Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರವೇ ಶಾಸಕ, ಅವರ ಪುತ್ರನ ರಕ್ಷಣೆ ಮಾಡುತ್ತಿದೆ; ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ ಆರೋಪ

ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮತ್ತು ಆವರ ಪುತ್ರನನ್ನು ರಾಜ್ಯ ಸರ್ಕಾರವೇ ರಕ್ಷಣೆ ಮಾಡುತ್ತಿದೆ ಎಂದು ಯಾದಗಿರಿ ಪಿಎಸ್​ಐ ಪರಶುರಾಮ್​ ಪತ್ನಿ ಶ್ವೇತಾ ಆರೋಪಿಸಿದ್ದಾರೆ. ಈ ಮಧ್ಯೆ, ಸಿಐಡಿ ತನಿಖೆಯೂ ಆರಂಭಗೊಂಡಿದ್ದು, ಪ್ರಕರಣ ಮುಚ್ಚಿಹಾಕಲೆಂದೇ ಸರ್ಕಾರ ಸಿಐಡಿಗೆ ವಹಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಪ್ರಕರಣದ ಒಟ್ಟಾರೆ ಬೆಳವಣಿಗೆಯ ಮಾಹಿತಿ ಇಲ್ಲಿದೆ.

ಸರ್ಕಾರವೇ ಶಾಸಕ, ಅವರ ಪುತ್ರನ ರಕ್ಷಣೆ ಮಾಡುತ್ತಿದೆ; ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ ಆರೋಪ
ಪಿಎಸ್​ಐ ಪರಶುರಾಮ್ ಪತ್ನಿ ಶ್ವೇತಾ
Follow us
ಅಮೀನ್​ ಸಾಬ್​
| Updated By: Ganapathi Sharma

Updated on: Aug 05, 2024 | 2:05 PM

ಬೆಂಗಳೂರು, ಆಗಸ್ಟ್ 5: ಯಾದಗಿರಿ ಪಿಎಸ್​ಐ ಪರಶುರಾಮ್​ ಅನುಮಾನಾಸ್ಪದ ಸಾವು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅದರಲ್ಲೂ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮತ್ತು ಆವರ ಪುತ್ರ ಪಿಎಸ್​ಐ ಬಳಿ ಲಕ್ಷ ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಎಫ್​ಐಆರ್​ ಆದ ಬಳಿಕ ಅವರಿಬ್ಬರು ದೆಹಲಿಗೆ ಹೇಗೆ ಹೋದರು? ಸರ್ಕಾರವೇ ಶಾಸಕ ಹಾಗೂ ಅವರ ಪುತ್ರನನ್ನು ರಕ್ಷಣೆ ಮಾಡುತ್ತಿದೆ ಎಂದು ಮೃತ ಪಿಎಸ್​ಐ ಪತ್ನಿ ಶ್ವೇತಾ ಕಿಡಿಕಾರಿದ್ದಾರೆ.

ಶಾಸಕರಿಗೆ ಹಣ ಕೊಡಲು ಪತ್ನಿ ಚಿನ್ನಾಭರಣ ಅಡವಿಟ್ಟಿದ್ದ ಎಂದ ಸ್ನೇಹಿತ

ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರನಿಗೆ ಹಣ ನೀಡಲು ಪಿಎಸ್​ಐ ಪರಶುರಾಮ ಪತ್ನಿಯ ಚಿನ್ನಾಭರಣ ಅಡವಿಟ್ಟಿದ್ದು ಬ್ಯಾಂಕ್​​ನಿಂದ ಪರ್ಸನಲ್ ಲೋನ್ ತಗೊಂಡಿದ್ದರಂತೆ. ಆದರೆ, ಶಾಸಕರು ಕೇಳಿದಷ್ಟು ಹಣ ಕೊಡಲು ಆಗಲ್ಲವೆಂದು ಹೇಳಿಕೊಂಡಿದ್ದ ಎಂದು ಸ್ನೇಹಿತ ಯರಿಸ್ವಾಮಿ ಆರೋಪಿಸಿದ್ದಾರೆ.

ಮತ್ತೊಂದೆಡೆ ಯಾದಗಿರಿ ಪಿಎಸ್ಐ ಪರಶುರಾಮ್​ ಸಾವಿಗೂ ಮುನ್ನ ಮಾತನಾಡಿದ್ದರು ಎನ್ನಲಾದ ವಿಡಿಯೋ ವೈರಲ್ ಆಗುತ್ತಿದೆ. ‘ನಾನು 2050 ರ ಮೇ 31 ರಂದು ನಿವೃತ್ತಿ ಆಗುತ್ತೇನೆ’ ಎಂದು ನಗರ ಠಾಣೆ ಎಸ್ಎಸ್​ಐ ಹಸನ್ ಪಟೇಲ್ ನಿವೃತ್ತಿ ವೇಳೆ ಮಾತನಾಡಿದ್ದರು. ಇದಾದ 1 ತಿಂಗಳ ಬಳಿಕ ಪರಶುರಾಮ್ ಮೃತಪಟ್ಟಿದ್ದಾರೆ.

ಪರಶುರಾಮ್​ ಪತ್ನಿಗೆ ಧೈರ್ಯ ತುಂಬಿದ ಹೆಚ್​ಡಿಕೆ

ಮೃತ ಪಿಎಸ್​ಐ ಪರಶುರಾಮ್​ ಸಾವಿನ ಪ್ರಕರವನ್ನೇ ವಿಪಕ್ಷಗಳು ಅಸ್ತ್ರವಾಗಿಸಿಕೊಂಡಿವೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ಅಬ್ಬರಿಸುತ್ತಿದ್ದಾರೆ. ಇದರ ನಡುವೆ ಪರಶುರಾಮ್ ಪತ್ನಿ ಶ್ವೇತಾ ಜತೆ ಫೋನ್​ನಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಧೈರ್ಯ ತುಂಬಿದ್ದಾರೆ.

ಶಾಸಕ ಚೆನ್ನಾರೆಡ್ಡಿ ಮತ್ತು ಆತನ ಪುತ್ರನನ್ನ ಇನ್ನೂ ಬಂಧಿಸಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು. ತನಿಖೆ ಮುಚ್ಚಿಹಾಕುವುದಕ್ಕೆಂದೇ ಸಿಒಡಿ ತನಿಖೆಗೆ ಕೊಟ್ಟಿದ್ದಾರೆ ಎಂದು ಅಶೋಕ್ ಗುಡುಗಿದರು.

ಇದನ್ನೂ ಓದಿ: PSI ಪರಶುರಾಮ್‌ ಸಾವು: ಸರ್ಕಾರ ಆದೇಶಿಸಿದ ಮರುದಿನವೇ ಯಾದಗಿರಿಗೆ ಸಿಐಡಿ ಎಂಟ್ರಿ, ಮೊದಲ ದಿನ ಏನೇನಾಯ್ತು?

ಈ ಮಧ್ಯೆ, ಮೃತ ಪಿಎಸ್​ಐ ಪರಶುರಾಮ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆಗಸ್ಟ್ 7ರಂದು ಭೇಟಿ ನೀಡಿ ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ