Karnataka High Court: ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಪಿಎಸ್ ದಿನೇಶ್ ಕುಮಾರ್ ನೇಮಕ

Karnataka high court chief justice: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪಿಎಸ್ ದಿನೇಶ್ ಕುಮಾರ್ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆದಾಗ್ಯೂ, ಇವರ ಅಧಿಕಾರಾವಧಿ ಫೆಬ್ರವರಿ 24ಕ್ಕೆ ಕೊನೆಗೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಿಗೂ ಮೊದಲೇ ಅವರು ನಿವೃತ್ತರಾಗಲಿದ್ದಾರೆ.

Karnataka High Court: ಕರ್ನಾಟಕ ಹೈಕೋರ್ಟ್​​ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಪಿಎಸ್ ದಿನೇಶ್ ಕುಮಾರ್ ನೇಮಕ
ಕರ್ನಾಟಕ ಹೈಕೋರ್ಟ್
Follow us
Ganapathi Sharma
|

Updated on:Feb 01, 2024 | 7:24 AM

ನವದೆಹಲಿ, ಫೆಬ್ರವರಿ 1: ಕರ್ನಾಟಕ ಹೈಕೋರ್ಟ್‌ನ (Karnataka High Court) ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ (PS Dinesh Kumar) ಅವರನ್ನು ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮತಿ ನೀಡಿದೆ. ನ್ಯಾಯಮೂರ್ತಿ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಿಳಿಸಿದ್ದಾರೆ.

ಜನವರಿ 19 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಕೊಲೀಜಿಯಂ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಕುಮಾರ್ ಅವರನ್ನು ನೇಮಿಸಲು ಶಿಫಾರಸು ಮಾಡಿತ್ತು. ಆಗಿನ ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಅವರಿಗೆ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ನೀಡಿದ ನಂತರ ತೆರವಾದ ಸ್ಥಾನಕ್ಕೆ ಕುಮಾರ್ ಅವರನ್ನು ಶಿಫಾರಸು ಮಾಡಲಾಗಿತ್ತು.

ನ್ಯಾಯಮೂರ್ತಿ ಕುಮಾರ್ ಅವರು ಫೆಬ್ರವರಿ 24 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.

ಮತ್ತೊಂದು ನಿರ್ಧಾರದಲ್ಲಿ, ಜಾರ್ಖಂಡ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನ್ಯಾಯಾಂಗ ಅಧಿಕಾರಿ ಅರುಣ್ ಕುಮಾರ್ ರೈ ಅವರನ್ನು ಮೇಲ್ದರ್ಜೆಗೆ ಏರಿಸಲು ಅನುಮೋದನೆ ನೀಡಲಾಗಿದೆ.

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ ಪ್ರಮಾಣವಚನ

ಪ್ರಸನ್ನ ಬಿ ವರಾಳೆ ಅವರು ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಸಿಜೆಐ ಡಿವೈ ಚಂದ್ರಚೂಡ್ ಪ್ರಮಾಣವಚನ ಬೋಧಿಸಿದ್ದಾರೆ. ಡಿಸೆಂಬರ್​​ನಲ್ಲಿ ನ್ಯಾಯಮೂರ್ತಿ ಎಸ್​ಕೆ ಕೌಲ್​ ಅವರು ನಿವೃತ್ತರಾದ ನಂತರ ಸುಪ್ರೀಂ ಕೋರ್ಟ್​ನಲ್ಲಿ ಹುದ್ದೆ ಖಾಲಿಯಾಗಿತ್ತು. ಆ ಹುದ್ದೆಗೆ ವರಾಳೆ ಅವರ ಹೆಸರನ್ನು ಕೊಲೀಜಿಯಂ ಶಿಫಾರಸು ಮಾಡಿತ್ತು.

ನ್ಯಾಯಮೂರ್ತಿ ವರಾಳೆ ಅವರು 1962, ಜೂನ್ 23 ರಂದು ಕರ್ನಾಟಕದ ನಿಪಾಣಿಯಲ್ಲಿ ಜನಿಸಿದ್ದು ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನಿನಲ್ಲಿ ಪದವಿ ಪಡೆದುಕೊಂಡಿದ್ದಾರೆ. ಆಗಸ್ಟ್ 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ವೃತ್ತಿ ಜೀವನ ಆರಂಭಿಸಿದರು.

ಇದನ್ನೂ ಓದಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ ವರಾಳೆ: ಕರ್ನಾಟಕ ಹೈಕೋರ್ಟ್ ಸಿಜೆ ದಿನೇಶ್ ಕುಮಾರ್

61 ವರ್ಷದ ಪ್ರಸನ್ನ ಬಿ.ವರಾಳೆ ಅವರು ಎರಡು ದಶಕಗಳಿಂದ ಕಾನೂನು (ನಿರ್ದಿಷ್ಟವಾಗಿ ಸಿವಿಲ್, ಕ್ರಿಮಿನಲ್, ಕಾರ್ಮಿಕ ಮತ್ತು ಆಡಳಿತಾತ್ಮಕ ವಿಷಯಗಳು) ಅಭ್ಯಾಸ ಮಾಡಿದ್ದಾರೆ ಮತ್ತು ಈ ಹಿಂದೆ ಬಾಂಬೆ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಅಕ್ಟೋಬರ್ 2022 ರಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Thu, 1 February 24

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ