AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಪಿಎಸ್ಐ ‌ನೇಮಕಾತಿ -ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾ ನಾಯಕ್ ಹೈದ್ರಾಬಾದ್ ನಲ್ಲಿ ಬಂಧನ!

ಬಂಧಿತ ದಂಪತಿಯನ್ನು ಹೈದ್ರಾಬಾದ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ಶಾಂತಿಬಾಯಿ ದಂಪತಿ ಎಪ್ರಿಲ್ ಹತ್ತರಿಂದ ನಾಪತ್ತೆಯಾಗಿದ್ದರು. ಇವರಿಬ್ಬರಿಗಾಗಿ ಕಳೆದ 50 ದಿನಗಳಿಂದ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು.

PSI Recruitment Scam: ಪಿಎಸ್ಐ ‌ನೇಮಕಾತಿ -ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾ ನಾಯಕ್ ಹೈದ್ರಾಬಾದ್ ನಲ್ಲಿ ಬಂಧನ!
ಪಿಎಸ್ಐ ‌ನೇಮಕಾತಿ -ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾ ನಾಯಕ್ ಹೈದ್ರಾಬಾದ್ ನಲ್ಲಿ ಬಂಧನ!
TV9 Web
| Edited By: |

Updated on:May 30, 2022 | 4:35 PM

Share

ಕಲಬುರಗಿ: ಪಿಎಸ್ಐ ‌ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ (PSI Recruitment Scam)  ಮತ್ತಿಬ್ಬರು ಅಂದರ್ ಆಗಿದ್ದಾರೆ. ಇವರಲ್ಲೊಬ್ಬರು ಭಾವೀ ಮಹಿಳಾ ಪೊಲೀಸ್ ಸಬ್​ ಇನ್ಸ್​ ಪೆಕ್ಟರ್​ ಆಗಬೇಕಿದ್ದವರು, ಮತ್ತು ಆಕೆಯ ಪತಿ! ಹೌದು, ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾ ನಾಯಕ್ ಬಂಧನಕ್ಕೀಡಾಗಿದ್ದಾರೆ. ಇಂದು ಮುಂಜಾನೆ ಇಬ್ಬರನ್ನೂ ಬಂಧಿಸಿ, ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿರೋ ಸಿಐಡಿ ಕಚೇರಿಗೆ ತರೆತರಲಾಗಿದೆ. ಶಾಂತಿಬಾಯಿ ಮತ್ತು ಆಕೆಯ ಪತಿ ಬಸ್ಯಾ ನಾಯಕ್ ದಂಪತಿ ತಮ್ಮ ಇಬ್ಬರು ಮಕ್ಕಳ ಸಮೇತ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ.

ಹೈದ್ರಾಬಾದ್ ನಲ್ಲಿ ವಶಕ್ಕೆ: ಬಂಧಿತ ದಂಪತಿಯನ್ನು ಹೈದ್ರಾಬಾದ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ಶಾಂತಿಬಾಯಿ ದಂಪತಿ ಎಪ್ರಿಲ್ ಹತ್ತರಿಂದ ನಾಪತ್ತೆಯಾಗಿದ್ದರು. ಇವರಿಬ್ಬರಿಗಾಗಿ ಕಳೆದ 50 ದಿನಗಳಿಂದ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದರೊಂದಿಗೆ ಕಲಬುರಗಿ ಯಲ್ಲಿ ಪ್ರಕರಣದ ಸಂಬಂಧ ಬಂಧಿತರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.

ಪರೀಕ್ಷಾ ಹಗರಣದಲ್ಲಿ ಬ್ರೋಕರ್​​ಗಳಿಗೂ ಹರಿದಿದೆ ಹಣದ ಹೊಳೆ

ಬೆಂಗಳೂರು: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿದೆ. ಓರ್ವ ಪಿಎಸ್​ಐ ಅಭ್ಯರ್ಥಿ ನೇಮಕಾತಿ ಆಗ ಬೇಕು ಅಂದ್ರೆ ಕನಿಷ್ಠ ಮೂವರು ನಾಲ್ವರು ಬ್ರೋಕರ್​ಗಳ ಮೂಲಕ ಕೆಲಸ ಆಗ್ತಿತ್ತು. ಪ್ರತಿ ಬ್ರೋಕರ್​ಗಳ ಹಂತದಲ್ಲಿಯೂ ಕನಿಷ್ಠ ಹತ್ತು ಲಕ್ಷ ಹಣ ಕೊಡಬೇಕಿತ್ತು. ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತ ರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು. ಮೂವರು ನಾಲ್ವರು ಬ್ರೋಕರ್​ಗಳ ಹಂತದಲ್ಲಿ ಮೂವತ್ತು ನಲವತ್ತು ಲಕ್ಷ ಹಣ ನೀಡಲಾಗ್ತಿತ್ತು. ಅಷ್ಟೂ ಬ್ರೋಕರ್​ಗಳ ಮೂಲಕ ಹಣ ಕೊನೆಗೆ ನೇಮಕಾತಿ ವಿಭಾಗದ ಅಧಿಕಾರಿಗಳ ಕೈಗೆ ಸೇರ್ತಿತ್ತು. ನಂತರ ಒಎಂಆರ್ ಶೀಟ್ ತಿದ್ದುವುದು ಹಾಗೂ ಹೊಸ ಒಎಂಆರ್ ಶೀಟ್ ಇಡುವ ಮೂಲಕ ಕೃತ್ಯ ಎಸಗುತಿದ್ದರು. ಅಭ್ಯರ್ಥಿಗಳಿಂದ ನೇಮಕಾತಿ ವಿಭಾಗದಲ್ಲಿ ಕೆಲಸ ಆಗುವವರೆಗೆ ಹಲವರ ಕೈ ಬದಲಾವಣೆ ಆಗಿದೆ. ಹೀಗಾಗಿ ಅಭ್ಯರ್ಥಿಗಳು, ಬ್ರೋಕರ್​ಗಳು, ನೇಮಕಾತಿ ವಿಭಾಗದ ಅಧಿಕಾರಿಗಳನ್ನು ಸಿಐಡಿ ಎಲ್ಲರ ಮ್ಯಾಪಿಂಗ್ ಮಾಡುತ್ತಿದ್ದಾರೆ. ಎಷ್ಟೋ ಭಾರಿ ಓರ್ವ ಬ್ರೋಕರ್​ಗೆ ಯಾವ ಅಭ್ಯರ್ಥಿಗೆ ಕೆಲಸ ಮಾಡಿದ್ದಿನಿ ಅನ್ನೊದೆ ಗೊತ್ತಿಲ್ಲಾ.

PSI ಹಗರಣದ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪಿಸಲು ಚಿಂತನೆ; ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣದ ವಿಚಾರಣೆ ನಡೆಸಲು ವಿಶೇಷ ಕೋರ್ಟ್ (Special Court) ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಶಿವಮೊಗ್ಗದಲ್ಲಿ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಾಹಿತಿ ನೀಡಿದ್ದಾರೆ. ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ಆಗಲೆಂಬುದು ನನ್ನ ಅಪೇಕ್ಷೆ. ತನಿಖೆ ಮುಗಿದ ಬಳಿಕ ಈ ಬಗ್ಗೆ ಯೋಚಿಸುತ್ತೇವೆ. ಸ್ಪೆಷಲ್ ಕೋರ್ಟ್ ಬಗ್ಗೆ ವಿನಂತಿ ಮಾಡುತ್ತೇನೆ, ಏನಾಗುತ್ತೆ ನೋಡೋಣ ಎಂದರು. ಹೊಸದಾಗಿ ನಡೆಯುವ ಪಿಎಸ್ಐ ಪರೀಕ್ಷೆ ಬಗ್ಗೆ ದಿನಾಂಕ ನಿಗದಿ ಆಗಿಲ್ಲ. ಕೋರ್ಟ್ನಲ್ಲಿ ಪ್ರಕರಣ ಇರುವುದರಿಂದ ಸ್ವಲ್ಪ ದಿನ ಕಾಯಬೇಕಿದೆ ಅಂತ ಸಚಿವರು ತಿಳಿಸಿದರು.

Also Read:

ಬೈಕ್​​ಗಳ ನಡುವೆ ಡಿಕ್ಕಿ-ನಿವೃತ್ತ ಶಿಕ್ಷಕ ಸ್ಥಳದಲ್ಲೇ ದುರ್ಮರಣ, ಗಾಂಜಾ‌ ಮತ್ತಿನಲ್ಲಿ ತ್ರಿಪಲ್ ರೈಡಿಂಗ್ ಮಾಡ್ತಿದ್ದ ಯುವಕರು

Also Read: 

ಶಾಸಕ ಜಮೀರ್ ಅಹಮದ್ ಮನೆ ಖರೀದಿಗೆ, ಮೂರೂವರೆ ಕೋಟಿ ಸಾಲ ಕೊಟ್ಟಿದ್ದು ಉರುಳಾಯ್ತಾ? ಇಡಿ ದಾಳಿ ಬಗ್ಗೆ ಕೆಜಿಎಫ್ ಬಾಬು ಹೇಳಿದ್ದೇನು?

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:19 pm, Mon, 30 May 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?