AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲಾಖೆಗೆ ಒಂದೂವರೆ ಸಾವಿರ ಕೋಟಿ ಅನುದಾನ ಬರುವಾಗ ಗುತ್ತಿಗೆದಾರರ 6 ಸಾವಿರ ಕೋಟಿ ಬಾಕಿ ಬಿಲ್ ಕೊಡುವುದು ಹೇಗೆ?: ಸತೀಶ್ ಜಾರಕಿಹೊಳಿ

ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಕೆಂಪಣ್ಣ ನೇತೃತ್ವದಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ಬಾಕಿ ಬಿಲ್ ನೀಡಿ, ಇಲ್ಲದಿದ್ದರೆ ವಿಷ ಕೊಡಿ ಎಂದು ಡಿ.ಕೆಂಪಣ್ಣ ಅವರು ಸ್ಥಳಕ್ಕೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹೇಳಿದ್ದಾರೆ. ಈ ವೇಳೆ ಸಚಿವರು ಅನುದಾನದ ಕೊರತೆ ಬಗ್ಗೆ ಹೇಳಿಕೊಂಡಿದ್ದಾರೆ.

ಇಲಾಖೆಗೆ ಒಂದೂವರೆ ಸಾವಿರ ಕೋಟಿ ಅನುದಾನ ಬರುವಾಗ ಗುತ್ತಿಗೆದಾರರ 6 ಸಾವಿರ ಕೋಟಿ ಬಾಕಿ ಬಿಲ್ ಕೊಡುವುದು ಹೇಗೆ?: ಸತೀಶ್ ಜಾರಕಿಹೊಳಿ
ಇಲಾಖೆಗೆ ಒಂದೂವರೆ ಸಾವಿರ ಕೋಟಿ ಅನುದಾನ ಬರುವಾಗ ಗುತ್ತಿಗೆದಾರರ 6 ಸಾವಿರ ಕೋಟಿ ಬಾಕಿ ಬಿಲ್ ಕೊಡುವುದು ಹೇಗೆ ಎಂದು ಹೇಳಿದ ಸಚಿವ ಸತೀಶ್ ಜಾರಕಿಹೊಳಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ| Edited By: Rakesh Nayak Manchi|

Updated on:Dec 14, 2023 | 5:39 PM

Share

ಬೆಳಗಾವಿ, ಡಿ.14: ಕಾಮಗಾರಿ ಮುಕ್ತಾಯಗೊಂಡರೂ ಬಿಲ್ ಪಾವತಿಸದ ಹಿನ್ನೆಲೆ ಗುತ್ತಿಗೆದಾರರು ಬೆಳಗಾವಿ (Belagavi) ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಜೊತೆ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (D Kempanna), “ನಮ್ಮ ಬಾಕಿ ಬಿಲ್ ನೀಡಿ, ಇಲ್ಲದಿದ್ದರೆ ವಿಷ ಕೊಡಿ” ಎಂದಿದ್ದಾರೆ. ಈ ವೇಳೆ ಸಚಿವರು ಅನುದಾನದ ಕೊರತೆ ಬಗ್ಗೆ ಹೇಳಿಕೊಂಡಿದ್ದಾರೆ.

ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ಸುವರ್ಣ ವಿಧಾನಸೌಧದ ಬಳಿ ಗುತ್ತಿಗೆದಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಸತೀಶ್ ಜಾರಕಿಹೊಳಿ ಕೆಂಪಣ್ಣ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ, ನಮ್ಮ ಬಾಕಿ ಬಿಲ್ ನೀಡಿ, ಇಲ್ಲದಿದ್ದರೆ ವಿಷ ಕೊಡಿ ಎಂದು ಕೆಂಪಣ್ಣ ಹೇಳಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಈ ವೇಳೆ ಬುಧವಾರ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಸತೀಶ್ ಜಾರಕಿಹೊಳಿ ಅವರು ಕೆಂಪಣ್ಣ ಅವರಿಗೆ ಭರವಸೆ ನೀಡಿದ್ದಾರೆ ಬರುವ ಬುಧವಾರ ಒಂದೊಂದಾಗಿ ನಿಮ್ಮ ಬೇಡಿಕೆಗಳನ್ನು ಆಲಿಸೋಣ. ಬಹಳಷ್ಟು ಬೇಡಿಕೆಗಳಿವೆ, ಬಿಲ್ ಪಾವತಿ ಆಗದೆ ಇರುವ ಸಮಸ್ಯೆಗಳಿವೆ. ಬಿಲ್ ಆಗದೆ ಇರುವುದಕ್ಕೆ ಕಾರಣ ನಿಮಗೂ ಗೊತ್ತಿದೆ, ನಮಗೂ ಗೊತ್ತಿದೆ ಎಂದರು.

ನಮ್ಮ ಇಲಾಖೆಗೆ ಒಂದೂವರೆ ಸಾವಿರ ಕೋಟಿ ಅನುದಾನ ಬರುತ್ತದೆ. ಆದರೆ ಗುತ್ತಿಗೆದಾರರ ಬಾಕಿ ನೀಡಬೇಕಾಗಿರುವುದು 6 ಸಾವಿರ ಕೋಟಿ ರೂಪಾಯಿ. ಹೆಚ್ಚಿನ ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಕೇಳಿದ್ದೇವೆ. ಮುಂದಿನ ಬುಧವಾರ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸುವುದಾಗಿ ಭರವಸೆ ನೀಡಿದರು.

ಮುಂದಿನ ವರ್ಷ ಹೆಚ್ಚಿನ ಅನುದಾನ ನೀಡಿದರೆ ಗುತ್ತಿಗೆದಾರರನ್ನು ಒಂದ ಹಂತಕ್ಕೆ ತರುತ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ ಹೇಳಿದರಲ್ಲದೆ, ಬೇಡಿಕೆಗಳ ಬಗ್ಗೆ ಚರ್ಚಿಸುವ ಭರವಸೆ ಮೇರೆಗೆ ಗುತ್ತಿಗೆದಾರರು ಪ್ರತಿಭಟನೆಯನ್ನು ಹಿಂಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Thu, 14 December 23

Follow Us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ