮಿಸುವ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ 100ಕ್ಕೂ ಹೆಚ್ಚು ರೈತರನ್ನು ಮಧ್ಯಪ್ರದೇಶದ ಭೋಪಾಲ್​ನಲ್ಲಿ  ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ, ನನ್ನ ಪತ್ನಿ ಸೇರಿ ಹಲವರಿಗೆ ಗಾಯವಾಗಿದೆ ಎಂದು ಹೇಳಿದ್ದಾರೆ.

ದೆಹಲಿಯ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲು ರೈತರು ತೆರಳಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ 70 ರೈತರು ಭೋಪಾಲ್​ನಲ್ಲಿ ಪೊಲೀಸ್ ವಶಕ್ಕೆ

ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‌ ರಾಜ್ಯಗಳ ರೈತರು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ದೆಹಲಿಗೆ ಯಾತ್ರೆ ಹೊರಡಲು ಸಜ್ಜಾಗಿದ್ದಾರೆ. ಹೀಗಾಗಿ, ಪೊಲೀಸರು ದೆಹಲಿ-ಉತ್ತರಪ್ರದೇಶ ಗಡಿಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿದ್ದಾರೆ. ಹರಿಯಾಣ, ಪಂಜಾಬ್‌ ಮತ್ತು ಉತ್ತರಪ್ರದೇಶ ಗಡಿಗಳಲ್ಲಿ ಹೈಅಲರ್ಟ್‌ ವಹಿಸಿದ್ದಾರೆ. ಹರಿಯಾಣದ ಹಿಸಾರ್‌ ಗಡಿಯಲ್ಲಿ ಸಿಮೆಂಟ್‌ ಬ್ಯಾರಿಕೇಡ್‌ಗಳನ್ನ ಅಳವಡಿಸಲಾಗಿದೆ.

ತೆಲಂಗಾಣ ಮಾದರಿಯಲ್ಲಿ ರೈತರ ಸಾಲ ಮನ್ನಾಕ್ಕೆ ಆಗ್ರಹ: ಬಿಸಿಲಲ್ಲಿ ಧರಣಿ 

ಬೆಳಗಾವಿ: ತೆಲಂಗಾಣ ಮಾದರಿಯಲ್ಲಿ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ನಗರದಲ್ಲಿ ನೇಗಿಲಯೋಗಿ ರೈತ ಸಂಘದಿಂದ ಪ್ರತಿಭಟನೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಒಳಗೆ ರೈತರನ್ನ ಬಿಡದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಕಚೇರಿ ಎದುರಿನ ರಸ್ತೆ ತಡೆ ಮಾಡಿ ಬಿರು ಬಿಸಿಲಿನಲ್ಲಿ ಧರಣಿ ಮಾಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಬರಗಾಲದಿಂದ 1.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶ, 119 ಕೋಟಿ ರೂ. ನಷ್ಟ

ಏಕಾಏಕಿ ರಸ್ತೆ ತಡೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು, ರೈತರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ರಸ್ತೆಯಲ್ಲಿ ಕುಳಿತು ರೈತರು ಧರಣಿ ಮಾಡಿದ್ದಾರೆ. ಸ್ಥಳಕ್ಕೆ ಬಂದ್ ಪಿಎಸ್ಐ ಜೊತೆಗೆ ರೈತ ಮುಖಂಡ ರವಿ ಪಾಟೀಲ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಸಾಲಮನ್ನಾ ಜೊತೆಗೆ ಖಾನಾಪುರ ತಾಲೂಕು ಅಭಿವೃದ್ಧಿ ನಿಟ್ಟಿನಲ್ಲಿ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಲಾಗಿದೆ.

ವರದಿ: ಅಜೇಯ್​, ನವದೆಹಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ