ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಕೇಸ್: ಶಾಸಕ ಭರತ್ ಶೆಟ್ಟಿಗೆ ಬಿಗ್ ರಿಲೀಫ್

ಬಿಜೆಪಿ ಶಾಸಕ ಭರತ್ ಶೆಟ್ಟಿ ಜುಲೈ 8 ಸೋಮವಾರದಂದು ನಡೆದ ಪ್ರತಿಭಟನೆಯಲ್ಲಿ ಹೇಳಿಕೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಎಫ್​ಐಆರ್​ ಕೂಡ ದಾಖಲಾಗಿತ್ತು. ಇದೀಗ ಭರತ್​ ಶೆಟ್ಟಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕಿದೆ.

ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಕೇಸ್: ಶಾಸಕ ಭರತ್ ಶೆಟ್ಟಿಗೆ ಬಿಗ್ ರಿಲೀಫ್
ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಕೇಸ್: ಶಾಸಕ ಭರತ್ ಶೆಟ್ಟಿಗೆ ಬಿಗ್ ರಿಲೀಫ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on:Jul 11, 2024 | 5:49 PM

ಮಂಗಳೂರು, ಜುಲೈ 11: ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಗೆ (Bharat Shetty) ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ. ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ದರು. ಜುಲೈ 8ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಸದಸ್ಯ ಕಾಂಗ್ರೆಸ್​​ನ ಅನಿಲ್ ಕುಮಾರ್ ನೀಡಿದ್ದ ದೂರು ಆಧರಿಸಿ BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತು. ಇನ್ನು ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್​​ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್

ಸೋಮವಾರ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಶಾಸಕ ಡಾ.ಭರತ್ ಶೆಟ್ಟಿ, ಸಂಸತ್ತಿನ ಒಳಗೆ ರಾಹುಲ್ ಗಾಂಧಿಗೆ ಕಪಾಳಮೋಕ್ಷ ಮಾಡಬೇಕು ಅನ್ನಿಸುತ್ತಿದೆ ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದರು.

ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದೇನು?

ರಾಹುಲ್ ಗಾಂಧಿ ಹಿಂದೂ ದೇವರಾದ ಶಿವನ ಚಿತ್ರವನ್ನು ಹಿಡಿದಿದ್ದಾರೆ. ಶಿವನು ತನ್ನ ಮೂರನೇ ಕಣ್ಣು ತೆರೆದರೆ, ಅವನು ಬೂದಿಯಾಗುತ್ತಾನೆ ಎಂದು ಆ ಹುಚ್ಚನಿಗೆ ತಿಳಿದಿಲ್ಲ. ಅವರು ಹಿಂದೂ ವಿರೋಧಿ ನೀತಿಯನ್ನು ಅಳವಡಿಸಿಕೊಂಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್​ಗೆ ದೂರು

ರಾಹುಲ್ ಗಾಂಧಿ ಒಬ್ಬ ಹುಚ್ಚ ಎಂಬುದು ಸ್ಪಷ್ಟವಾಗಿದೆ. ಹಿಂದೂಗಳು ತಮ್ಮ ಬಗ್ಗೆ ಏನು ಹೇಳಿದರೂ ಸದ್ದಿಲ್ಲದೆ ಕೇಳುತ್ತಾರೆ. ಅವರು ಸಂಸತ್ತಿನಲ್ಲಿ ಬೊಗಳಿದರೆ, ಸ್ಥಳೀಯ ನಾಯಕರು ಇಲ್ಲಿ ಬಾಲ ಅಲ್ಲಾಡಿಸಲು ಪ್ರಾರಂಭಿಸುತ್ತಾರೆ ಎಂದು ಶೆಟ್ಟಿ ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:26 pm, Thu, 11 July 24