ಕಾಡಂಚಿನ ಗ್ರಾಮಗಳಿಗೆ ರಾತ್ರಿ ಬದಲು ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸಿ: ಈಶ್ವರ್ ಖಂಡ್ರೆ ಮನವಿ

ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸುವಂತೆ ಸಚಿವ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. ರಾತ್ರಿ ವೇಳೆ ಓಡಾಟದಿಂದ ವನ್ಯಜೀವಿ-ಮಾನವ ಸಂಘರ್ಷ ಉಂಟಾಗುತ್ತಿರುವುದರಿಂದ ರಾತ್ರಿ ಬದಲು ಹಗಲಿನಲ್ಲೇ ವಿದ್ಯುತ್ ಪೂರೈಸುವಂತೆ ಮನವಿ ಮಾಡಿದ್ದಾರೆ.

ಕಾಡಂಚಿನ ಗ್ರಾಮಗಳಿಗೆ ರಾತ್ರಿ ಬದಲು ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸಿ: ಈಶ್ವರ್ ಖಂಡ್ರೆ ಮನವಿ
ಈಶ್ವರ್ ಖಂಡ್ರೆ ಮತ್ತು ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Nov 12, 2023 | 5:07 PM

ಬೆಂಗಳೂರು, ನ.12: ವನ್ಯಜೀವಿ-ಮಾನವ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ಹಗಲಿನಲ್ಲಿ 3 ಫೇಸ್ ವಿದ್ಯುತ್ ಪೂರೈಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ (Eshwar Khandre) ಮನವಿ ಮಾಡಿದ್ದಾರೆ. ರಾತ್ರಿ ವೇಳೆ ಓಡಾಟದಿಂದ ವನ್ಯಜೀವಿ-ಮಾನವ ಸಂಘರ್ಷ ಉಂಟಾಗುತ್ತಿದೆ. ಹೀಗಾಗಿ ರಾತ್ರಿ ಬದಲು ಹಗಲಿನಲ್ಲೇ ವಿದ್ಯುತ್ ಪೂರೈಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದ ಖಂಡ್ರೆ, ರಾಜ್ಯಾದ್ಯಂತ ಕಾಡಿನಂಚಿನ ಪ್ರದೇಶಗಳಿಗೆ ಆನೆ, ಹುಲಿ, ಚಿರತೆ ಸೇರಿದಂತೆ ಹಲವು ಕಾಡುಪ್ರಾಣಿ ರಾತ್ರಿ ಹೊತ್ತಿನಲ್ಲೇ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾಣ ಹಾನಿ ಆಗುತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

ಕಾಡಿನಂಚಿನ ಗ್ರಾಮಗಳಿಗೆ ರಾತ್ರಿ ವೇಳೆ 3 ಫೇಸ್ ವಿದ್ಯುತ್ ಪೂರೈಸಿದರೆ ರೈತರು ಪಂಪ್‌ಸೆಟ್ ಆನ್ ಮಾಡಲು ಮತ್ತು ಆಫ್ ಮಾಡಲು ಹೋಗುತ್ತಾರೆ. ಈ ವೇಳೆ ಕಾಡು ಪ್ರಾಣಿಗಳು ಕೂಡ ಸಂಚರಿಸುತ್ತವೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚುತ್ತಿದೆ. ಹೀಗಾಗಿ ಇಂತಹ ಪ್ರದೇಶಗಳಲ್ಲಿ ಹಗಲು ಹೊತ್ತಿನಲ್ಲೇ 3 ಫೇಸ್ ವಿದ್ಯುತ್ ಪೂರೈಕೆ ಮಾಡುವುದು ಸೂಕ್ತ ಎಂಬುದು ತಜ್ಞರ ಅಭಿಪ್ರಾಯ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳಿಗೆ ರಾತ್ರಿಯ ವೇಳೆ 3 ಫೇಸ್ ವಿದ್ಯುತ್ ಪೂರೈಸದಂತೆ ಹಾಗೂ ಹಗಲಿನಲ್ಲಿ ಪೂರೈಸುವಂತೆ ಇಂಧನ ಇಲಾಖೆಗೆ ನಿರ್ದೇಶನ ನೀಡುವಂತೆ ಇಂಧನ ಸಚಿವರನ್ನೂ ಕೋರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ