Anganavadi toilet: ಅಂಗನವಾಡಿಗಳಲ್ಲಿ ಶೌಚಾಲಯ ಇಲ್ಲ! ಅಧಿಕಾರಿಗಳ ವಿರುದ್ಧ ಜಿ.ಪಂ. ಸದಸ್ಯರು ಆಕ್ರೋಶ, ಧರಣಿ
Anganavadi toilet: ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸದೇ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಧರಿಣಿಗೆ ಕುಳಿತಿದ್ದಾರೆ.
ರಾಯಚೂರು: ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸದೇ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಧರಣಿಗೆ ಕುಳಿತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಸಿಟ್ಟಿಗೆದ್ದಿದ್ದಾರೆ.
120 ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯಗಳ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದೆ. ಈ ಕುರಿತಂತೆ ಕಾಮಗಾರಿ ಮಾಡಬೇಕಿದ್ದ ಏಜೆನ್ಸಿ ಬೇಜವಾಬ್ದಾರಿ ತೋರಿದೆ. ಇದು 2016-17ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನ. ಈ ಅನುದಾನದ ಹಣ 4 ವರ್ಷಗಳಿಂದ ಖಜಾನೆಯಲ್ಲಿಯೇ ಉಳಿದಿದೆ. ಈ ಕುರಿತಂತೆ ಅಧಿಕಾರಿಗಳ ನಿರ್ಲಕ್ಷ್ಯದಿಂದ 4 ವರ್ಷಗಳಿಂದಲೂ ಅನುದಾನ ಬಂದ ಹಣ ಹಾಗೇಯೇ ಉಳಿದಿದೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸಿಟ್ಟಿಗೆದ್ದಿದ್ದಾರೆ.
Published On - 4:44 pm, Fri, 12 February 21