ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿದ ಪಿಎಸ್ಐ

ಬೇರೊಬ್ಬ ಯುವತಿಯ ಜೊತೆಗೆ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪಿಎಸ್​ಐನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಬೆಳಗಾವಿಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಹಿಂದೆಯೂ ಪತ್ನಿ ಮೇಲೆ ಹಲ್ಲೆ ಮಾಡಲಾಗಿತ್ತು. ಸದ್ಯ ಹಲ್ಲೆಗೊಳಗಾದ ಪತ್ನಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿದ ಪಿಎಸ್ಐ
ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿದ ಪಿಎಸ್ಐ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Aug 04, 2024 | 3:04 PM

ಬೆಳಗಾವಿ, ಆಗಸ್ಟ್​ 4: ಪಿಎಸ್​ಐನಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ (attack) ಮಾಡಿರುವಂತಹ ಘಟನೆ ಜಿಲ್ಲೆಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಎಸ್ಐ ಪತಿ ಉದ್ದಪ್ಪ ಕಟ್ಟಿಕಾರ​ ವಿರುದ್ಧ ಪತ್ನಿ ಪ್ರತಿಮಾ ಹಲ್ಲೆ ಆರೋಪ ಮಾಡಿದ್ದಾರೆ. ಉದ್ದಪ್ಪ ಯುವತಿ ಜೊತೆಗೆ ಅಕ್ರಮ ಸಂಬಂಧ (extramarital affairs) ಹೊಂದಿದ್ದ ಆರೋಪ ಮಾಡಲಾಗಿದ್ದು, ಅದನ್ನು ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರೇ ಪ್ರತಿಮಾ ಮೇಲೆ ಹಲ್ಲೆ ಮಾಡಿದ್ದು, ಕಣ್ಣು, ಕುತ್ತಿಗೆ ಭಾಗಕ್ಕೆ ಹಲ್ಲೆ ಉದ್ದಪ್ಪ ಹಲ್ಲೆ ಮಾಡಿದ್ದು, ಸದ್ಯ ಹಲ್ಲೆಗೊಳಗಾದ ಪ್ರತಿಮಾ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಾವಿಯ ರಾಮತೀರ್ಥನಗರದಲ್ಲಿ ಪತ್ನಿ ಹಾಗೂ ಮಕ್ಕಳು ಬಾಡಿಗೆ ಮನೆಯಲ್ಲಿದ್ದರು. ಈ ಹಿಂದೆಯೂ ಪತ್ನಿ ಮೇಲೆ  ಉದ್ದಪ್ಪ ಕಟ್ಟಿಕಾರ ಹಲ್ಲೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈಗ ಕೋರ್ಟ್ ಸೂಚನೆ ಮೇರೆಗೆ ಬೆಳಗಾವಿಗೆ ಬಂದಿದ್ದರು.

ಆಯತಪ್ಪಿ ಬೈಕ್​ ಸಮೇತ ನಾಲೆಗೆ ಬಿದ್ದಿದ್ದ ಸವಾರ ಶವವಾಗಿ ಪತ್ತೆ

ಬೆಳಗಾವಿ ತಾಲೂಕಿನ ಅಲತಗಾ ಗ್ರಾಮದ ಬಳಿ ಆಯತಪ್ಪಿ ಬೈಕ್​ ಸಮೇತ ನಾಲೆಗೆ ಬಿದ್ದಿದ್ದ ಸವಾರ ಶವವಾಗಿ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಕಾಲುವೆಯಿಂದ ಓಂಕಾರ್ ಮೃತದೇಹವನ್ನು ಎಸ್​ಡಿಆರ್​ಎಫ್​ ತಂಡ ಹೊರತೆಗೆದಿದೆ. ನಿನ್ನೆ ರಾತ್ರಿ ಬೈಕ್​ನಲ್ಲಿ ಹೊರಟಿದ್ದಾಗ ಸೋದರರು ಆಯತಪ್ಪಿ ಬಿದ್ದಿದ್ದರು.

ಇದನ್ನೂ ಓದಿ: ಬೆಳಗ್ಗೆ ಮಗಳ ಲಗ್ನ ಪತ್ರಿಕೆ ಹಂಚಿ ರಾತ್ರಿ ಡ್ಯೂಟಿಗೆ ಹೋಗಿದ್ದ ಅಧಿಕಾರಿ ದುರಂತ ಸಾವು

ಕಾಲುವೆಯಲ್ಲಿ ಈಜಿ ಜ್ಯೋತಿನಾಥ್ ಪಾಟೀಲ್ ದಡ ಸೇರಿದ್ದರು. ಆದರೆ ಕಾಲುವೆಯಲ್ಲಿ ಬೈಕ್‌ ಸಮೇತ ನಾಪತ್ತೆಯಾಗಿದ್ದ ಓಂಕಾರ್ ಶವ ಇದೀಗ ಪತ್ತೆ ಆಗಿದೆ. ಬೆಳಗ್ಗೆಯಿಂದ ಕಾರ್ಯಾಚರಣೆ‌ ನಡೆಸಿ ಶವ ಹೊರತೆಗೆಯಲಾಗಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಳ್ಳದ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ರಾಯಚೂರು: ಹಳ್ಳದ ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಹಲವರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಬಳಿ ನಡೆದಿದೆ. ಬಸ್‌ ಸ್ಟೇರಿಂಗ್ ರಾಡ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಸರ್ಕಾರಿ ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಪಿಎಸ್​ಐ ಮನೆಯಲ್ಲೇ ದರೋಡೆ, ಎಫ್​ಐಆರ್​ ದಾಖಲು: ಅನುಮಾನ ಹುಟ್ಟಿಸಿದ ಪೊಲೀಸರ ನಡೆ

ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಕೆಎಸ್​ಆರ್​ಟಿಸಿ ಬಸ್ ಇಳಿದಿದೆ. ಗಾಯಾಳುಗಳಿಗೆ ಮಾನ್ವಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ