AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಸೇರಿದ 545 ಪಿಎಸ್​ಐ ನೇಮಕಾತಿ ಅಕ್ರಮದ ತನಿಖಾ ವರದಿ

ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಇಂದು (ಜ.22) ರಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಸೇರಿದ 545 ಪಿಎಸ್​ಐ ನೇಮಕಾತಿ ಅಕ್ರಮದ ತನಿಖಾ ವರದಿ
ಸಿಎಂ ಸಿದ್ದರಾಮಯ್ಯ
ಅನಿಲ್​ ಕಲ್ಕೆರೆ
| Edited By: ವಿವೇಕ ಬಿರಾದಾರ|

Updated on:Jan 22, 2024 | 12:52 PM

Share

ಬೆಂಗಳೂರು, ಜ.22: ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ (545 PSI Recruitment Scam) ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಇಂದು (ಜ.22) ರಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ತನಿಖಾ ವರದಿಯನ್ನು ನೀಡಿದೆ. ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 545 PSI ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಕರಣದ ಮರು ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸರ್ಕಾರದ ನಿರ್ದೇಶನದಂತೆ ವಿಚಾರಣಾ ಆಯೋಗವು PSI ನೇಮಕಾತಿಯ ಅಕ್ರಮದ ವರದಿ‌ ಸಿದ್ದಪಡಿಸಿದೆ. ಪ್ರಕರಣದಲ್ಲಿ ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳ ಬಂಧನವಾಗಿದೆ. ಪ್ರಭಾವಿ ರಾಜಕೀಯ ಮುಖಂಡರೂ ಭಾಗಿಯಾಗಿದ್ದಾರೆ ಎಂಬ ಆರೋಪದಡಿ. ಕೆಲವು ರಾಜಕಾರಣಿಗಳಿಗೂ ವಿಚಾರಣಾ ಆಯೋಗ ನೋಟಿಸ್ ನೀಡಿತ್ತು.

545 ಪಿಎಸ್​ಐ ನೇಮಕಾತಿ ಹಗರಣದ ಹಿನ್ನೆಲೆ

545 ಪಿಎಸ್​ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಇದನ್ನೂ ಓದಿ: ಪಿಎಸ್​ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಸಬ್​ಇನ್ಸ್​ಪೆಕ್ಟರ್ ಸಿಸಿಬಿ​ ವಶಕ್ಕೆ

ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು. 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್​ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್​ಗಳ ಹಂತದಲ್ಲಿಯೂ ಕನಿಷ್ಠ 10 ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್​ರನ್ನು ಬಂಧಿಸಲಾಗಿತ್ತು. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಕಳೆದ ಸರ್ಕಾದ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Mon, 22 January 24

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್