ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ

ದಾವಣಗೆರೆಯಲ್ಲಿ ವಿಶೇಷ ಚೇತನ ವ್ಯಕ್ತಿಯೊಬ್ಬರು ಪ್ರತಿಭಟನೆಯಲ್ಲಿ ಭಾಗಿಯಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿಶೇಷ ಚೇತನ ವ್ಯಕ್ತಿಯ ಪ್ರತಿಭಟನೆ
ಪ್ರತಿಭಟನಾ ನಿರತ ವಿಶೇಷ ಚೇತನ ವ್ಯಕ್ತಿ

Updated on: Dec 05, 2020 | 9:28 AM

ದಾವಣಗೆರೆ: ವಿಶೇಷ ಚೇತನ ವ್ಯಕ್ತಿಯೋರ್ವರು ದಾವಣಗೆರೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿರುವ ಅವರು ಹೋರಾಟದಲ್ಲಿ ಭಾಗಿಯಾಗಿ ಘೋಷಣೆ ಕೂಗುತ್ತಿದ್ದಾರೆ. ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಳಗ್ಗೆಯಿಂದ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಅವರ ಉತ್ಸಾಹಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 9:27 am, Sat, 5 December 20