ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನ್ನದಾತರಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರು ನಗರದಲ್ಲಿರುವ ರಿಸರ್ವ್ ಬ್ಯಾಂಕ್ ಸಮೀಪದ ಸಾರ್ವಜನಿಕರ ಶಿಕ್ಷಣ ಇಲಾಖೆ ಮುಂದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯದ ರೈತರ ಸಾಲದ ನೀತಿಯನ್ನ ಬದಲಾವಣೆ ಮಾಡಬೇಕು, ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೆ ರೈತರು ಪ್ರತಿಭನೆ (Farmers Protest) ನಡೆಸುತ್ತಿದ್ದಾರೆ. ರಿಸರ್ವ್ ಬ್ಯಾಂಕ್ ಮುಂದೆ ಪ್ರತಿಭಟನೆಯನ್ನ ಹಮ್ಮಿಕೊಂಡಿರುವ ಹಿನ್ನೆಲೆ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸದಂತೆ ಹಾಗೂ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟಿಸುವಂತೆ ಪೊಲೀಸರು ಸೂಚಿಸದ್ದಾರೆ. ಆದರೆ ಪ್ರತಿಭಟನಾಕಾರರು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕಳ್ಳತನವಾಗಿದ್ದ ಲಕ್ಷಾಂತರ ರೂಪಾಯಿ ಚಿನ್ನ ಮಾರನೇ ದಿನ ಮನೆ ಬಾಗಿಲ ಮುಂದೆ ಪತ್ತೆ
ರಾಜ್ಯದ ರೈತರ ಸಾಲ ನೀತಿ ಬದಲಾಯಿಸಬೇಕು, ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಗೊಂಡಿದೆ. ಆರ್ಬಿಐ ಅಧಿಕಾರಿಗಳು ರೈತರ ಜೊತೆ ಮಾತನಾಡಬೇಕು, ರೈತರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ರೈತರು ಪಟ್ಟುಹಿಡಿದಿದ್ದಾರೆ.
ನೃಪತುಂಗ ರಸ್ತೆಯಲ್ಲಿರುವ ರಿಸರ್ಸ್ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಲು ರೈತರು ಸಿದ್ಧತೆ ನಡೆಸಿದ್ದರು. ಮುಂಜಾಗ್ರತಾ ಕ್ರಮವಾಗಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದ್ದು, ಆರ್ಬಿಐ ಕಚೇರಿ ಮುಂದೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ಒಂದು ಕೆಎಸ್ಆರ್ಪಿ ತುಕಡಿ, ಎರಡು ಹೊಯ್ಸಳ ವಾಹನ ಸ್ಥಳದಲ್ಲಿದ್ದು, ಒಬ್ಬರು ಎಸಿಪಿ, ಮೂವರು ಪಿಎಸ್ಐ, ಇಪ್ಪತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಪ್ರತಿಭಟನೆ ಕೈಮೀರಿದರೆ ರೈತರನ್ನು ವಶಕ್ಕೆ ಪಡೆಯಲು ಪೊಲೀಸರು ಬಿಎಂಟಿಸಿ ಬಸ್ಗಳ ನಿಯೋಜನೆ ಮಾಡಿದ್ದಾರೆ. ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಹಲಸೂರು ಗೇಟ್ ಎಸಿಪಿ ನಾರಾಯಣ ಸ್ವಾಮಿ ಅವರು ಆರ್ಬಿಐ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Bangalore Electricity Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 3 ದಿನ ವಿದ್ಯುತ್ ವ್ಯತ್ಯಯ, ಇಲ್ಲಿದೆ ವಿವರ
Published On - 9:44 am, Tue, 28 June 22