ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್, ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ

|

Updated on: Mar 28, 2021 | 11:10 AM

ಕೆಪಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಇಬ್ಬರ ವಿರುದ್ಧವೂ ಅನುಕ್ರಮವಾಗಿ ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದೆ.

ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್,  ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಯ ದೃಶ್ಯ
Follow us on

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸ್ಪೋಟಕ್ಕೆ ಸಂಬಂಧಿಸಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ರೇಸ್​ಕೋರ್ಸ್ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಲು ಆಗ್ರಹಿಸುತ್ತಿದ್ದಾರೆ.ಇತ್ತ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಷಡ್ಯಂತ್ರ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದಾರೆ. ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಹೀಗೆ ಇಬ್ಬರು ನಾಯಕರ ವಿರುದ್ಧವೂ ಪ್ರತಿಭಟನೆಗಳು ನಡೆಯುತ್ತಿವೆ.

ಸಿಡಿ ಗಲಾಟೆಯ ನಡುವೆಯು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಡಿ.ಕೆ.ಶಿವಕುಮಾರ್ ಬೆಳಗಾವಿಗೆ ತೆರಳಲಿದ್ದಾರೆ. ಮಧ್ಯಾಹ್ನ 1.40 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಲಿರುವ ಡಿ ಕೆ ಶಿವಕುಮಾರ್, ಸಂಜೆ 6 ಗಂಟೆಗೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6.30 ಕ್ಕೆ ಬೆಳಗಾವಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೋಳಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ.ಶಿವಕುಮಾರ್ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಪಾಪ.. ಅವರು ಒತ್ತಡದಲ್ಲಿದ್ದಾರೆ, ಮಾತನಾಡಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ನಡೆಸಿದ ಸುದ್ದಿಗೋಷ್ಠಿ ಬಗ್ಗೆ ಟಿವಿ9ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ಎಲ್ಲಾ ಆರೋಪಗಳಿಗೆ ಉತ್ತರಿಸುತ್ತ ಕೂರಲು ಆಗುವುದಿಲ್ಲ. ನನ್ನ ಬಳಿ ಯಾವುದೇ ಯುವತಿ ಬಂದಿಲ್ಲ, ಮಾಹಿತಿ ಇಲ್ಲ. ಕಾನೂನು ಇದೆ, ಅಧಿಕಾರಿಗಳು ಇದ್ದಾರೆ, ತನಿಖೆ ಮಾಡ್ತಾರೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಶಿವಕುಮಾರ್​ ಮಾತನಾಡಿದ್ದಾರೆ.

ಅವರದ್ದೇ ಸರ್ಕಾರವಿದೆ, ಯಾವುದೇ ಕ್ರಮಕೈಗೊಳ್ಳಬಹುದು. ಯಾವುದೇ ತನಿಖೆ ನಡೆಸಿ ಕ್ರಮಕೈಗೊಳ್ಳಬಹುದು. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಏನೋ ಸಮಸ್ಯೆ ಇರಬೇಕು, ಅವರ ವೈಯಕ್ತಿಕ ವಿಚಾರ. ಅದು ಅವರ ವೈಯಕ್ತಿಕ, ನನಗೂ ಅದಕ್ಕೂ ಸಂಬಂಧವಿಲ್ಲ. ನಿನ್ನೆ ಒಂದು ಮಾತಾಡುತ್ತಾರೆ, ಇಂದು ಒಂದು ಹೇಳುತ್ತಾರೆ, ನಾಳೆ ಮತ್ತೊಂದು ಹೇಳುತ್ತಾರೆ, ಎಲ್ಲದಕ್ಕೂ ಉತ್ತರಿಸಲಾಗಲ್ಲ. ನಾನು ನನ್ನ ಡ್ಯೂಟಿ ಮಾಡುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು.

ಇತ್ತ, ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರು ಮುನ್ನೆಲೆಗೆ ಬಂದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ನಾಯಕರು ಪೇಚಿಗೆ ಸಿಲುಕಿರುವುದು ತಿಳಿದುಬಂದಿದೆ. ಡಿಕೆಶಿ ವಿಚಾರಕ್ಕೆ ಮುಜುಗರ ಆಗುತ್ತಿದೆ ಎಂದು ‘ಕೈ’ ನಾಯಕರು ನಿಲುವು ತಾಳಿದ್ದಾರೆ. ಹಾಗಾಗಿ, ಡಿಕೆಶಿ ವಿಚಾರದಲ್ಲಿ ಪ್ರತಿಕ್ರಿಯೆ ನೀಡದಿರಲು ನಿರ್ಧಾರ ಕೈಗೊಂಡಿದ್ದಾರೆ. ಪ್ರತಿಕ್ರಿಯೆ ನೀಡದಿರಲು ಕೆಲ ಕಾರ್ಯಾಧ್ಯಕ್ಷರು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ: ಡಿಕೆಶಿಗೆ ಗಾಂ.. ಪದವನ್ನು ಬಳಸಬಾರದಿತ್ತು; ನನ್ನ ಮಾತನ್ನು ವಾಪಸ್ ಪಡೆದುಕೊಳ್ತೇನೆ -ರಮೇಶ್​ ವಿಷಾದ

ರಮೇಶ್ ಜಾರಕಿಹೊಳಿ ಬಿಜೆಪಿ ಸಂಸ್ಕೃತಿ ಬಿಂಬಿಸುವ ‘ದೊಡ್ಡ ದೊಡ್ಡ‘ ಮಾತಾಡಿದ್ದಾರೆ, ಇದು ಹೊಲಸುತನದ ಪರಮಾವಧಿ: ಕರ್ನಾಟಕ ಕಾಂಗ್ರೆಸ್