AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 PSI Recruitment Scam: ಮರು ಪರೀಕ್ಷೆ ರದ್ದುಗೊಳಿಸುವಂತೆ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ, ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ

ಪಿಎಸ್​ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕೈಗೊಂಡ ಮರು ಪರೀಕ್ಷೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿ ಅಭ್ಯರ್ಥಿಗಳು ಬೆಂಗಳೂರು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನಿಡಿದ ಸಿಎಂ ಬಸವರಾಜ ಬೊಮ್ಮಾಯಿ, ಮನವಿ ಪರಿಶೀಲಿಸುವುದಾಗಿ ಹೇಳಿದ್ದಾರೆ.

545 PSI Recruitment Scam: ಮರು ಪರೀಕ್ಷೆ ರದ್ದುಗೊಳಿಸುವಂತೆ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ, ಸ್ಥಳಕ್ಕೆ ಸಿಎಂ ಬೊಮ್ಮಾಯಿ ಭೇಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 28, 2022 | 2:20 PM

Share

ಬೆಂಗಳೂರು: 545 ಪಿಎಸ್​ಐ ಹುದ್ದೆಗಳ ಭರ್ತಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ(PSI Recruitment Scam) ಪ್ರಕರಣ ಸಂಬಂಧ ರಾಜ್ಯ ಸರ್ಕಾರ ತೀರ್ಮಾನಿಸಿದ ಮರು ಪರೀಕ್ಷೆ (Re Exam)ಯನ್ನು ಕೈಬಿಡುವಂತೆ ಒತ್ತಾಯಿಸಿ ನಗರದ ಫ್ರೀಡಂಪಾರ್ಕ್​ (Freedom park)ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ (Protest) ನಡೆಸಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ನೀಡುವ ಸಲುವಾಗಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಕೂಡಲೇ ನಿರ್ಧಾರದಿಂದ ಹಿಂದೆಸರಿದು ಪ್ರಾಮಾಣಿಕವಾಗಿ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಪತ್ರ ನೀಡುವಂತೆ ಅಭ್ಯರ್ಥಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಭ್ಯರ್ಥಿಗಳು ಒಬ್ಬೊಬ್ಬರಾಗಿಯೇ ಫ್ರೀಡಂಪಾರ್ಕ್​ಗೆ ಆಗಮಿಸಿ ಪ್ರತಿಭಟನೆ ಆರಂಭಿಸಿದ್ದು, 300ಕ್ಕೂ ಹೆಚ್ಚು ಮಂದಿ ಜಮಾಯಿಸಿದ್ದಾರೆ. ಇವರಿಗೆ ಸಮತಾ ಸೈನಿಕ ದಳ, ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಇದನ್ನೂ ಓದಿ: PSI Recruimtnet Scam: ಶಾಂತಕುಮಾರ್​ ಬಂಧನ ಬೆನ್ನಲ್ಲೇ ಅಮೃತ್​ ಪೌಲ್​​ ವಿರುದ್ಧ ಗಂಭೀರ ಆರೋಪ: ಸಿಐಡಿ ವಿಚಾರಣೆ

ಈಗಲೇ ಭರವಸೆ ನೀಡಲು ಸಾಧ್ಯವಿಲ್ಲ

ಮರು ಪರೀಕ್ಷೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭೇಟಿ ನೀಡಿ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಅಭ್ಯರ್ಥಿಗಳು ಮರು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಪಿಎಸ್​ಐ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯುವವರೆಗೂ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ತಾಳ್ಮೆಯಿಂದ ಇರಬೇಕು. ನೀವು ನೀಡಿದ ಮನವಿ ಪತ್ರವನ್ನು ನಾನು ಪರಿಶೀಲಿಸುತ್ತೇನೆ ಎಂದರು.

ಇದನ್ನೂ ಓದಿ: PSI Exam Scam: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ‌ ನಡೆದಿರುವ ಬಗೆಗಿನ ಸಾಕ್ಷಿ ಹೇಳುವ ಪತ್ರ ಮತ್ತು ಚಾಟಿಂಗ್ ಸ್ಕ್ರಿನ್ ಶಾಟ್ಸ್ ವೈರಲ್

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆ ಹರಿದಿರುವುದು ತನಿಖೆ ವೇಳೆ ದೃಢವಾಗಿತ್ತು. ತನಿಖೆ ಹೆಚ್ಚಾದಂತೆ ಒಂದೊಂದು ಅಕ್ರಮ ಬೆಳಕಿಗೆ ಬರುತ್ತಿದೆ. ಬ್ಲೂಟೂತ್ ಬಳಕೆ ಮಾಡಿ ಎಕ್ಸಾಂ ಬರೆದಿರುವುದು, ಒಎಂಆರ್ ಪ್ರತಿಯನ್ನ ಎಕ್ಸಾಂ ಸೆಂಟರ್​ನಲ್ಲಿ ತಿದ್ದುಪಡಿ ಮಾಡಿರುವುದು, ನೇಮಕಾತಿ ವಿಭಾಗದಲ್ಲಿ ಒಎಂಆರ್ ಪ್ರತಿಯಲ್ಲಿ ಅಕ್ರಮ ತಿದ್ದುಪಡಿ ಮಾಡಿರುವುದು, ಸೀಟಿಂಗ್ ವ್ಯವಸ್ಥೆ ಮಾಡಿ ಅಕ್ರಮ ಎಸಗಿ ಬರೆದಿರುವುದು, ಸಂಪೂರ್ಣ ಹುದ್ದೆಯನ್ನು ಡೀಲ್ ಮಾಡಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:18 pm, Sat, 28 May 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​