ಗ್ಯಾರಂಟಿಗಳಿಗೆ ಎಸ್​ಸಿ ಎಸ್​ಟಿ ಹಣ: ಕಾಂಗ್ರೆಸ್​ನಿಂದ ದೂರ ಸರಿಯುತ್ತಿರುವ ದಲಿತರು!

ಎಸ್​ಸಿ ಎಸ್​ಟಿ ಅನುದಾನಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದರ ವಿರುದ್ಧ ದಲಿತ ಸಂಘಟನೆಗಳ ಸದಸ್ಯರು ಶುಕ್ರವಾರ ಕಾಂಗ್ರೆಸ್​ನ ದಲಿತ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯನ್ನು ಮುಂದುವರಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ದಲಿತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿಜೆಪಿಯೂ ಮುಂದಾಗಿದೆ.

ಗ್ಯಾರಂಟಿಗಳಿಗೆ ಎಸ್​ಸಿ ಎಸ್​ಟಿ ಹಣ: ಕಾಂಗ್ರೆಸ್​ನಿಂದ ದೂರ ಸರಿಯುತ್ತಿರುವ ದಲಿತರು!
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 10, 2024 | 5:08 PM

ಬೆಂಗಳೂರು, ಆಗಸ್ಟ್ 10: ಮೈಸೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಆದಾಗ್ಯೂ, ಎಸ್​​​ಸಿ ಎಸ್​​ಟಿ ಅನುದಾನದಿಂದ ಸುಮಾರು 25,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ ಎಂಬ ಆರೋಪಗಳ ಕಾರಣ ದಲಿತ ವಿಚಾರವಾದಿಗಳ ಒಂದು ವಿಭಾಗ ದೂರ ಉಳಿದಿದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧದ ಈ ಸಿಟ್ಟು ಮುಂದಿನ ದಿನಗಳಲ್ಲಿ ಹೆಚ್ಚು ಗೋಚರಿಸುವ ಸಾಧ್ಯತೆ ಇದೆ.

ಇದು ನಮ್ ಪ್ರತಿಭಟನೆಯ ಆರಂಭವಷ್ಟೆ. ಎಸ್‌ಸಿ, ಎಸ್‌ಟಿಗಳಿಗೆ ಮೀಸಲಾದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವವರ ವಿರುದ್ಧ ಮಾತನಾಡದ ಶಾಸಕರಿಗೆ ಘೆರಾವ್ ಹಾಕುವುದನ್ನು ನಾವು ಮುಂದುವರಿಸುತ್ತೇವೆ. ಅವರ ಜನಾಂದೋಲನ ಸಮಾವೇಶದಲ್ಲಿ ಪಾಲ್ಗೊಳ್ಳಲು ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಡಿಎಸ್‌ಎಸ್ ಮುಖಂಡ ಮಾವಳ್ಳಿ ಶಂಕರ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಮಾವಳ್ಳಿ ಶಂಕರ್ ಮತ್ತು ಖ್ಯಾತ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ನೇತೃತ್ವದಲ್ಲಿ ದಲಿತ ಸಂಘಟನೆಗಳ ಸದಸ್ಯರು ದಲಿತ ಶಾಸಕರಾದ ಬಂಗಾರಪೇಟೆಯ ಎಸ್‌ಎನ್ ನಾರಾಯಣಸ್ವಾಮಿ ಮತ್ತು ಕೋಲಾರ ಜಿಲ್ಲೆಯ ಕೆಜಿಎಫ್‌ನ ರೂಪಕಲಾ ಶಶಿಧರ್ ಅವರ ನಿವಾಸದ ಮುಂದೆ ಪ್ರತಿಭಟನೆ ಶುಕ್ರವಾರ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಚಡ್ಡಿ ಕಪ್ಪಾಗಿದೆ; ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯ

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಕೆಲವು ದಲಿತ ಸಂಘಟನೆಗಳೊಂದಿಗೆ ಸಭೆ ನಡೆಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್