PSI Scam: ಪಿಎಸ್ಐ ನೇಮಕಾತಿ ಅಕ್ರಮದ ಪೂರ್ಣ ತನಿಖೆಗೆ ಸಜ್ಜಾದ ಸರ್ಕಾರ, ತಡೆಯಾಜ್ಞೆ ತೆರವಿಗೆ ಮನವಿ ಸಾಧ್ಯತೆ
ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪಿಎಸ್ಐ ನೇಮಕಾತಿ ಅಕ್ರಮದ ಪೂರ್ಣ ತನಿಖೆಗೆ ನೂತನ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಸಂಪೂರ್ಣ ತನಿಖೆಗೆ ಸಜ್ಜಾಗಿರುವ ಸರ್ಕಾರ, ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ
ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪಿಎಸ್ಐ ನೇಮಕಾತಿ ಅಕ್ರಮದ (PSI Scam) ಪೂರ್ಣ ತನಿಖೆಗೆ ನೂತನ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಸಂಪೂರ್ಣ ತನಿಖೆಗೆ ಸಜ್ಜಾಗಿರುವ ಸರ್ಕಾರ, ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ. ನ್ಯಾಯಯುತವಾಗಿ ಪರೀಕ್ಷೆ ಬರೆದು ತೇರ್ಗಡೆಯಾದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಮನವಿ ಸಲ್ಲಿಸುವ ವಿಚಾರವಾಗಿ ಈಗಾಗಲೇ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಜೊತೆ ಗೃಹಸಚಿವ ಡಾ. ಜಿ ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮುಂದಿನ ಸೋಮವಾರ ಮತ್ತೊಮ್ಮೆ ಎಜಿ ಜೊತೆ ಪರಮೇಶ್ವರ್ ಮಾತುಕತೆ ನಡೆಸಲಿದ್ದಾರೆ. ತನಿಖೆಗೆ ತೊಡಕಿರುವ ಕಾನೂನಾತ್ಮಕ ವಿಚಾರಗಳ ಕುರಿತು ಮಾತುಕತೆ ನಡೆಯಲಿದೆ. ಎಜಿ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಅವರು ತೀರ್ಮಾನಿಸಿದ್ದಾರೆ ಎನ್ನಲಾಹಗಿದೆ.
ಈ ಮಧ್ಯೆ, ಪಿಎಸ್ಐ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಈ ಸಂಬಂಧ ತಾಂತ್ರಿಕ ಹಾಗೂ ಕಾನೂನಾತ್ಮಕ ಅಂಶಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರು ಚರ್ಚೆ ನಡೆಸಲಿದ್ದಾರೆ. ತನಿಖೆಯೊಂದಿಗೆ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ.
ಇದನ್ನೂ ಓದಿ: PSI Scam: ಹೆಂಡತಿನ ತವರಿಗೆ ಕಳುಹಿಸಿ ಗರ್ಲ್ ಫ್ರೆಂಡ್ ಜೊತೆ ಎಂಜಾಯ್ ಮಾಡ್ತಾ ತಲೆಮರೆಯಿಸಿಕೊಂಡಿದ್ದ ಪಿಎಸ್ಐ ಅರೆಸ್ಟ್
ಈಗಾಗಲೇ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಇಲಾಖೆಗೆ ಸರ್ಜರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ