PSI Scam: ಹೊಸದಾಗಿ ಬರುವ ಆರೋಪಗಳ ಬಗ್ಗೆಯೂ ತನಿಖೆ: ಸಿಎಂ ಬೊಮ್ಮಾಯಿ

ಪೊಲೀಸ್ ಸಬ್​ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಕನಕಗಿರಿ ಬಿಜೆಪಿ ಶಾಸಕ ದಡೇಸುಗೂರು ಹೆಸರು ಪ್ರಸ್ತಾಪವಾಗಿದ್ದು, ಯಾರ ಮೇಲೆ ಆರೋಪ ಬಂದರೂ ತನಿಖೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

PSI Scam: ಹೊಸದಾಗಿ ಬರುವ ಆರೋಪಗಳ ಬಗ್ಗೆಯೂ ತನಿಖೆ: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಾಸಕ ದಢೇಸಗೂರು
Follow us
TV9 Web
| Updated By: Rakesh Nayak Manchi

Updated on:Sep 06, 2022 | 1:02 PM

ಬೆಂಗಳೂರು: ಪೊಲೀಸ್ ಸಬ್​ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಕನಕಗಿರಿ ಬಿಜೆಪಿ ಶಾಸಕ ಬಸವರಾಜ್ ದಢೇಸಗೂರು ಹೆಸರು ಪ್ರಸ್ತಾಪವಾಗಿದ್ದು, ಯಾರ ಮೇಲೆ ಆರೋಪ ಬಂದರೂ ತನಿಖೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪಿಎಸ್​ಐ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ, ಹೊಸದಾಗಿ ಬರುವ ಆರೋಪಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದರು.

ಪಿಎಸ್​ಐ ಹಗರಣಕ್ಕೆ ಸಂಬಂಧ ಕೊಪ್ಪಳ ಜಿಲ್ಲೆ ಕನಕಗಿರಿ ಬಿಜೆಪಿ ಶಾಸಕ ಬಸವರಾಜ್ ದಢೇಸಗೂರು ಮತ್ತು ನಿವೃತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಪರಸಪ್ಪ ಎಂಬವರು ಮಾತನಾಡಿದ ಆಡಿಯೋ ವೈರಲ್ ಆಗಿತ್ತು. ನೀಡಿದ್ದ 15 ಲಕ್ಷ ಹಣವನ್ನು ಕೇಳಲು ಶಾಸಕರಿಗೆ ಪರಸಪ್ಪ ಅವರು ಕರೆ ಮಾಡಿದ್ದರು. ಈ ವೇಳೆ ಪರಸಪ್ಪನನ್ನ ಶಾಸಕರು ತರಾಟೆಗೆ ತೆಗೆದುಕೊಂಡಿದ್ದು, ಇದರ ಆಡಿಯೋ ನಿನ್ನೆ ವೈರಲ್ ಆಗಿತ್ತು.

ಹಣದ ಮಾತುಕತೆಯ ಆಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪರಸಪ್ಪ ವರಸೆ ಬದಲಾಯಿಸಿದ್ದಾರೆ. ನಿನ್ನೆ ಆಡಿಯೋ ವೈರಲ್ ಆಗುತ್ತಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಪರಸಪ್ಪ. ಕಾರಟಗಿ ಪಟ್ಟಣ ಪಂಚಾಯತ್ ಸದಸ್ಯ ಆನಂದಪ್ಪ ನನಗೆ ಹಣ ಕೊಡಬೇಕಿತ್ತು. ಹಣದ ವಿಚಾರವಾಗಿ ಸುಮಾರು ದಿನಗಳಿಂದ ತಂಟೆ ತಕರಾರಿತ್ತು. ನಮ್ಮ ಸಮಾಜದವರಾದ ಶಾಸಕರ ಬಳಿ‌ ನಾವು ಬಗೆ ಹರಿಸಿ ಎಂದು ಹೋಗಿದ್ದೆವು. ನನ್ನ ಹಾಗೂ ಶಾಸಕರ ಮದ್ಯೆ ಯಾವುದೇ ದುಡ್ಡಿನ ವ್ಯವಹಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ‌ ನಿವಾಸಿಯಾಗಿರೋ ಪರಸಪ್ಪ, ಆಡಿಯೋ ಪ್ರಕರಣ ಸದ್ದು ಮಾಡುತ್ತಲೇ ಶಾಸಕರಿಗೆ ಹೆದರಿ ಉಲ್ಟಾ ಹೊಡೆದು ವಿಡಿಯೋ ಬಿಡುಗಡೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Tue, 6 September 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ