ಚಾಮರಾಜನಗರ ಆಕ್ಸಿಜನ್​ ದುರಂತದಲ್ಲಿ ಸತ್ತವರ ಕುಟುಂಬಕ್ಕೆ ತಕ್ಷಣ 2 ಲಕ್ಷ ರೂಪಾಯಿ ಪರಿಹಾರ ಕೊಡಿ: ಹೈಕೋರ್ಟ್ ವಿಭಾಗೀಯ ಪೀಠ

ಆಕ್ಸಿಜನ್ ಕೊರತೆಯಿಂದ ಸಾವಿಗೀಡಾದವರ ಕುಟುಂಬಸ್ಥರಿಗೆ ತಕ್ಷಣಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಎಜಿ ಪ್ರಭುಲಿಂಗ್ ನಾವದಗಿ ಹೇಳಿಕೆ ನೀಡಿದ್ದಾರೆ. ನೀವು ನಿರ್ಧರಿಸಿರುವ ಪರಿಹಾರ ತಕ್ಷಣ ನೀಡಿ, ಪರಿಹಾರದ ಪ್ರಮಾಣದ ಬಗ್ಗೆ ನಂತರ ವಿಚಾರಣೆ ಮಾಡಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಚಾಮರಾಜನಗರ ಆಕ್ಸಿಜನ್​ ದುರಂತದಲ್ಲಿ ಸತ್ತವರ ಕುಟುಂಬಕ್ಕೆ ತಕ್ಷಣ 2 ಲಕ್ಷ ರೂಪಾಯಿ ಪರಿಹಾರ ಕೊಡಿ: ಹೈಕೋರ್ಟ್ ವಿಭಾಗೀಯ ಪೀಠ
ಕರ್ನಾಟಕ ಹೈಕೋರ್ಟ್​
Follow us
|

Updated on: May 20, 2021 | 1:57 PM

ಚಾಮರಾಜನಗರ: ಆಕ್ಸಿಜನ್​ ಕೊರತೆಯ ಕಾರಣ ಮೇ 2ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ವಿಭಾಗೀಯ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಆಕ್ಸಿಜನ್ ಕೊರತೆಯಿಂದ ಸಾವಿಗೀಡಾದವರ ಕುಟುಂಬಸ್ಥರಿಗೆ ತಕ್ಷಣಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಎಜಿ ಪ್ರಭುಲಿಂಗ್ ನಾವದಗಿ ಹೇಳಿಕೆ ನೀಡಿದ್ದಾರೆ. ನೀವು ನಿರ್ಧರಿಸಿರುವ ಪರಿಹಾರ ತಕ್ಷಣ ನೀಡಿ, ಪರಿಹಾರದ ಪ್ರಮಾಣದ ಬಗ್ಗೆ ನಂತರ ವಿಚಾರಣೆ ಮಾಡಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಘಟನೆಯ ವಿವರ: ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಅದರ ಪರಿಣಾಮ 24 ಜನ ಮೃತಪಟ್ಟಿದ್ದಾರೆ ಎನ್ನಲಾಗಿದ್ದರೂ ನಂತರ ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನರು ಎಂದು ಉಲ್ಲೇಖಿಸಲಾಗಿತ್ತು.

ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 14 ಸಾವಾಗಿದೆ ಎಂದು ತಿಳಿಸಲಾಗಿತ್ತು. ಆದರೆ ಇವರೆಲ್ಲರಿಗೂ ಆಕ್ಸಿಜನ್ ಕೊರತೆ ಆಗಿದ್ದು ನಿಜ. ಆಕ್ಸಿಜನ್ ಕೊರತೆಯಾದ ನಂತರ 36 ಒಳರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ಪ್ರಕರಣ; ತನಿಖಾ ತಂಡ ವರದಿ ನೀಡಿದ್ರೂ ಸರ್ಕಾರ ಸೈಲೆಂಟ್, ಜೀವ ಹಿಂಡಿದವರಿಗೆ ಶಿಕ್ಷೆ ಯಾವಾಗ? 

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನ; ಹೈಕೋರ್ಟ್​ಗೆ ವರದಿ ಸಲ್ಲಿಕೆ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು